ಮೈಸೂರು: ಅಂತಾರಾಷ್ಟ್ರೀಯ ಸರೋದ್ ವಾದಕ ಪಂಡಿತ್ ಡಾ.ರಾಜೀವ್ ತಾರಾನಾಥ್ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾನಿಲ ಯವು ಸೋಮವಾರ ಮೈಸೂರಿನ ಅವರ ನಿವಾಸದಲ್ಲಿ `ನಾಡೋಜ’ ಪದವಿ ನೀಡಿ, ಗೌರವಿಸಿತು. ಮೈಸೂರಿನ ಸರಸ್ವತಿ ಪುರಂನಲ್ಲಿರುವ ಪಂಡಿತ್ ರಾಜೀವ್ ತಾರಾನಾಥ್ ಮನೆಯ ಮುಂದೆ ಇಂದು ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಸಂಗೀತ ಮತ್ತು ಸಾಹಿತ್ಯ ಕ್ಷೇತ್ರದ ಪ್ರಮುಖರ ಸಮ್ಮುಖದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾ ನಿಲಯದ ಕುಲಪತಿ ಡಾ.ಮಲ್ಲಿಕಾ ಎಸ್. ಘಂಟಿ ಅವರು ಪಂಡಿತ್ ಡಾ.ರಾಜೀವ್ ತಾರಾನಾಥ್ ಅವರಿಗೆ ನಾಡೋಜ ಪದವಿ ಪ್ರದಾನ ಮಾಡಿದರು….