Tag: Hassan DC

ಜಿಲ್ಲಾಧಿಕಾರಿಯಿಂದ ಅಹವಾಲು ಸ್ವೀಕಾರ
ಹಾಸನ

ಜಿಲ್ಲಾಧಿಕಾರಿಯಿಂದ ಅಹವಾಲು ಸ್ವೀಕಾರ

October 11, 2018

ಹಾಸನ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ನಗರಸಭೆ ಸಭಾಂಗಣದಲ್ಲಿಂದು ನಗರ ವ್ಯಾಪ್ತಿ ಜನತೆಯ ಕುಂದು ಕೊರತೆಗಳ ಕುರಿತು ಅಹವಾಲು ಸ್ವೀಕರಿಸಿದರು. ಹಾಸರ ನಗರಸಭೆ ನೇತೃತ್ವದಲ್ಲಿ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ 100ಕ್ಕೂ ಅಧಿಕ ಮಂದಿ ಪಾಲ್ಗೊಂಡು, ವೈಯಕ್ತಿಕ ಹಾಗೂ ಸಾರ್ವಜನಿಕರ ಸಮಸ್ಯೆಗಳ ಬಗ್ಗ್ನೆ ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಎಲ್ಲರ ಅಹವಾಲುಗಳನ್ನು ಸಮಾಧಾನದಿಂದ ಆಲಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು, ನ್ಯಾಯಸಮ್ಮತ ಬೇಡಿಕೆಗಳನ್ನು ಕಾಲಮಿತಿಯೊಳಗೆ ಇತ್ಯರ್ಥ ಪಡಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಅಧಿಕಾರಿಗಳು ಇನ್ನಷ್ಟು ಜನಪರವಾಗಿ ಕಾರ್ಯ ನಿರ್ವಹಿಸಬೇಕು….

ಕೌಶಲ್ಯ ಕರ್ನಾಟಕ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ
ಹಾಸನ

ಕೌಶಲ್ಯ ಕರ್ನಾಟಕ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

September 8, 2018

ಹಾಸನ: ಯುವ ಸಮುದಾಯಕ್ಕೆ ಹೊಸ ಆಶಾ ಕಿರಣವಾಗಿರುವ ಕೌಶಲ್ಯ ಕರ್ನಾಟಕ ಯೋಜನೆ ಸಮಪರ್ಕವಾಗಿ ಜಾರಿಯಾಗಬೇಕು. ಈ ನಿಟ್ಟಿನಲ್ಲಿ ವ್ಯಾಪಕ ಪ್ರಚಾರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆಯಿಂದ ನಡೆದ ಪ್ರಥಮ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರ ವೃತ್ತಿ ಕೌಶಲ್ಯ ತರಬೇತಿ ಹಾಗೂ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ ಹಲವು ಯೋಜನೆಗಳನ್ನು…

ಅತಿವೃಷ್ಠಿ ಹಾನಿ ಸ್ಪಷ್ಟ ವರದಿ ನೀಡಲು ಜಿಲ್ಲಾಧಿಕಾರಿ ಸೂಚನೆ
ಹಾಸನ

ಅತಿವೃಷ್ಠಿ ಹಾನಿ ಸ್ಪಷ್ಟ ವರದಿ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2018

ಹಾಸನ: ಜಿಲ್ಲೆಯಲ್ಲಿ ಅತಿವೃಷ್ಠಿ ಯಿಂದ ಉಂಟಾಗಿರುವ ಜನ ಜಾನುವಾರು ಹಾಗೂ ವೈಯಕ್ತಿಕ ಮತ್ತು ಸಾರ್ವಜನಿಕ ಆಸ್ತಿಗಳ ಹಾನಿಗೆ ಪ್ರಕೃತಿ ವಿಕೋಪ ನಿಧಿ ಯಿಂದ ಪರಿಹಾರ ನೀಡಬಹುದಾಗಿದ್ದು, ಎಲ್ಲವನ್ನು ಸ್ಪಷ್ಟವಾಗಿ ಅಂದಾಜಿಸಿ ಕೂಡಲೇ ವರದಿ ನೀಡುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತಮ್ಮ ಕಚೇರಿ ಸಭಾಂಗಣದಲ್ಲಿಂದು ತಹಶೀಲ್ದಾರು ಹಾಗೂ ಪಪಂ ಮುಖ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಅವರು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಲೆನಾಡು ಸೇರಿದಂತೆ ಜಿಲ್ಲೆಯ ವಿವಿಧೆಡೆ ಹಲವು ರೀತಿಯ…

ವಿದ್ಯಾರ್ಥಿ ಸ್ನೇಹಿ ಗ್ರಂಥಾಲಯ ನಿರ್ಮಿಸಲು ಡಿಸಿ ಸೂಚನೆ
ಹಾಸನ

ವಿದ್ಯಾರ್ಥಿ ಸ್ನೇಹಿ ಗ್ರಂಥಾಲಯ ನಿರ್ಮಿಸಲು ಡಿಸಿ ಸೂಚನೆ

July 20, 2018

ಹಾಸನ: ‘ಜಿಲ್ಲೆಯಲ್ಲಿನ ಗ್ರಂಥಾಲಯಗಳು ಸಾರ್ವಜನಿಕರಿಗೆ ಇನ್ನಷ್ಟು ಅನುಕೂಲಕಾರಿಯಾಗುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಪುಸ್ತಕಾಭಿರುಚಿ ಬೆಳೆಸುವ ಕೇಂದ್ರವಾಗಿ ಪರಿವರ್ತನೆ ಯಾಗಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸಭೆ ನಡೆಸಿದ ಅವರು, ನಗರ ಹಾಗೂ ಗ್ರಾಮೀಣ ಮಟ್ಟ ದಲ್ಲಿ ಗ್ರಂಥಾಲಯ ಜ್ಞಾನ ಭಂಡಾರ ಗಳಾಗುವ ಜೊತೆಗೆ, ವಿದ್ಯಾರ್ಥಿ ಸ್ನೇಹಿ ಯಾಗಿರಬೇಕು. ಅದಕ್ಕೆ ಅಧಿಕಾರಿಗಳು ಅಗತ್ಯವಾದ ಪೂರಕ ವಾತಾವರಣ ಕಲ್ಪಿಸಿ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಮಟ್ಟದ ಬಹು ತೇಕ…

ಅರಸೀಕೆರೆಯಲ್ಲಿ ಅಹವಾಲುಗಳ ಮಹಾಪೂರ
ಹಾಸನ

ಅರಸೀಕೆರೆಯಲ್ಲಿ ಅಹವಾಲುಗಳ ಮಹಾಪೂರ

July 17, 2018

ಅರಸೀಕೆರೆ: ನಗರದಲ್ಲಿಂದು ಸಾರ್ವ ಜನಿಕ ಅಹವಾಲು ಸ್ವೀಕಾರ ಸಭೆ ನಡೆಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಅಹ ವಾಲುಗಳ ಮಹಾಪೂರವೇ ಹರಿದು ಬಂತು. ಸಭೆಯಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಭಾಗವಹಿಸಿ, ಸಾರ್ವಜನಿಕರ ಸಮಸ್ಯೆ ಮನವರಿಕೆ ಮಾಡಿ ಕೊಟ್ಟಿದ್ದು ವಿಶೇಷವಾಗಿತ್ತು. ನಗರದ ವೆಂಕಟೇಶ್ವರ ಕಲಾಭವನದಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆಯಲ್ಲಿ 573 ಅರ್ಜಿಗಳು ಸಲ್ಲಿಕೆಯಾದವು. ಸಭೆ ಅಂತ್ಯದವರೆಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಜರಿದ್ದು, ಜನತೆಯ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಗಮನ ಸೆಳೆದರಲ್ಲದೆ, ಸ್ವತಃ ಕೆಲ ಸಮಸ್ಯೆಗಳ ಬಗ್ಗೆ ಕೈಗೊಂಡಿರುವ…

ನಿಯಮಾನುಸಾರ ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ
ಹಾಸನ

ನಿಯಮಾನುಸಾರ ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

July 14, 2018

ಅರಕಲಗೂಡು: ಪಟ್ಟಣದಲ್ಲಿಂದು ಸಾರ್ವಜನಿಕರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿ ಗಳಿಗೆ ಸೂಚನೆ ನೀಡಿದರು. ಪಟ್ಟಣದ ಶಿಕ್ಷಕರ ಭವನದಲ್ಲಿ ಸುಮಾರು 4 ಗಂಟೆಗಳಿಗೂ ಅಧಿಕ ಕಾಲ 200ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ, ಸರ್ವೇ, ಪೋಡಿ ದುರಸ್ತಿ, ಭೂ ಮಂಜೂರಾತಿ, ತಿದ್ದುಪಡಿ ಸೇರಿದಂತೆ ಹಲವರು ತಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಸರಿಪಡಿಸಿಕೊಡುವಂತೆ ಸಲ್ಲಿಸಿದ ವೈಯಕ್ತಕ ಮನವಿಗಳನ್ನು ಆಲಿಸಿದರು. ಆಶ್ರಯ ಮನೆ ಹಂಚಿಕೆ, ಸರ್ಕಾರಿ ಜಮೀನು ಒತ್ತುವರಿ ತೆರವು,…

ಅಂಗನವಾಡಿ ನೌಕರರಿಂದ ಡಿಸಿ ಕಚೇರಿ ಚಲೋ
ಹಾಸನ

ಅಂಗನವಾಡಿ ನೌಕರರಿಂದ ಡಿಸಿ ಕಚೇರಿ ಚಲೋ

July 11, 2018

ಹಾಸನ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವ ದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಸಾವಿರಾರು ಕಾರ್ಯಕರ್ತರು ಡಿಸಿ ಕಚೇರಿ ಚಲೋ ನಡೆಸಿದರು. ನಗರದ ಹೇಮಾವತಿ ಪ್ರತಿಮೆ ಬಳಿ ಹಿರಿಯ ಸಂಘಟಕಿ ಸೌಭಾಗ್ಯ ಬೃಹತ್ ಬ್ಯಾನರ್‍ನಲ್ಲಿ ಸಹಿ ಮಾಡುವುದರ ಮೂಲಕ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಅಲ್ಲಿಂದ ಭಾರೀ ಮೆರವಣಿಗೆ ಹೊರಟ ಪ್ರತಿಭಟ ನಾಕಾರರು, ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರಲ್ಲದೆ, ಆವರಣದಲ್ಲಿ ಜಮಾವಣೆಗೊಂಡು ಬೇಡಿಕೆ ಈಡೇರಿಕೆಗೆ ಘೋಷಣೆ ಕೂಗಿದರು. ಐಸಿಡಿಎಸ್ ಯೋಜನೆಯಡಿಯಲ್ಲಿ ಕೆಲಸ…

ಆಲೂರಿನಲ್ಲಿ ಡಿಸಿಯಿಂದ ಸಾರ್ವಜನಿಕರ ಕುಂದು ಕೊರತೆ ಸ್ವೀಕಾರ
ಹಾಸನ

ಆಲೂರಿನಲ್ಲಿ ಡಿಸಿಯಿಂದ ಸಾರ್ವಜನಿಕರ ಕುಂದು ಕೊರತೆ ಸ್ವೀಕಾರ

July 8, 2018

ಆಲೂರು: ತಾಲೂಕು ಕಚೇರಿಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧ್ಯಕ್ಷತೆಯಲ್ಲಿ ನಡೆದ ಸಾರ್ವ ಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆಯಲ್ಲಿ 190ಕ್ಕೂ ಹೆಚ್ಚು ದೂರು ಸಲ್ಲಿಕೆಯಾದವು. ಬೆಳಿಗ್ಗೆಯಿಂದಲೇ ನೂರಾರು ಮಂದಿ ಹಾಜರಾಗಿ ಜಿಲ್ಲಾಧಿಕಾರಿ ಅವರ ಮುಂದೆ ತಮ್ಮ ಅಳಲು ತೋಡಿಕೊಂಡರು. ರೈತರ ಜಮೀನಿನ ಸರ್ವೇ ಕಾರ್ಯ, ಜಮೀನು ಮಂಜೂರಾತಿ, ಯೋಜನಾ ನಿರಾಶ್ರಿತರಿಗೆ ಜಮೀನು ಹಕ್ಕು ಪತ್ರ ವಿತರಣೆ ಸೇರಿದಂತೆ ವಿವಿಧ ರೀತಿಯ 190ಕ್ಕೂ ಅಧಿಕ ಅರ್ಜಿ ಗಳು ಸಲ್ಲಿಕೆಯಾದವು. ಪಟ್ಟಣದ ಎಪಿಎಂಸಿ ಮಾರುಕಟ್ಟೆ, ಅಗ್ನಿಶಾಮಕ ಠಾಣೆ, ಕೆಎಸ್‍ಆರ್‍ಟಿಸಿ…

ಜಿಟಿಜಿಟಿ ಮಳೆಯಲ್ಲೂ ಡಿಸಿಗೆ ಅಹವಾಲು ಸಲ್ಲಿಕೆ
ಹಾಸನ

ಜಿಟಿಜಿಟಿ ಮಳೆಯಲ್ಲೂ ಡಿಸಿಗೆ ಅಹವಾಲು ಸಲ್ಲಿಕೆ

July 7, 2018

ಬೇಲೂರು: ತಾಲೂಕು ಪ್ರವಾಸ ಮುಂದುವರೆಸಿರುವ ಡಿಸಿ ರೋಹಿಣಿ ಸಿಂಧೂರಿ ಪಟ್ಟಣದಲ್ಲಿಂದು ವಿವಿಧ ಇಲಾಖೆ ಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಆಲಿಸಿದರು. ಸುರಿಯುವ ಮಳೆ ಯಲ್ಲೂ ನೂರಾರು ಮಂದಿ ಜಿಲ್ಲಾಧಿಕಾರಿ ಬಳಿ ತಮ್ಮ ಅಳಲು ತೋಡಿಕೊಂಡರು. ಬೇಲೂರು ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸಾರ್ವಜನಿಕ ರಿಂದ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆಯಲ್ಲಿ ಸುಮಾರು ನಾಲ್ಕೂವರೆ ಗಂಟೆ ಕಾಲ ಸಾರ್ವಜನಿಕರಿಂದ 345ಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಯಿತು. ಬೆಳಿಗ್ಗೆಯಿಂದಲೇ ತುಂತುರು ರೀತಿ ಆರಂಭ ವಾದ ಮಳೆ ಸಭೆಗೆ ಅಡ್ಡಿ ಪಡಿಸಿತು….

ಜನಸಂಪರ್ಕ ಸಭೆ ಆರಂಭಿಸಿದ ಡಿಸಿ ರೋಹಿಣಿ ಸಿಂಧೂರಿ: ಸಾರ್ವಜನಿಕರಿಂದ ಭಾರೀ ಮೆಚ್ಚುಗೆ
ಹಾಸನ

ಜನಸಂಪರ್ಕ ಸಭೆ ಆರಂಭಿಸಿದ ಡಿಸಿ ರೋಹಿಣಿ ಸಿಂಧೂರಿ: ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

July 3, 2018

ಹಾಸನ: ತಾಲೂಕು ಆಡಳಿತಕ್ಕೆ ಚುರುಕು ನೀಡಲು ಮುಂದಾಗಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಾಲೂಕು ಕಚೇರಿಗಳಿಗೆ ಭೇಟಿ-ಪರಿಶೀಲನೆ ಸೇರಿದಂತೆ ಸಾರ್ವಜನಿಕ ಕುಂದು ಕೊರತೆ ಆಲಿಸುವ ಪ್ರಕ್ರಿಯೆ ಆರಂಭಿಸಿದ್ದು, ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ನಗರದ ತಾಲೂಕು ಕಚೇರಿಗೆ ಇಂದು ಬೆಳಿಗ್ಗೆ 10.30ಕ್ಕೆ ಭೇಟಿ ನೀಡಿದ ಜಿಲ್ಲಾಧಿ ಕಾರಿ, ಸುಮಾರು ಮೂರೂವರೇ ಗಂಟೆ ಕಾಲ ವಿವಿಧ ಇಲಾಖೆಯಲ್ಲಿ ಬಾಕಿ ಇರುವ ಕಡತಗಳ ವಿಲೇವಾರಿ ಬಗ್ಗೆ ಮಾಹಿತಿ ಪಡೆದು ಕೊಂಡರು. ನಂತರ ಜನರಿಂದ 150ಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಿ, ಅಹವಾಲು ಆಲಿಸಿದರು….

1 2
Translate »