ಕುಶಾಲನಗರ: ಕೊಡಗು ಜಿಲ್ಲೆಯಲ್ಲಿ ಕಳೆದ ಆಗಸ್ಟ್ ನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಹಾರಂಗಿ ಜಲಾನಯನ ಪ್ರದೇಶದಲ್ಲಿ ಅಪಾರ ಪ್ರಮಾಣ ದಲ್ಲಿ ಭೂಕುಸಿತ ಸಂಭವಿಸಿದ್ದು, ಬೆಟ್ಟಗುಡ್ಡಗಳ ಮಣ್ಣು ನದಿ ನೀರಿನೊಂದಿಗೆ ಮಿಶ್ರಣಗೊಂಡು ಹಾರಂಗಿ ಜಲಾ ಶಯದ ಒಡಲು ಸೇರುವ ಹಿನ್ನೆಲೆಯಲ್ಲಿ ಎಷ್ಟು ಪ್ರಮಾ ಣದಲ್ಲಿ ಹೂಳು ತುಂಬಿದೆ ಎಂಬುದನ್ನು ಪತ್ತೆ ಹಚ್ಚಲು ಇದೀಗ ಹಾರಂಗಿ ಜಲಾನಯನ ಪ್ರದೇಶದಲ್ಲಿ ಸರ್ವೇ ಕಾರ್ಯ ಭರದಿಂದ ನಡೆಯುತ್ತಿದೆ. ರಾಜ್ಯ ಸಮ್ಮಿಶ್ರ ಸರ್ಕಾರ ಹಾರಂಗಿ ಜಲಾನಯನ ಪ್ರದೇಶ ಹಾಗೂ ನದಿ ಪಾತ್ರಗಳ ಪುನಶ್ಚೇತನ ಕಾಮ…
ಹಾರಂಗಿ ಜಲಾಶಯದಲ್ಲಿ ಕೆಸರುಮಯ
January 10, 2019ಕುಶಾಲನಗರ: ಕೊಡಗು ಜಿಲ್ಲೆಯಲ್ಲಿರುವ ಹಾರಂಗಿ ಜಲಾಶಯದ ನೀರಿನ ಮಟ್ಟ ಕ್ರಮೇಣ ಇಳಿಮುಖವಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 8.5 ಟಿಎಂಸಿ ಇದ್ದು, ಪ್ರಸ್ತುತ ಜಲಾಶಯದ ನೀರಿನ ಮಟ್ಟ 0.3 ಟಿಎಂಸಿಗೆ ಇಳಿಮುಖ ವಾಗಿದೆ. ಪ್ರಸ್ತುತ ಜಲಾಶಯಕ್ಕೆ ಒಳಹರಿವು ಇಂದು ಬೆಳಗಿನ ದಾಖಲೆ ಪ್ರಕಾರ 103 ಕ್ಯೂಸೆಕ್, ಹೊರಹರಿವು 15ಕ್ಯೂಸೆಕ್. ಜಲಾಶಯವು ಅತೀ ಹೆಚ್ಚು ಕೆಸರಿನಿಂದ ಕೂಡಿದ್ದು, ಹೆಚ್ಚಿನ ನೀರು ಸಂಗ್ರಹಣಾ ಸಾಮಥ್ರ್ಯವನ್ನು ಕಳೆದುಕೊಂಡಿದೆ. ಜಲಾ ಶಯದ ನೀರಿನ ಮಟ್ಟ ಗಣನೀಯವಾಗಿ ಇಳಿಮುಖವಾಗುತ್ತಿರುವುದರಿಂದ ಕುಶಾಲ ನಗರ, ಕೂಡಿಗೆ ಮತ್ತು ಸುತ್ತಮುತ್ತಲಿನ…
ಹಾರಂಗಿ ಬಳಿ ಅಕ್ರಮ ಶ್ರೀಗಂಧ ಸಾಗಾಟ ಮಾಲು ಸಮೇತ ವಾಹನ ವಶ; ಆರೋಪಿಗಳು ಪರಾರಿ
December 4, 2018ಕುಶಾಲನಗರ: ಸಮೀಪದ ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ತೂರು ಮೀಸಲು ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿ ಗಳು ಕಾರ್ಯಾಚರಣೆ ನಡೆಸಿ ಮಾಲು ಸಮೇತ ಬೈಕ್ ವಶಪಡಿಸಿಕೊಂಡಿದ್ದಾರೆ. ಅತ್ತೂರು ಶಾಖೆಯ ಗುಡ್ಡೆಹೊಸೂರು – ಹಾರಂಗಿಗೆ ಹೋಗುವ ರಸ್ತೆಯಲ್ಲಿ ಬೈಕ್ ನಲ್ಲಿ ಶ್ರೀಗಂಧದ ತುಂಡುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ಸಾಗಿಸುತ್ತಿದ್ದ ಸಂದರ್ಭ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಿಬ್ಬಂದಿಗಳು ದಾಳಿ ಮಾಡಿದಾಗ ಶ್ರೀಗಂಧದ ತುಂಡುಗಳನ್ನು ಹಾಗೂ ಬೈಕ್ ಅನ್ನು ಬಿಟ್ಟು…
ಹಾರಂಗಿ ನಾಲೆಯಲ್ಲಿ ವ್ಯಾನ್ ಮುಳುಗಿ ಸಾವನ್ನಪ್ಪಿದ್ದ ಒಂದೇ ಕುಟುಂಬದ ನಾಲ್ವರ ಅಂತ್ಯಕ್ರಿಯೆ
August 8, 2018ನಾಪೋಕ್ಲು: ಕುಶಾಲನಗರದ ಸಮೀಪ ಹಾರಂಗಿ ನಾಲೆಯಲ್ಲಿ ಮುಳುಗಿ ಮೃತ ಪಟ್ಟ ಇಲ್ಲಿನ ಇಂದಿರಾನಗರದ ನಿವಾಸಿ ಪಳನಿಸ್ವಾಮಿ ಮತ್ತು. ಕುಟುಂಬದ ನಾಲ್ವರ ಅಂತ್ಯಕ್ರಿಯೆಯು ನಾಪೋಕ್ಲು ಕಾವೇರಿ ನದಿ ತೀರದ ಹಿಂದು ರುದ್ರಭೂಮಿಯಲ್ಲಿ ಮಧ್ಯಾಹ್ನ ನೆರವೇರಿತು. ಈ ಸಂದರ್ಭದಲ್ಲಿ ನಾಪೋಕ್ಲು ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟು ಗಳನ್ನು ಮುಚ್ಚಿ ಮೃತರಿಗೆ ಸಂತಾಪ ಸೂಚಿಸಲಾಯಿತು. ಜನಪ್ರತಿನಿಧಿಗಳು ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಸೋಮವಾರ ಬೆಳಿಗ್ಗೆ ನಾಪೋಕ್ಲು ವಿನಿಂದ ತಮ್ಮ ತಾಯಿಯ ಊರಾದ ಮುತ್ತಿನ ಮುಳ್ಳುಸೋಗೆ ಗ್ರಾಮಕ್ಕೆ ಪಳನೀಸ್ವಾಮಿ ತಮ್ಮ ಒಮ್ನಿ…
ಇಂದು ಹಾರಂಗಿಗೆ ಸಿಎಂ ಕುಮಾರಸ್ವಾಮಿ ಬಾಗಿನ
July 19, 2018ಮಡಿಕೇರಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜು.19 ರಂದು ಮಧ್ಯಾಹ್ನ 3 ಗಂಟೆಗೆ ಹಾರಂಗಿ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಲಿದ್ದಾರೆ. ಮಾಜಿ ಪ್ರಧಾನಮಂತ್ರಿ ಹಾಗೂ ಸಂಸದ ರಾದ ಎಚ್.ಡಿ.ದೇವೇಗೌಡ, ಉಪ ಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್, ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಹಾಗೂ ರೇಷ್ಮೆ ಖಾತೆ ಸಚಿವ ಸಾ.ರಾ.ಮಹೇಶ್, ಶಾಸಕ ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಜಿಪಂ ಅಧ್ಯಕ್ಷ ಬಿ.ಎ.ಹರೀಶ್, ಉಪಾ ಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಶಾಸಕ ರಾದ ಅಡಗೂರು ಎಚ್.ವಿಶ್ವನಾಥ್, ಡಾ.ಎ.ಟಿ. ರಾಮಸ್ವಾಮಿ,…
ನಾಳೆ ಸಿಎಂ ಕುಮಾರಸ್ವಾಮಿಯಿಂದ ಹಾರಂಗಿಗೆ ಬಾಗಿನ
July 18, 2018ಕುಶಾಲನಗರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜು.19 ರಂದು ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿ ಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನೀರಾವರಿ ಇಲಾಖೆಯಿಂದ ಮುಖ್ಯಮಂತ್ರಿ ಸ್ವಾಗತಕ್ಕೆ ಭರದ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಹಾರಂಗಿ ಜಲನಯನ ಪ್ರದೇಶದಲ್ಲಿ ವ್ಯಾಪಕ ವಾಗಿ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಇಂದು ಜಲಾ ಶಯದಿಂದ 21423 ಕ್ಯುಸೆಕ್ಸ್ ನೀರನ್ನು ನದಿಗೆ ಹರಿಬಿಡಲಾಗಿದೆ. ಇದೀಗ ಮೈದುಂಬಿರುವ ಹಾರಂಗಿ ಜಲಾಶಯಕ್ಕೆ ಗುರುವಾರ ಸಂಜೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿ ಬಾಗಿನ…
ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆ: ನದಿ ತೀರದ ಜನರಿಗೆ ಮುನ್ನೆಚ್ಚರಿಕೆ
July 14, 2018ಮಂಡ್ಯ: ಡ್ಯಾಂ ಮತ್ತು ನದಿಗಳ ಸನಿಹದಲ್ಲಿರುವ ಜನರೆ ಎಚ್ಚರವಾಗಿರಿ. ನಿರಂತರ ಭಾರೀ ಮಳೆಯಿಂದಾಗಿ ಕಾವೇರಿ ನದಿ ಹರಿಯುವ ಡ್ಯಾಂಗಳು ಭರ್ತಿಯಾಗಿದೆ. ಶನಿವಾರ ಅಥವಾ ಭಾನುವಾರ ಜಲಾಶಯಗಳ ನೀರನ್ನು ನದಿಗೆ ಬಿಡುವ ಸಾಧ್ಯತೆ ಇದೆ. ಈಗಾಗಲೇ ಕೆಆರ್‌ಎಸ್, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ಯಾವುದೇ ಸಮಯದಲ್ಲಿ ಡ್ಯಾಂ ನಿಂದ ನೀರನ್ನು ನದಿಗೆ ಬಿಡುವ ಸಾಧ್ಯತೆಯಿದೆ. ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಲಿದ್ದು, ವಿಶೇಷವಾಗಿ ರಾಮನಗರ, ಮಂಡ್ಯ, ಹಾಸನ ಹಾಗೂ ಮೈಸೂರಿನ ಕೆಲ ಪ್ರದೇಶಗಳಲ್ಲಿ ಪ್ರವಾಹ ಭೀತಿ ಉಂಟಾಗಲಿದೆ….
ಕಾವೇರಿ ಕಣಿವೆಯ ಹಾರಂಗಿ ಜಲಾಶಯ ಭರ್ತಿ
July 8, 2018ಕುಶಾಲನಗರ: ಕೊಡಗಿನಲ್ಲಿ ಉತ್ತಮ ಮಳೆ ಬೀಳುತ್ತಿರುವ ಹಿನ್ನಲೆ ಯಲ್ಲಿ ಹಾರಂಗಿ ಜಲಾಶಯ ಭರ್ತಿಯಾ ಗಿದ್ದು, ಶನಿವಾರ ಸಂಜೆ ಜಲಾಶಯದ ನಾಲ್ಕು ಕ್ರೆಸ್ಟ್ ಗೇಟ್‍ಗಳಿಂದ ನದಿಗೆ 1200 ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದೆ. ಕಾವೇರಿ ಕಣಿವೆಯ ಪ್ರಮುಖ ಜಲಾ ಶಯಗಳಲ್ಲಿ ಒಂದಾದ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿ ಇದ್ದು, ಜಲಾ ಶಯದ ಇಂದಿನ ನೀರಿನ ಮಟ್ಟ 2856 ಅಡಿ (ಸಂಜೆ 5 ಗಂಟೆಗೆ) ಇತ್ತು. ಅಣೆಕಟ್ಟೆ ಸುರಕ್ಷತೆ ದೃಷ್ಟಿಯಿಂದ ನೀರಿನ ಮಟ್ಟ ಕಾಯ್ದುಕೊಳ್ಳಲಾಗುತ್ತಿದೆ. ಜಲಾಶಯಕ್ಕೆ 24450 ಕ್ಯೂಸೆಕ್…
ಹಾರಂಗಿ ಜಲಾಶಯ ಭರ್ತಿಗೆ 20 ಅಡಿ ಬಾಕಿ
June 27, 2018ಕುಶಾಲನಗರ: ಕಾವೇರಿ ಕಣಿವೆ ಪ್ರಮುಖ ಜಲಾಶಯಗಳಲ್ಲಿ ಒಂದಾಗಿ ರುವ ಹಾರಂಗಿ ಜಲಾಶಯ ಭರ್ತಿಗೆ ಮಂಗಳ ವಾರ 20 ಅಡಿ ಮಾತ್ರ ಬಾಕಿ ಇದೆ. ಗರಿಷ್ಠ 2859 ಅಡಿ ಸಾಮಥ್ರ್ಯದಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆಗೆ 2838.52 ನೀರು ಸಂಗ್ರಹಗೊಂಡಿದ್ದು, 4.02 ಟಿಎಂಸಿ ನೀರು ಇದೆ. ಅಣೆಕಟ್ಟೆಗೆ ಒಳಹರಿವು 1252ಇದ್ದು, 30 ಕ್ಯೂಸೆಕ್ಸ್ ನೀರು ಹೊರ ಹರಿವು ಇದೆ.ಜಲಾಶಯ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ 1.02 ಎಂ.ಎಂ. ಇದೆ. ಕಳೆದ ವರ್ಷ ಇದೇ ಅವಧಿಗೆ 2817 ಅಡಿ ನೀರು ಸಂಗ್ರಹ…
ವಿರಾಜಪೇಟೆ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಇಳಿಮುಖ
June 18, 2018ವಿರಾಜಪೇಟೆ: ವಿರಾಜಪೇಟೆ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಇಳಿ ಮುಖಗೊಂಡಿದ್ದು, ಬೇತ್ರಿ ಗ್ರಾಮದಲ್ಲಿ ಕಾವೇರಿ ಹೊಳೆ ನೀರಿನ ಪ್ರಮಾಣ ಕಡಿಮೆಯಾಗಿದೆ. ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಬಿಸಿಲಿನ ವಾತಾವರಣ ಕಂಡು ಬಂತು. ತಾಲೂಕು ತಹಸಿಲ್ದಾರ್ ಆರ್.ಗೋವಿಂದ ರಾಜು ಅವರು ತಾಲೂಕಿನಾದ್ಯಂತ ಪ್ರವಾಸ ಕೈಗೊಂಡಿದ್ದು, ಜಲಾವೃತ ಗೊಂಡ ಗದ್ದೆ, ತೋಡುಗಳಲ್ಲಿಯೂ ನೀರು ಇಳಿಮುಖ ವಾಗುತ್ತಿದೆ. ಕೊಡಗು-ಕೇರಳ ಗಡಿ ಪ್ರದೇಶ ವಾದ ಮಾಕುಟ್ಟ ಅಂತಾರಾಜ್ಯ ಹೆದ್ದಾರಿ ಯು ಹಾನಿಗೊಳಗಾದ ಸಂದರ್ಭ ಉಪ ಆಯುಕ್ತ ರಮೇಶ್ ಕೋನರೆಡ್ಡಿ ಅವ ರೊಂದಿಗೆ ಭೇಟಿ…