Tag: Hassan

ನಾನು ಡಿಸಿಎಂ ಆಗಬೇಕೆನ್ನುವುದು ಜನರ ಬಯಕೆ: ಶ್ರೀರಾಮುಲು
ಹಾಸನ

ನಾನು ಡಿಸಿಎಂ ಆಗಬೇಕೆನ್ನುವುದು ಜನರ ಬಯಕೆ: ಶ್ರೀರಾಮುಲು

January 30, 2020

ಹಾಸನ, ಜ.29-ನಾನು ಉಪ ಮುಖ್ಯಮಂತ್ರಿ(ಡಿಸಿಎಂ) ಆಗಬೇಕೆಂಬುದು ನನ್ನ ಬೇಡಿಕೆಯಲ್ಲ. ಅದು ಸಮುದಾಯದ ಜನರ ಬಯಕೆ. ಈ ವಿಚಾರವಾಗಿ ಯಾರೊಂದಿಗೂ ನಾನು ಪ್ರಸ್ತಾಪ ಮಾಡಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಚನ್ನರಾಯಪಟ್ಟಣದ ಪಿ.ಯು. ಕಾಲೇಜು ಮೈದಾನದ ಹೆಲಿಪ್ಯಾಡ್‍ನಲ್ಲಿ ಬುಧವಾರ ಬಂದಿಳಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಬಿಜೆಪಿ ನಿಷ್ಠಾವಂತ ಕಾರ್ಯಕರ್ತ. ಪಕ್ಷ ಅಧಿಕಾರಕ್ಕೆ ಬರಲು ನಾವೆಲ್ಲರೂ ಒಟ್ಟಾಗಿ ದುಡಿದಿದ್ದೇವೆ. ನಾನು ಡಿಸಿಎಂ ಆಗಬೇಕು ಎಂಬುದು ಜನರ ಬೇಡಿಕೆ. ಪಕ್ಷ ಏನೇ ತೀರ್ಮಾನ ಕೈಗೊಂಡರೂ…

ಮಹಾಪುರುಷರ ತತ್ವ ಪಾಲನೆ ಅವಶ್ಯ: ಶ್ವೇತಾ ದೇವರಾಜ್
ಹಾಸನ

ಮಹಾಪುರುಷರ ತತ್ವ ಪಾಲನೆ ಅವಶ್ಯ: ಶ್ವೇತಾ ದೇವರಾಜ್

January 22, 2020

ಹಾಸನ, ಜ.21-ಮಹಾಪುರುಷರ ಜಯಂತಿಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷೆ ಬಿ.ಎಸ್.ಶ್ವೇತಾ ದೇವರಾಜ್ ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿಂದು ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಂಬಿಗರ ಚೌಡಯ್ಯ 12ನೇ ಶತಮಾನದಲ್ಲಿ ವಚನ ಸಾಹಿತ್ಯಗಳ ಮೂಲಕ ಜಾತಿ ಪದ್ಧತಿಯ ವಿರುದ್ಧ ಹೋರಾಡಿದರು. ಅವರ ಹಾದಿಯನ್ನು ಅನುಸರಿಸಿ ನಾವೆಲ್ಲರೂ ಉತ್ತಮ ಸಮಾಜವನ್ನು ನಿರ್ಮಿಸಲು ಮುಂದಾಗಬೇಕು ಎಂದರು. ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ,…

ಪ್ರವಾಹ ಸಂತ್ರಸ್ತರ ಮನೆ ನಿರ್ಮಾಣ ಶೀಘ್ರ ಪೂರ್ಣಗೊಳಿಸಲು ಸೂಚನೆ
ಹಾಸನ

ಪ್ರವಾಹ ಸಂತ್ರಸ್ತರ ಮನೆ ನಿರ್ಮಾಣ ಶೀಘ್ರ ಪೂರ್ಣಗೊಳಿಸಲು ಸೂಚನೆ

January 22, 2020

ಹಾಸನ,ಜ.21-ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರ ‘ಎ’ ಮತ್ತು ‘ಬಿ’ ಕೆಟಗರಿಯ ಮನೆಗಳಿಗೆ ಎರಡನೇ ಹಂತದ ಹಣ ಬಿಡುಗಡೆ ಮಾಡಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕಂದಾಯ ಇಲಾಖೆ ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‍ಕುಮಾರ್ ಸೂಚಿಸಿದ್ದಾರೆ. ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿ ಮಾತನಾಡಿದ ಅವರು, ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ, ಮೂಲಸೌಕರ್ಯಗಳ ದುರಸ್ತಿ ಕುರಿತ ವರದಿ ಪಡೆದರಲ್ಲದೆ, ಪ್ರವಾಹದಿಂದ ಉಂಟಾದ ಬೆಳೆ ಹಾನಿಗೆ ಪರಿಹಾರ, ಸಬ್ಸಿಡಿ ಸಾಲ ಸೌಲಭ್ಯ ವಿತರಣೆ ಹಾಗೂ 2020-21 ನೇ ಸಾಲಿನಲ್ಲಿ…

ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಕಾಳಜಿ ವಹಿಸಿ: ಸಚಿವ ಜೆ.ಸಿ.ಮಾಧುಸ್ವಾಮಿ
ಹಾಸನ

ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಕಾಳಜಿ ವಹಿಸಿ: ಸಚಿವ ಜೆ.ಸಿ.ಮಾಧುಸ್ವಾಮಿ

January 21, 2020

ಹಾಸನ,ಜ.20-ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದರ ಮೂಲಕ ಹೆಚ್ಚಿನ ಕಾಳಜಿ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ತಾವು ಜ.24ರಂದು ನಡೆಸಲಿರುವ ತ್ರೈಮಾಸಿಕ ಕೆಡಿಪಿ ಸಭೆಗೆ ಪೂರಕವಾಗಿ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿದ ಸಚಿವರು, ಜನಸಾಮಾನ್ಯರ ಶ್ರೇಯೋಭಿವೃದ್ಧಿಗೆ ರೂಪಿಸಿರುವ ಕಾರ್ಯಕ್ರಮಗಳನ್ನು ಕಾಲಮಿತಿಯೊಳಗೆ ತಲುಪಿಸುವಂತೆ ನಿರ್ದೇಶನ ನೀಡಿದರು. ಪ್ರಧಾನ ಮಂತ್ರಿ ಕೃಷಿಕ್ ಸಮ್ಮಾನ್ ಯೋಜನೆ ಹಾಗೂ ರಾಜ್ಯ ಸರ್ಕಾರದ ನೆರವು ಯೋಜನೆಗಳನ್ನು ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ…

ಸಾಂತ್ವನ ಕೇಂದ್ರ ಸೇರಿದ ಮಗು ತೊರೆದಿದ್ದ ಬಾಣಂತಿ
ಹಾಸನ

ಸಾಂತ್ವನ ಕೇಂದ್ರ ಸೇರಿದ ಮಗು ತೊರೆದಿದ್ದ ಬಾಣಂತಿ

January 19, 2020

ರಾಮನಾಥಪುರ, ಜ.18-ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಹೆತ್ತ ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ನಾಪತ್ತೆಯಾಗಿದ್ದ ಘಟನೆ ರಾಮನಾಥಪುರ ಹೋಬಳಿ ಬಸವಾಪಟ್ಟಣ ದಿಂದ ವರದಿಯಾಗಿದ್ದು, ಸದ್ಯ ಬಾಣಂತಿ -ಮಗುವನ್ನು ಹಾಸನದ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ರಾಮನಾಥಪುರ ಹೋಬಳಿಯ ಗ್ರಾಮ ವೊಂದರ ಮಹಿಳೆ ಶನಿವಾರ ರಾತ್ರಿ ಹೆರಿಗೆ ನೋವಿನಿಂದ ಬಸವಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ತಡರಾತ್ರಿ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈಕೆಗೆ 10 ವರ್ಷದ ಗಂಡು ಮಗನಿದ್ದಾನೆ. ಮಾನಸಿಕ ಅಸ್ವಸ್ಥೆ, ವಿಧವೆಯಾದ ಈಕೆ ಯನ್ನು ಹೆರಿಗೆ ನಂತರ ಯಾರೊಬ್ಬರೂ…

ಬೇಲೂರಿನಲ್ಲಿ ತಾಲೂಕು 8ನೇ ಸಾಹಿತ್ಯ ಸಮ್ಮೇಳನ
ಹಾಸನ

ಬೇಲೂರಿನಲ್ಲಿ ತಾಲೂಕು 8ನೇ ಸಾಹಿತ್ಯ ಸಮ್ಮೇಳನ

January 12, 2020

ಬೇಲೂರು, ಜ.11- ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನಿಂದ ಜರುಗಿದ 8ನೇ ಸಾಹಿತ್ಯ ಸಮ್ಮೇಳನ ಶನಿವಾರ ಪಟ್ಟಣದಲ್ಲಿ ಅದ್ಧೂರಿಯಾಗಿ ಜರುಗಿತು. ಸಮ್ಮೇಳನಾಧ್ಯಕ್ಷರ ಮೆರವಣಿಗೆ ಮೂಲಕ ಸಮ್ಮೇಳಕ್ಕೆ ಚಾಲನೆ ದೊರೆಯಿತು. ಪುರಸಭೆ ಆವರಣದಲ್ಲಿ ಸಮ್ಮೇಳನಾಧ್ಯಕ್ಷ ಬೇಲೂರು ರಘುನಂದ್, ಪತ್ನಿ ಲಕ್ಷ್ಮಿ, ಚಲನಚಿತ್ರ ನಟ ಮಂಡ್ಯ ರಮೇಶ್ ಹಾಗೂ ಕಸಾಪ ಅಧ್ಯಕ್ಷ ಬಿ.ಎಂ.ರವೀಶ್‍ರನ್ನು ರಥದಲ್ಲಿ ಕೂರಿಸಿ, ಮೆರವಣಿಗೆಗೆ ಪಿಎಸ್‍ಐ ಅಜೇಯ್‍ಕುಮಾರ್ ಚಾಲನೆ ನೀಡಿದರು. ಬಸವೇಶ್ವರ ವೃತ್ತದ ಮೂಲಕ ಹತ್ತಾರು ಕಲಾತಂಡಗಳೊಂದಿಗೆ ಸಾಗಿದ ಮೆರವಣಿಗೆ ಚನ್ನಕೇಶವ ದೇಗುಲ ಬಳಿ ಸಮಾಪ್ತಿಗೊಂಡಿತು. ಮೆರವಣಿಗೆಯಲ್ಲಿ ಶಾಸಕ…

ರೈತರ ಬದುಕು ಹಸನಾಗಿಸಲು ಪ್ರಾಮಾಣಿಕ ಯತ್ನ: ಬಿಎಸ್‍ವೈ
ಹಾಸನ

ರೈತರ ಬದುಕು ಹಸನಾಗಿಸಲು ಪ್ರಾಮಾಣಿಕ ಯತ್ನ: ಬಿಎಸ್‍ವೈ

January 5, 2020

ಹಾಸನ, ಜ.4- ರಾಜ್ಯದ ಎಲ್ಲಾ ಕೆರೆ ಗಳನ್ನು ತುಂಬಿಸುವ ಮೂಲಕ ರೈತರ ಬದುಕು ಹಸನಾಗಿಸಲು ಸರ್ಕಾರ ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು. ಪುಷ್ಪಗಿರಿ ಮಹಾ ಸಂಸ್ಥಾನದಿಂದ ಬೇಲೂರು ತಾಲೂಕು ಹಳೆಬೀಡಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಪುಷ್ಪಗಿರಿ ಗ್ರಾಮೀಣಾಭಿವೃದ್ದಿ ಯೋಜನೆ ಲೋಕಾರ್ಪಣೆ ಹಾಗೂ ಪುಷ್ಪಗಿರಿ ರಾಷ್ಟ್ರೀಯ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಯೋಜನೆ ಉದ್ಘಾಟನೆ ಹಾಗೂ ಸ್ವಾಮೀಜಿ ದಶ ಮಾನೋತ್ಸವದಲ್ಲಿ ಪಾಲ್ಗೊಂಡಿರುವುದು…

ಬಜೆಟ್‍ನಲ್ಲಿ ನೀರಾವರಿ, ಪ್ರವಾಸೋದ್ಯಮಕ್ಕೆ ಆದ್ಯತೆ
ಹಾಸನ

ಬಜೆಟ್‍ನಲ್ಲಿ ನೀರಾವರಿ, ಪ್ರವಾಸೋದ್ಯಮಕ್ಕೆ ಆದ್ಯತೆ

January 5, 2020

ಹಾಸನ, ಜ.4-ಮುಂದಿನ ಬಜೆಟ್‍ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ರೈತರ ಹಿತ ಕಾಯುವ ನಿಟ್ಟಿನಲ್ಲಿ ನೀರಾವರಿ ಯೋಜನೆಗಳು ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮಾರಗೊಂಡನಹಳ್ಳಿಯ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರೈತರ ಕೃಷಿ ಉತ್ಪನ್ನಗಳು ಹೆಚ್ಚಾಗಬೇಕು. ಅದಕ್ಕೆ ಬೆಂಬಲ ಬೆಲೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಾರಿಯ ಬಜೆಟ್‍ನಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಹೊಸ ಅಂಶಗಳನ್ನು ಸೇರಿಸುವ ಕುರಿತಂತೆ ಮುಂದಿನ ದಿನಗಳಲ್ಲಿ ಸಭೆಗಳನ್ನು ನಡೆಸಿ ತಜ್ಞರ ಅಭಿಪ್ರಾಯಗಳನ್ನು ಒಗ್ಗೂಡಿಸಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು…

ಡಿಜಿಟಲ್ ಯುಗದಲ್ಲೂ ಗ್ರಾಹಕನಿಗೆ ಮಾಹಿತಿ ಕೊರತೆ!
ಹಾಸನ

ಡಿಜಿಟಲ್ ಯುಗದಲ್ಲೂ ಗ್ರಾಹಕನಿಗೆ ಮಾಹಿತಿ ಕೊರತೆ!

December 25, 2019

ಹಾಸನ, ಡಿ.24- ಡಿಜಿಟಲ್ ಯುಗದಲ್ಲೂ ಕೊಳ್ಳುವ ವಸ್ತುಗಳ ಕುರಿತು ಮಾಹಿತಿ ಕೊರತೆ ಇದ್ದು, ಗ್ರಾಹಕ ಎಚ್ಚರಿಕೆ ವಹಿಸಬೇಕು ಎಂದು ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್ ಸಲಹೆ ನೀಡಿದರು. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವ ಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಅವರು…

ಬೇಡಿಕೆಗನುಗುಣವಾಗಿ ಭತ್ತ, ರಾಗಿ ಖರೀದಿ ಕೇಂದ್ರ ತೆರೆಯಲು ಡಿಸಿ ಸೂಚನೆ
ಹಾಸನ

ಬೇಡಿಕೆಗನುಗುಣವಾಗಿ ಭತ್ತ, ರಾಗಿ ಖರೀದಿ ಕೇಂದ್ರ ತೆರೆಯಲು ಡಿಸಿ ಸೂಚನೆ

December 18, 2019

ಹಾಸನ, ಡಿ.17- ಜನಸಾಮಾನ್ಯರ ಶ್ರೇಯೋಭಿವೃದ್ಧಿಗೆ ಸರ್ಕಾರ ರೂಪಿಸಿ ರುವ ಯೋಜನೆಗಳನ್ನು ಕ್ಷೇತ್ರ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸ ಬೇಕಿದೆ. ಅದಕ್ಕಾಗಿ ಎಲ್ಲಾ ಇಲಾಖಾಧಿಕಾರಿ ಗಳು ಶ್ರಮಿಸಬೇಕು ಎಂದು ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿಯೂ ಆದ ನವೀನ್ ರಾಜ್ ಸಿಂಗ್ ಸೂಚಿಸಿದರು. ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಬೇಡಿಕೆಗೆ ತಕ್ಕಂತೆ ರಾಗಿ, ಭತ್ತದ ಖರೀದಿ ಕೇಂದ್ರಗಳನ್ನು ತೆರೆದು, ಬೆಂಬಲ ಬೆಲೆಗೆ ಅನುಗುಣವಾಗಿ ಖರೀದಿಸುವಂತೆ ಕೃಷಿ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾಲೂಕು ಹಾಗೂ…

1 2 3 4 103
Translate »