Tag: Hassan

ಹಾಸನ ನಗರಸಭೆಯ 35 ವಾರ್ಡ್‍ನಲ್ಲೂ ಸ್ಪರ್ಧೆ:ಸಚಿವ ಹೆಚ್.ಡಿ.ರೇವಣ್ಣ
ಹಾಸನ

ಹಾಸನ ನಗರಸಭೆಯ 35 ವಾರ್ಡ್‍ನಲ್ಲೂ ಸ್ಪರ್ಧೆ:ಸಚಿವ ಹೆಚ್.ಡಿ.ರೇವಣ್ಣ

August 9, 2018

ಹಾಸನ: ಆಗಸ್ಟ್ 29ರಂದು ನಡೆಯುವ ಹಾಸನ ನಗರಸಭೆ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆಯಾಗದಂತೆ 35 ವಾರ್ಡ್‍ಗಳಲ್ಲಿಯೂ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದರು. ನಗರದ ಎಂ.ಜಿ ರಸ್ತೆಯ ಶ್ರೀ ಆದಿ ಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್‍ನಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸ್ಥಳೀಯ ಜೆಡಿಎಸ್ ನಾಯಕರ ಅಭಿಪ್ರಾಯ ಪಡೆದು ನಗರಸಭೆ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಜಿಲ್ಲೆಯಲ್ಲಿ 2 ನಗರ ಸಭೆ ಸೇರಿದಂತೆ ಪುರಸಭೆಗಳಿಗೆ ಚುನಾವಣೆ ನಡೆಯಲಿದೆ….

ಕೊಳವೆ ಬಾವಿ ಕೊರೆಯಲು ಅನುಮತಿ ಕಡ್ಡಾಯ
ಹಾಸನ

ಕೊಳವೆ ಬಾವಿ ಕೊರೆಯಲು ಅನುಮತಿ ಕಡ್ಡಾಯ

August 9, 2018

ಹಾಸನ:  ಅಂತರ್ಜಲ ಪ್ರಮಾಣ ಕುಸಿದಿಸಿದಿರುವ ಜಿಲ್ಲೆಯ ಅರಸೀಕೆರೆಯು ಅಧಿಸೂಚಿತ ಅತೀ ಬಳಕೆ ಪ್ರದೇಶ ಆಗಿರುವುದರಿಂದ ಬಾವಿ/ಕೊಳವೆ ಬಾವಿಯನ್ನು ಕೊರೆದು ಅಂತರ್ಜಲವನ್ನು ತೆಗೆಯಲು ಮತ್ತು ಬಳಸಲು ನಿಯೋಜಿತ ಸಮಿತಿಗಳಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ. ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಂತರ್ಜಲ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆ ಹಾಗೂ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ 43 ಅಂತರ್ಜಲ ಅತೀ ಬಳಕೆ ತಾಲೂಕುಗಳನ್ನು ಅಧಿಸೂಚಿಸಿದ್ದು, ಅದರಲ್ಲಿ ಅರಸೀಕೆರೆ…

ಲ್ಯಾಬ್ ಖಾಸಗೀಕರಣ ಮಾಡದಂತೆ ಆಗ್ರಹ, ವಾಗ್ವಾದ
ಹಾಸನ

ಲ್ಯಾಬ್ ಖಾಸಗೀಕರಣ ಮಾಡದಂತೆ ಆಗ್ರಹ, ವಾಗ್ವಾದ

August 9, 2018

ಹಾಸನ: ನಗರದ ಮಿಷನ್ ಆಸ್ಪತ್ರೆ ಯಲ್ಲಿರುವ ಲ್ಯಾಬ್‍ನ ಖಾಸಗೀಕರಣ ನಿರ್ಧಾರ ಖಂಡಿಸಿ ಆಸ್ಪತ್ರೆ ಸಿಬ್ಬಂದಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದರು. ಈ ವೇಳೆ ವಾಗ್ವಾದ ಏರ್ಪಟ್ಟಿತು. ನಗರದ ಮಿಷನ್ ಆಸ್ಪತ್ರೆ ಆಡಳಿತ ಮಂಡಳಿಯು ಅಲ್ಲಿರುವ ಲ್ಯಾಬ್ ಖಾಸಗೀಕರಣಗೊಳಿಸಲು ನಿರ್ಧರಿಸಿದ್ದು, ಈ ಹಿನ್ನೆಲೆ ಲ್ಯಾಬ್‍ನ ಇಬ್ಬರು ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾಹಿಸಿದೆ. ಇದರಿಂದ ಅಸಮಾಧಾನಗೊಂಡ ಆಸ್ಪತ್ರೆಯ ಇತರ ಸಿಬ್ಬಂದಿ ಆಡಳಿತ ಮಂಡಳಿ ಯವರ ವಿರುದ್ಧ ಇಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಆಸ್ಪತ್ರೆ ಆಡಳಿತಾಧಿಕಾರಿ ರೋಹನ್, ಮ್ಯಾನೇಜ್‍ಮೆಂಟ್‍ನ…

ಎಡಕುಮರಿ ಬಳಿ ಗುಡ್ಡ ಕುಸಿತ: ರೈಲು ಸಂಚಾರ ಸ್ಥಗಿತ
ಹಾಸನ

ಎಡಕುಮರಿ ಬಳಿ ಗುಡ್ಡ ಕುಸಿತ: ರೈಲು ಸಂಚಾರ ಸ್ಥಗಿತ

August 9, 2018

ಹಾಸನ: ಹಾಸನ-ಮಂಗಳೂರು ನಡುವಿನ ಸಕಲೇಶಪುರದ ಎಡಕುಮರಿ ಬಳಿ ಗುಡ್ಡ ಕುಸಿದಿದ್ದು, ರೈಲು ಸಂಚಾರ ಸ್ಥಗಿತಗೊಂಡಿದೆ. ಮೂರು ದಿನದಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದ ಸಕ ಲೇಶಪುರದ ಎಡಕುಮರಿಯ ಮೂರನೇ ಮೈಲಿಯ ಬಳಿ ಗುಡ್ಡ ಕುಸಿದಿದ್ದು, ರೈಲು ಸಂಚಾರಕ್ಕೆ ಅಡ್ಡಿಯಾಗಿದೆ. ವಿಷಯ ತಿಳಿದು ರೈಲ್ವೆ ಇಲಾಖಾ ಸಿಬ್ಬಂದಿ ಸ್ಥಳಕ್ಕೆ ತೆರಳಿ ತುಂತುರು ಮಳೆಯಲ್ಲಿಯೇ ಗುಡ್ಡ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ರೈಲು ಸಂಚಾರ ಸ್ಥಗಿತದಿಂದ ಪ್ರಯಾಣಿಕರನ್ನು ರೈಲ್ವೆ ಇಲಾಖೆ ಹಾಸನದಿಂದ ರಸ್ತೆ ಮಾರ್ಗವಾಗಿ ಬಸ್‍ಗಳ ಮೂಲಕ ಕಳುಹಿಸಲು ವ್ಯವಸ್ಥೆ ಮಾಡಿತು. 6ಕ್ಕೂ…

ಅತ್ಯಾಚಾರಿಗೆ ಕಠಿಣ ಕಾರಾಗೃಹ ಶಿಕ್ಷೆ
ಹಾಸನ

ಅತ್ಯಾಚಾರಿಗೆ ಕಠಿಣ ಕಾರಾಗೃಹ ಶಿಕ್ಷೆ

August 9, 2018

ಹಾಸನ: ಮಹಿಳೆ ಅತ್ಯಾಚಾರ ಆರೋಪಿಗೆ 30 ಸಾವಿರ ರೂ. ಡಂಡ, 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾ ಲಯ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ. ಗುಳ್ಳೇನಹಳ್ಳಿ ಗ್ರಾಮದ ನಿವಾಸಿ ಟ್ರಾಕ್ಟರ್ ಡ್ರೈವರ್ ಮುಜಾಯಿದ್ ಪಾಷಾ ಶಿಕ್ಷೆಗೆ ಗುರಿಯಾದವ. ಈತ ಗ್ರಾಮದ ಮನೆಯೊಂದಕ್ಕೆ ಅತಿಕ್ರಮವಾಗಿ ಪ್ರವೇಶಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದ್ದ. ಅತ್ಯಾಚಾರಕ್ಕೊಳಗಾದ ಮಹಿಳೆ ನಗರದ ಗ್ರಾಮಾಂತರ ಠಾಣೆಗೆ ನೀಡಿದ ದೂರಿನ ಮೇರೆಗೆ…

ಬೇಲೂರು ಕ್ಷೇತ್ರದ ನೀರಿನ ಸಮಸ್ಯೆ ಅಂತ್ಯ
ಹಾಸನ

ಬೇಲೂರು ಕ್ಷೇತ್ರದ ನೀರಿನ ಸಮಸ್ಯೆ ಅಂತ್ಯ

August 8, 2018

ಬೇಲೂರು: ಎತ್ತಿನಹೊಳೆ, ಯಗಚಿ ಏತ ನೀರಾವರಿ, ರಣಘಟ್ಟ ಒಡ್ಡು ಯೋಜನೆಗಳ ಮೂಲಕ ತಾಲೂಕಿನಲ್ಲಿರುವ ನೀರಾವರಿ, ಕುಡಿಯುವ ನೀರಿನ ಸಮಸ್ಯೆಗೆ ಅಂತ್ಯ ಹಾಡಲಾಗುವುದು ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು. ಇಲ್ಲಿನ ಯಗಚಿ ಜಲಾಶಯ ವೀಕ್ಷಿಸಿದ ನಂತರ ಯಗಚಿ ವಸತಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಜಲಾಶಯದಲ್ಲಿ 2.6 ಟಿಎಂಸಿ ನೀರು ಸಂಗ್ರಹವಿದೆ. ಬೇಲೂರು, ಅರಸೀಕೆರೆ, ಚಿಕ್ಕಮಗಳೂರು ಪಟ್ಟಣಗಳಿಗೆ ಕುಡಿಯುವ ನೀರನ್ನು ಮೀಸಲಿಟ್ಟು, ಉಳಿದ ನೀರನ್ನು ಹಳೇಬೀಡು ಮಾದಿಹಳ್ಳಿ ಹೋಬಳಿಗೆ ಕಾಲುವೆ ಮೂಲಕ ಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಸದ್ಯ ನಾಲೆ…

ಅನಗತ್ಯ ಹೆರಿಗೆ ಶಸ್ತ್ರ ಚಿಕಿತ್ಸೆ ಕಡಿವಾಣಕ್ಕೆ ಸೂಚನೆ
ಹಾಸನ

ಅನಗತ್ಯ ಹೆರಿಗೆ ಶಸ್ತ್ರ ಚಿಕಿತ್ಸೆ ಕಡಿವಾಣಕ್ಕೆ ಸೂಚನೆ

August 8, 2018

ಹಾಸನ: ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ನಡೆಯುವ ಅನಗತ್ಯ ಹೆರಿಗೆ ಶಸ್ತ್ರಚಿಕಿತ್ಸೆಗಳು ಸಂಪೂರ್ಣ ನಿಯಂತ್ರಣಗೊಳ್ಳಬೇಕಿದ್ದು, ಕನಿಷ್ಠ ಶೇ.50ರಷ್ಟು ಶಿಶುಗಳು ಸಹಜ ಜನನವಾಗಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು. ತಮ್ಮ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಆರೋಗ್ಯ ಅಭಿಯಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.45-50 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶೇ.67ರಷ್ಟು ಹೆರಿಗೆಗಳು ಶಸ್ತ್ರ ಚಿಕಿತ್ಸೆ ಮೂಲಕವೇ ಆಗುತ್ತಿವೆ. ಎಲ್ಲಾ ವೈದ್ಯರೂ ಆದಷ್ಟು ಸಹಜ ಹೆರಿಗೆಗೆ ಗಮನ ಹರಿಸಬೇಕು. ಈ ಬಗ್ಗೆ…

ಮದ್ಯದಂಗಡಿಗೆ ತೆರೆಯಲು ಅನುಮತಿ ನೀಡದಂತೆ ಪ್ರತಿಭಟನೆ
ಹಾಸನ

ಮದ್ಯದಂಗಡಿಗೆ ತೆರೆಯಲು ಅನುಮತಿ ನೀಡದಂತೆ ಪ್ರತಿಭಟನೆ

August 8, 2018

ಹಾಸನ: ಮದ್ಯದಂಗಡಿ ತೆರೆಯಲು ಅನುಮತಿ ನೀಡದಂತೆ ಆಗ್ರಹಿಸಿ ಸಕಲೇಶಪುರದ ಸಿಪಿಸಿ ಹಾಗೂ ರಾಘವೇಂದ್ರ ಬಡಾವಣೆ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು. ಸಕಲೇಶಪುರ ಪುರಸಭೆ ವ್ಯಾಪ್ತಿಯ ಸಿಪಿಸಿ ಮತ್ತು ರಾಘವೇಂದ್ರ ಬಡಾವಣೆಯ ಒಳಗೆ ವಿವಿಧ ಸಮುದಾಯದವರು ಶಾಂತಿಯಿಂದ ವಾಸಿಸುತ್ತಿದ್ದು, ಕೆಲ ಪ್ರಭಾವಿಗಳು ತಮ್ಮ ಪ್ರಭಾವದಿಂದ ಮದ್ಯದಂಗಡಿ ತೆರೆಯಲು ಮುಂದಾಗಿದ್ದಾರೆ. ವಸತಿ ಪ್ರದೇಶ ಸಮೀಪವೇ ಮದ್ಯದಂಗಡಿ ತೆರೆದರೆ ಮದ್ಯವ್ಯಸನಿಗಳಿಂದ ನಿವಾಸಿಗಳಿಗೆ ತೊಂದರೆಯಾಗುತ್ತದೆ ಎಂದು ಅಳಲು ತೋಡಿಕೊಂಡರಲ್ಲದೆ, ಜನ ಸಾಮಾನ್ಯರ ಹಿತದೃಷ್ಟಿಯಿಂದ ಕೂಡಲೇ ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು ಎಂದು ಒತ್ತಾಯಿಸಿ…

ಬಂದ್‍ಗೆ ಹಾಸನದಲ್ಲಿ ನೀರಸ ಪ್ರತಿಕ್ರಿಯೆ
ಹಾಸನ

ಬಂದ್‍ಗೆ ಹಾಸನದಲ್ಲಿ ನೀರಸ ಪ್ರತಿಕ್ರಿಯೆ

August 8, 2018

ಹಾಸನ: ಕೇಂದ್ರ ಜಾರಿಗೊಳಿಸುತ್ತಿರುವ ಮೋಟಾರು ವಾಹನ ತಿದ್ದುಪಡಿ ಮಸೂದೆ ವಿರೋಧಿಸಿ ಇಂದು ಕರೆ ನೀಡಿದ್ದ ಬಂದ್‍ಗೆ ಹಾಸನದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೆಎಸ್ಆರ್‌ಟಿಸಿ, ನಗರ ಸಾರಿಗೆ ಬಸ್‍ಗಳು, ಆಟೋ ಸೇರಿದಂತೆ ಇತರೆ ವಾಹಣಗಳು ಎಂದಿನಂತೆ ಸಂಚರಿಸಿದವು. ಜನ ಜೀವನ ಎಂದಿನಂತಿತ್ತು. ಅಂಗಡಿ ಮುಂಗಟ್ಟುಗಳು ತೆರದಿದ್ದವು. ಕೆಎಸ್‍ಆರ್‍ಟಿಸಿ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಮಂಜುನಾಥ್ ಜು.3ರಂದು ಸುದ್ದಿಗೋಷ್ಠಿ ನಡೆಸಿ ಮುಷ್ಕರಕ್ಕೆ ಬೆಂಬಲಿಸಲು ಮನವಿ ಮಾಡಿದ್ದರು. ಆದರೆ ಹಾಸನದ ಸಾರಿಗೆ ಸಂಬಂಧಿತ ಸಂಘಟನೆಗಳು ಬಂದ್‍ಗೆ ಬೆಂಬಲ ನೀಡದೇ ಎಂದಿನಂತೆ…

ಅಧಿಕಾರಿಗಳ ವರ್ಗಾವಣೆಯಲ್ಲಿ ನನ್ನ ಹಸ್ತಕ್ಷೇಪವಿಲ್ಲ
ಹಾಸನ

ಅಧಿಕಾರಿಗಳ ವರ್ಗಾವಣೆಯಲ್ಲಿ ನನ್ನ ಹಸ್ತಕ್ಷೇಪವಿಲ್ಲ

August 7, 2018

ಹಾಸನ: ವಿವಿಧ ಇಲಾಖೆ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ನಾನು ಯಾವುದೇ ಇಲಾಖೆ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಯಾವುದೇ ರೀತಿಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕಾರಿಣಿ ಸಭೆಯ ವೊಂದರಲ್ಲಿ ಯಡಿಯೂರಪ್ಪ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದರು. ಯಾವ ಸಚಿವರ ಬಳಿಯೂ ವರ್ಗಾವಣೆ ವಿಚಾರದಲ್ಲಿ ಚರ್ಚಿಸಿಲ್ಲ. ನನ್ನ ವೈಯಕ್ತಿಕ ಕೆಲಸಗಳನ್ನು ಯಾರಿಂದಲೂ ಮಾಡಿಸಿಕೊಂಡಿಲ್ಲ. ನನ್ನ ಇಲಾಖೆಯಲ್ಲಿ ನಡೆದಿರುವ ವರ್ಗಾವಣೆ ದಾಖಲೆಗಳನ್ನು…

1 85 86 87 88 89 103
Translate »