ಹಾಸನ: ವಿಕಲಚೇತನರು ಮತ್ತು ವೃದ್ಧಾಪ್ಯ ವೇತನಕ್ಕೆ ಗುರುತಿನ ಚೀಟಿ ಕೊಡಿಸುವುದಾಗಿ ಹಣ ವಸೂಲಿ ಮಾಡಿ ವಂಚಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ವ್ಯಕಿಯೋರ್ವನನ್ನು ಬಡಾವಣೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೋಹನ್ ಕುಮಾರ್ ಎಂಬಾತ ಬಂಧಿತ ಆರೋಪಿ. ನಗರದ ಹೇಮಾವತಿ ಪ್ರತಿಮೆ ಬಳಿ ನಕಲಿ ಸರ್ಟಿಫಿಕೇಟ್‍ಗಳನ್ನು ಮಾರಾಟ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಡಾವಣೆ ಪೊಲೀಸರು, ದಾಖಲೆ ಸಮೇತ ಬಂಧಿಸಿದ್ದಾರೆ. ಈತ ಹಲವು ದಿನಗಳಿಂದ ಈ ದಂಧೆಯಲ್ಲಿ ಪಾಲ್ಗೊಂಡಿದ್ದ ಎಂದು ತಿಳಿದು ಬಂದಿದ್ದು, ಪೊಲೀಸರು ಈತನನ್ನು…
ನಾಲೆಗಳಿಗೆ ನೀರು; ವಿವಿಧೆಡೆ ಭತ್ತದ ಕೃಷಿ ಚುರುಕು
August 6, 2018ರಾಮನಾಥಪುರ: ಸತತ ಮಳೆಯಿಂದ ಹೇಮಾವತಿ, ಹಾರಂಗಿ ಜಲಾಶಯ ಭರ್ತಿಯಾಗಿದ್ದು, ನಾಲೆಗಳಿಗೆ ನೀರು ಬಿಟ್ಟಿರುವುದರಿಂದ ಅರಕಲಗೂಡಿನ ವಿವಿಧ ಹೋಬಳಿಗಳ ವ್ಯಾಪ್ತಿಗಳಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ. ರೈತರ ಭತ್ತ ಬೆಳೆಯುವ ಆಸೆ ಚಿಗುರೊಡೆದಿದೆ. ನಾಲೆಗಳಿಗೆ ಹರಿದ ನೀರು: ಕೊಡಗು ಸೇರಿದಂತೆ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕೊಡಗಿನ ಹಾರಂಗಿ ಮತ್ತು ಗೊರೂರಿನ ಹೇಮಾವತಿ ಜಲಾಶಯ ಭರ್ತಿಯಾಗಿದ್ದು, ಕಟ್ಟೇಪುರ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ನೀರು ಬಿಡಲಾಗಿದೆ. ಹೀಗಾಗಲೇ ಕೆಲವು ಕೆರೆ-ಕಟ್ಟೆಗಳು ತುಂಬಿವೆ. ಇದ ರಿಂದ ತಾಲೂಕಿನ ರಾಮನಾಥಪುರ ಕೊಣನೂರು, ದೊಡ್ಡಮಗ್ಗೆ…
ನಗರಸಭೆ ಚುನಾವಣೆ: ಬಿಜೆಪಿ ನಗರ ಘಟಕದಿಂದ ಸಭೆ
August 6, 2018ಹಾಸನ: ಅಗಸ್ಟ್ 29ರಂದು ನಡೆಯಲಿರುವ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಎಂ.ಜಿ. ರಸ್ತೆ ಬಳಿಯ ಕಲ್ಯಾಣ ಮಂಟಪದಲ್ಲಿ ಬಿಜೆಪಿಯ ನಗರ ಘಟಕದ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಪ್ರೀತಮ್ ಜೆ.ಗೌಡ ಮಾತನಾಡಿ, ಕೇಂದ್ರ ಬಿಜೆಪಿ ಆಡಳಿತದ ಮತ್ತು ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಮಾಡಿದ ಜನಪರ ಕೆಲಸಗಳನ್ನು ನಗರದ ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡಬೇಕು. ನಗರಸಭೆ ಚುನಾವಣೆಯಲ್ಲಿ ನಗರದ 35 ವಾರ್ಡ್‍ಗಳಲ್ಲೂ ಉತ್ತಮ ಅಭ್ಯರ್ಥಿಯನ್ನು ನಿಲ್ಲಿಸಿ ಗೆಲ್ಲಿಸುವ ಕೆಲಸ ಎಲ್ಲಾ ಒಟ್ಟಾಗಿ ಮಾಡುವಂತೆ…
ಅತಿವೃಷ್ಠಿ ಹಾನಿಗೆ ಪರಿಹಾರ ಕ್ರಮ ಕೈಗೊಳ್ಳಿ: ಡಿಸಿ
August 4, 2018ಹಾಸನ: ‘ಜಿಲ್ಲೆಯ ವಿವಿಧೆಡೆ ಅತಿವೃಷ್ಠಿಯಿಂದ ಸಾಕಷ್ಟು ಹಾನಿ ಸಂಭವಿ ಸಿದ್ದು, ರಾಷ್ಟೀಯ ಪ್ರಕೃತಿ ವಿಕೋಪ ನಿಧಿ ಮಾನದಂಡದಂತೆ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು. ಬೆಂಗಳೂರಿನಲ್ಲಿ ನಡೆದ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಅನುಪಾಲನೆ ಕುರಿತು ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಅತಿವೃಷ್ಠಿ ಹಿನ್ನೆಲೆಯಲ್ಲಿ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಬೆಳೆ, ಮನೆ, ಜಾನುವಾರು,…
ನಾಳೆ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ
August 4, 2018ಹಾಸನ: ಬೆಂಗಳೂರು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಆ. 5ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಸನದ ವಿವಿಧ 7 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಹಾಸನದ ಮಹಿಳಾ ಪ್ರಥಮ ದರ್ಜೆ ಕಾಲೇಜು, ಎಂ.ಕೃಷ್ಣ ಪದವಿ ಪೂರ್ವ ಕಾಲೇಜು, ಸಿ.ಕೆ.ಎಸ್.ಇಂಗ್ಲೀಷ್ ಪ್ರಾಥಮಿಕ ಶಾಲೆ, ಬಾಲಕಿಯರ ವಿಭಜಿತ ಪದವಿ ಪೂರ್ವ ಕಾಲೇಜು, ಪ್ರಧಾನ ಬಾಲಕಿಯರ ಪದವಿ ಪೂರ್ವ ಕಾಲೇಜು, ಸುಜಲ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಕಲಾ…
ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ
August 4, 2018ಹಾಸನ: ವಿದ್ಯಾರ್ಥಿನಿ ರಕ್ಷಿತಾ ಹತ್ಯೆ ಖಂಡಿಸಿ ನಗರದಲ್ಲಿ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು (ಎಬಿವಿಪಿ)ಯಿಂದ ಪ್ರತಿಭಟನೆ ನಡೆಯಿತು. ಇಲ್ಲಿನ ಹೇಮಾವತಿ ಪ್ರತಿಮೆ ಬಳಿಯಿಂದ ಸಮಾವೇ±ಗೊಂಡ ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿನಿಯರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬಿಜಿಎಸ್ ಶಾಲೆಯ ವಿದ್ಯಾರ್ಥಿನಿ ರಕ್ಷಿತಾ ಶಾಲಾ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಬಳಿಕ ಮನೆಗೆ ವಾಪಸ್ ತೆರಳುತ್ತಿರುವಾಗ ಯುವಕನೋರ್ವ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ ಕೊಲೆ ಮಾಡಿದ್ದಾನೆ. ಈ ಆರೋಪಿಯನ್ನು ಕೂಡಲೇ…
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಕಲ ಸಿದ್ಧತೆ
August 4, 2018ಹಾಸನ: ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ಕೈಗೊಂಡಿದೆ. ಜಿಲ್ಲೆಯ 2 ನಗರಸಭೆ ಹಾಗೂ 3 ಪುರಸಭೆಗಳ 135 ವಾರ್ಡ್‍ಗಳಿಗೆ ಚುನಾವಣೆ ನಡೆಯಲಿದೆ. ಹಾಸನ, ಅರಸೀಕೆರೆ ನಗರಸಭೆಗಳು ಹಾಗೂ ಚನ್ನರಾಯಪಟ್ಟಣ, ಹೊಳೆನರಸೀಪುರ ಮತ್ತು ಸಕಲೇಶಪುರ ಪುರಸಭೆಗಳಿಗೆ ಆ. 29ರಂದು ಮತದಾನ ನಡೆಯಲಿದೆ. ಒಟ್ಟು 135 ವಾರ್ಡ್‍ಗಳ ಚುನಾವಣೆಗೆ ಜಿಲ್ಲೆಯಲ್ಲಿ 269ಮತಗಟ್ಟೆ ಸ್ಥಾಪಿಸಲಾಗಿದೆ. 1,06,769ಪುರುಷ ಹಾಗೂ 1,07,903ಮಹಿಳಾ ಮತದಾರರು, 7 ಮಂದಿ ಲಿಂಗ ಅಲ್ಪಸಂಖ್ಯಾತರು ಸೇರಿದಂತೆ 2,14,679 ಮಂದಿ ಮತದಾನದ ಹಕ್ಕು…
ಆ.7ರಂದು ರಾಷ್ಟ್ರವ್ಯಾಪಿ ಸಾರಿಗೆ ಮುಷ್ಕರ: ಮಂಜುನಾಥ್
August 4, 2018ಹಾಸನ: ಮೋಟಾರು ವಾಹನ (ತಿದ್ದುಪಡಿ) ಮಸೂದೆ-2017 ಅನ್ನು ಹಿಂಪಡೆಯಬೇಕು ಹಾಗೂ ಸಾರಿಗೆ ಉದ್ಯಮ ರಕ್ಷಣೆ, ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆಯನ್ನು ಜರಿಗೊಳಿಸುವಂತೆ ಒತ್ತಾಯಿಸಿ ರಸ್ತೆ ಸಾರಿಗೆ ರಂಗದಲ್ಲಿರುವ ಕಾರ್ಮಿಕರು ಮತ್ತು ಮಾಲೀಕರ ಸಂಘಟನೆಗಳ ವೇದಿಕೆ ವತಿಯಿಂದ ರಾಷ್ಟ್ರವ್ಯಾಪಿ ಆ. 7ರಂದು ಸಾರಿಗೆ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕೆಎಸ್‍ಆರ್‍ಟಿಸಿ ನೌಕರರ ಫೆಡರೇಷನ್‍ನ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಮಂಜುನಾಥ್ ಹೇಳಿದರು. ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ರಸ್ತೆ ಸಾರಿಗೆ ಉದ್ದಿಮೆಯಲ್ಲಿರುವ ಆಟೋರಿಕ್ಷಾ, ಟ್ಯಾಕ್ಸಿ, ಖಾಸಗಿ…
ಹುಚ್ಚನಕೊಪ್ಪಲು ಏತ ನೀರಾವರಿ ಯೋಜನೆ ಪರಿಶೀಲಿಸಿದ ಹೆಚ್.ಡಿ. ರೇವಣ್ಣ: ಅಭಿವೃದ್ಧಿಗೆ ಉತ್ತರ-ದಕ್ಷಿಣ ತಾರತಮ್ಯವಿಲ್ಲ
August 3, 2018ಹಾಸನ: ‘ಅಭಿವೃದ್ಧಿ ಕುರಿತು ರಾಜ್ಯ ಸರ್ಕಾರಕ್ಕೆ ಉತ್ತರ, ದಕ್ಷಿಣವೆಂಬ ಯಾವುದೇ ತಾರತಮ್ಯವಿಲ್ಲ. ಜಿಲ್ಲಾ ಅಭಿವೃದ್ಧಿ ನಮ್ಮ ಗುರಿ’ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು. ಹೊಳೆನರಸೀಪುರ ತಾಲೂಕು ಹುಚ್ಚನ ಕೊಪ್ಪಲು ಏತ ನೀರಾವರಿ ಮೊದಲ ಹಂತದ ಯೋಜನೆ ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಸರ್ವಾಂಗೀಣ ಪ್ರಗತಿಯನ್ನು ದೃಷ್ಟಿಯಿಲ್ಲಿಟ್ಟುಕೊಂಡು ಶ್ರಮಿಸುತ್ತಿದ್ದಾರೆ ಎಂದರು. ಉತ್ತರ ಕರ್ನಾಟಕದ ನೀರಾವರಿ ಯೋಜನೆಗೆ ಅನುದಾನ ನೀಡಿದ್ದು ಹಾಗೂ ಬೆಳಗಾವಿಯಲ್ಲಿ ಸುವರ್ಣಸೌಧಕ್ಕೆ ಕುಮಾರಸ್ವಾಮಿ, ದೇವೇಗೌಡರ ಕೊಡುಗೆ ಅಪಾರವಾಗಿದೆ….
ಸಮಗ್ರ ಕರ್ನಾಟಕ ಉಳಿಸಿ, ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ
August 3, 2018ಹಾಸನ: ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮಗ್ರ ಕರ್ನಾಟಕ ಅಭಿವೃದ್ಧಿಗಾಗಿ ಡಾ.ಡಿ.ಎಂ.ನಂಜುಂಡಪ್ಪ ವರದಿ ಜಾರಿ ಮಾಡಿ, ಅಖಂಡ ರಾಜ್ಯವನ್ನು ಉಳಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಗುರುವಾರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಯಿತು. ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಘೋಷಣೆ ಕೂಗಿದರು. ಭಾಷವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿರುವ ರಾಜ್ಯಗಳ ಒಕ್ಕೂಟ ದೇಶವಾಗಿರುವ ಭಾರತದಲ್ಲಿ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಆದಾಯ…