Tag: HD Deve Gowda

ದೇವೇಗೌಡರಿಗೆ ನಾನು, ಹನುಮೇಗೌಡರು ರಾಜಕೀಯ ಪುನರ್‍ಜನ್ಮ ನೀಡಿದ್ದೆವು
ಹಾಸನ

ದೇವೇಗೌಡರಿಗೆ ನಾನು, ಹನುಮೇಗೌಡರು ರಾಜಕೀಯ ಪುನರ್‍ಜನ್ಮ ನೀಡಿದ್ದೆವು

March 12, 2019

ಮೊಮ್ಮಗನಿಗೆ ಅಭ್ಯರ್ಥಿ ಪಟ್ಟ ಕೈಬಿಟ್ಟು ನಮ್ಮಂತವರಿಗೆ ಆಶೀರ್ವದಿಸಲಿ: ಮಾಜಿ ಸಚಿವ ಎ.ಮಂಜು ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರಿಗೆ ರಾಜಕೀಯದಲ್ಲಿ ಪುನರ್ ಜನ್ಮ ಕೊಟ್ಟವರು ನಾನು ಮತ್ತು ಹನುಮೇಗೌಡರು ಎಂಬುದನ್ನು ಮರೆತು ಈಗ ತಮ್ಮ ಮೊಮ್ಮಗನಿಗೆ ಲೋಕಸಭೆ ಚುನಾವಣೆ ಅಭ್ಯರ್ಥಿ ಪಟ್ಟ ಕಟ್ಟುತ್ತಿದ್ದು, ಕೂಡಲೇ ಕೈಬಿಟ್ಟು ನಮ್ಮಂತವರಿಗೆ ಆಶೀರ್ವದಿಸಲಿ ಎಂದು ಮಾಜಿ ಸಚಿವ ಎ.ಮಂಜು ಹಳೆಯ ನೆನಪನ್ನು ನೆನಪಿಸಿದರು. ನಗರದ ದೇವಿಗೆರೆ ಬಳಿ ಇರುವ ನೀರು ಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ…

ಕುಮಾರಸ್ವಾಮಿ ಜನಮನ್ನಣೆಗಳಿಸಬಾರದು ಎಂಬುದು ಸಿದ್ದರಾಮಯ್ಯ ಉದ್ದೇಶ
ಮೈಸೂರು

ಕುಮಾರಸ್ವಾಮಿ ಜನಮನ್ನಣೆಗಳಿಸಬಾರದು ಎಂಬುದು ಸಿದ್ದರಾಮಯ್ಯ ಉದ್ದೇಶ

February 1, 2019

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಕೈಗೊಂಡಿರುವ ಜನಪರ ಕಾರ್ಯಕ್ರಮಗಳು ಜನ ಮನ್ನಣೆ ಗಳಿಸಬಾರದೆಂಬ ಏಕೈಕ ಉದ್ದೇಶ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರದ್ದಾಗಿದೆ ಎಂಬ ವಿಷಯವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಾಂಗ್ರೆಸ್ ರಾಯಭಾರಿಯ ಕಿವಿಗೆ ಹಾಕಿದ್ದಾರೆ. ದೆಹಲಿಯಲ್ಲಿ ನಿನ್ನೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ನಾಯಕರೊಂದಿಗೆ ನಡೆಸಿದ ಮಾತುಕತೆ ವಿವರವನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಜೆಡಿಎಸ್ ವರಿಷ್ಠರಿಗೆ ನೀಡುತ್ತಿದ್ದ ವೇಳೆ ಈ ವಿಚಾರ ಪ್ರಸ್ತಾಪ ವಾಗಿದೆ. ರಾಷ್ಟ್ರಮಟ್ಟದಲ್ಲಿ…

ಸರ್ಕಾರ ಉರುಳಿಸಲು ನಾನು ಬಿಡಲ್ಲ
ಮೈಸೂರು

ಸರ್ಕಾರ ಉರುಳಿಸಲು ನಾನು ಬಿಡಲ್ಲ

January 14, 2019

ಹಾಸನ: ಯಾವುದೇ ಕಾರಣಕ್ಕೂ ಮೈತ್ರಿ ಸರ್ಕಾರ ಉರುಳಿಸಲು ನಾನು ಬಿಡುವುದಿಲ್ಲ. ಈ ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಜಾಗ್ರತೆ ವಹಿಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು. ಹಾಸನದ ಚನ್ನಪಟ್ಟಣದಲ್ಲಿರುವ ಗೋಮತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಸಂಬಂಧ ನಾನು ಈಗಾಗಲೇ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ್ದೇನೆ. ಮೈತ್ರಿ ಸರ್ಕಾರಕ್ಕೆ ಯಾವುದೇ ಅಪಾಯ ಬಾರದಂತೆ ನೋಡಿಕೊಳ್ಳುತ್ತೇವೆ ಎಂದರು. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿಯವರೇ ಮುಖ್ಯಮಂತ್ರಿ…

ಲೋಕಸಭಾ ಚುನಾವಣೆ: ಗೌಡರ ಕುಟುಂಬದ ಮೂವರ ಸ್ಪರ್ಧೆ
ಮೈಸೂರು

ಲೋಕಸಭಾ ಚುನಾವಣೆ: ಗೌಡರ ಕುಟುಂಬದ ಮೂವರ ಸ್ಪರ್ಧೆ

January 12, 2019

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿ, ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಸರ್ಕಾರದಲ್ಲಿ ಜೆಡಿಎಸ್ ಬಲ ಪ್ರದರ್ಶನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದಿಂದ ಮೂವರು ಕಣಕ್ಕಿಳಿಯಲಿದ್ದಾರೆ. ಇದುವರೆಗೂ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಮಾತ್ರ ಹೊಸದಾಗಿ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿತ್ತು. ಆದರೆ ಇದೀಗ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಚುನಾವಣಾ ಕಣಕ್ಕೆ ಧುಮುಕುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು, ನಿಖಿಲ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಸ್ಥಳೀಯ…

ಭೂ ಕಬಳಿಕೆಗೆ ಸಿಎಂ ಕುಮಾರಸ್ವಾಮಿಯಿಂದ ತಡೆ
ಮೈಸೂರು

ಭೂ ಕಬಳಿಕೆಗೆ ಸಿಎಂ ಕುಮಾರಸ್ವಾಮಿಯಿಂದ ತಡೆ

December 24, 2018

ಮೈಸೂರು: ಜೆಡಿಎಸ್ -ಬಿಜೆಪಿ ಸಮಿಶ್ರ ಸರ್ಕಾರದ ಅವಧಿಯಲ್ಲಿ ಡಾ.ಎ.ಟಿ.ರಾಮಸ್ವಾಮಿ ಅಧ್ಯಕ್ಷತೆಯ ಜಂಟಿ ಸದನ ಸಮಿತಿ ನೀಡಿದ್ದ ಅಕ್ರಮ ಭೂ ಒತ್ತು ವರಿ ವರದಿಯ ಸಾಕಷ್ಟು ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತೆ ಸ್ವಂತದ್ದೆಂದು ನಕಲಿ ದಾಖಲೆ ಸೃಷ್ಟಿ ಮಾಡಿಕೊಂಡಿದ್ದು, ಇದಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಡೆ ಹಾಕಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು. ಮೈಸೂರಿನ ಬಂದಂತಮ್ಮ ಕಾಳಮ್ಮ ಸಮುದಾಯ ಭವನದಲ್ಲಿ ಎ.ಟಿ.ರಾಮ ಸ್ವಾಮಿಯವರ ಅಭಿಮಾನಿಗಳ ಬಳಗದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅರಕಲಗೂಡು ಕ್ಷೇತ್ರದ ಶಾಸಕ ಡಾ.ಎ.ಟಿ.ರಾಮಸ್ವಾಮಿ ಅವರನ್ನು ಸನ್ಮಾನಿಸಿ ಅವರು…

ಒಂದೇ ವೇದಿಕೆಯಲ್ಲಿ ರಾಜಕೀಯ ದುಷ್ಮನ್‍ಗಳು!
ಮೈಸೂರು

ಒಂದೇ ವೇದಿಕೆಯಲ್ಲಿ ರಾಜಕೀಯ ದುಷ್ಮನ್‍ಗಳು!

October 30, 2018

ಬೆಂಗಳೂರು, ಅ.29: ಉಪಚುನಾವಣೆಯಲ್ಲಿ ಬಿಜೆಪಿ ಮಣಿಸಿ, ಮೈತ್ರಿ ಸರ್ಕಾರವನ್ನು ಮತ್ತಷ್ಟು ಗಟ್ಟಿಗೊಳಿಸುವ ಗುರಿ ಹಿನ್ನೆಲೆಯಲ್ಲಿ, ಹಾವು-ಮುಂಗುಸಿಯಂತಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 13 ವರ್ಷಗಳ ನಂತರ ಒಂದೇ ವೇದಿಕೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ. ಬಿಜೆಪಿ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ಪ್ರತಿಪಕ್ಷಗಳನ್ನು ಒಂದು ಮಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲೂ ಮೈತ್ರಿಯೊಂದಿಗೆ ಕಣಕ್ಕಿಳಿ ಯುವ ಉದ್ದೇಶದಿಂದ ತಮ್ಮೆಲ್ಲಾ ವೈಮನಸ್ಸನ್ನು ಬದಿಗಿರಿಸಿ ಮತದಾರರ ಮನವೊಲಿಸಲು ಹೊರಟಿದ್ದಾರೆ. ದೇವೇಗೌಡರ ಕುಟುಂಬದ ವಿರುದ್ಧ ಸದಾ…

ಮೋದಿ ಸ್ಪರ್ಧೆಯಿಂದ ರಾಜ್ಯ ಅಭಿವೃದ್ಧಿ ಆಗುತ್ತಾ?
ಹಾಸನ

ಮೋದಿ ಸ್ಪರ್ಧೆಯಿಂದ ರಾಜ್ಯ ಅಭಿವೃದ್ಧಿ ಆಗುತ್ತಾ?

October 14, 2018

ಅರಕಲಗೂಡು: ಕಳೆದ 4 ವರ್ಷಗಳಲ್ಲಿ ಕೇಂದ್ರದಿಂದ ಯಾವುದೇ ಅಭಿವೃದ್ಧಿ ಕಾಣದ ಕರ್ನಾಟಕ ರಾಜ್ಯ ಮೋದಿ ಸ್ಪರ್ಧೆಯಿಂದಾದರೂ ಅಭಿವೃದ್ಧಿ ಆಗುತ್ತಾ ನೋಡೋಣ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಲೇವಡಿ ಮಾಡಿದ್ದಾರೆ. ಪಟ್ಟಣದ ದಸರಾ ಉದ್ಘಾಟನಾ ಕಾರ್ಯ ಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯದಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ವದಂತಿಗೆ ಪ್ರತಿಕ್ರಿಯಿಸಿ ಅವರು ಮಾತನಾಡಿದರು. ರಾಜ್ಯದ ಅಭಿವೃದ್ಧಿಯ ಬಗ್ಗೆ ಹಲವು ಬಾರಿ ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಲಾಗಿದೆ. ಆದರೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನೂ ಅವರು ಕೈಗೊಳ್ಳುತ್ತಿಲ್ಲ. ಅವರು ಲೋಕಸಭೆಗೆ…

ಕಾಂಗ್ರೆಸ್ ವರಿಷ್ಠರಿಗೆ ಮಾಜಿ ಪ್ರಧಾನಿ ದೇವೇಗೌಡರ ಎಚ್ಚರಿಕೆ ಸಂದೇಶ
ಮೈಸೂರು

ಕಾಂಗ್ರೆಸ್ ವರಿಷ್ಠರಿಗೆ ಮಾಜಿ ಪ್ರಧಾನಿ ದೇವೇಗೌಡರ ಎಚ್ಚರಿಕೆ ಸಂದೇಶ

October 13, 2018

ಬೆಂಗಳೂರು: ಮೈತ್ರಿ ಧರ್ಮ ಪಾಲಿಸದಿದ್ದಲ್ಲಿ ತಾವು ರಾಜ್ಯದಲ್ಲಿ ಪರ್ಯಾಯ ಸರ್ಕಾರಕ್ಕೆ ಮುಂದಾಗ ಬೇಕಾಗುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ವರಿಷ್ಠರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಉಪಚುನಾವಣೆಯಲ್ಲಿ ಜೆಡಿಎಸ್‍ಗೆ ಬಿಟ್ಟುಕೊಟ್ಟಿರುವ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಕಾಂಗ್ರೆಸ್ ಮುಖಂಡರು ಬಹಿರಂಗವಾಗಿಯೇ ಬಂಡಾಯ ಸಾರಿರುವ ಬೆನ್ನಲ್ಲೇ ದೇವೇಗೌಡರು ಕಾಂಗ್ರೆಸ್ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಉಪ ಚುನಾವಣೆ, ಸಂಪುಟ ಪುನರ್ ರಚನೆ ಹಾಗೂ ಅಧಿಕಾರ ಹಂಚಿಕೆ ಸೇರಿದಂತೆ ಹಲವು ವಿಷಯಗಳನ್ನು ಉಭಯ ಪಕ್ಷಗಳ ನಡುವೆ ಹೊಂದಾಣಿಕೆ ಇಲ್ಲದಿದ್ದಲ್ಲಿ…

ಆತ್ಮಕಥೆ ಪೂರ್ಣಗೊಳಿಸಲು ಮಾಜಿ ಪ್ರಧಾನಿ ದೇವೇಗೌಡರ  ಮೈಸೂರು ವಾಸ್ತವ್ಯ
ಮೈಸೂರು

ಆತ್ಮಕಥೆ ಪೂರ್ಣಗೊಳಿಸಲು ಮಾಜಿ ಪ್ರಧಾನಿ ದೇವೇಗೌಡರ  ಮೈಸೂರು ವಾಸ್ತವ್ಯ

September 27, 2018

ಮೈಸೂರು: ಜೆಡಿಎಸ್ ರಾಷ್ಟ್ರಾಧ್ಯಕ್ಷರೂ ಆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆತ್ಮಕಥೆ ಪೂರ್ಣ ಗೊಳಿಸಲು 2 ದಿನಗಳ ಕಾಲ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅಕ್ಟೋಬರ್ ತಿಂಗ ಳಲ್ಲಿ ಬಿಡುಗಡೆಗೊಳಿಸಲು ಸಿದ್ಧತೆ ಮಾಡಿಕೊಂಡಿರುವ ಮಾಜಿ ಪ್ರಧಾನಿ ದೇವೇಗೌಡರು, ಆತ್ಮಕಥೆಗೆ ಅಂತಿಮ ರೂಪ ನೀಡಲು ಕಳೆದ ರಾತ್ರಿಯೇ ಮೈಸೂರಿಗೆ ಆಗ ಮಿಸಿ, ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರ ತೋಟದ ಮನೆ ಯಲ್ಲಿ ಬೆಳಗಿನಿಂದಲೇ ತಮ್ಮ ಆತ್ಮಕಥೆಗೆ ಅಂತಿಮ ಸಿದ್ಧತೆ ನಡೆಸಿದ್ದಾರೆ.

ಮೈಸೂರಿನ ಜಯದೇವ ಆಸ್ಪತ್ರೆ ಸಿದ್ದರಾಮಯ್ಯ ಕೊಡುಗೆ: ಹೆಚ್.ಡಿ.ದೇವೇಗೌಡ
ಮೈಸೂರು

ಮೈಸೂರಿನ ಜಯದೇವ ಆಸ್ಪತ್ರೆ ಸಿದ್ದರಾಮಯ್ಯ ಕೊಡುಗೆ: ಹೆಚ್.ಡಿ.ದೇವೇಗೌಡ

September 24, 2018

ಮೈಸೂರು:  ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆ ಸ್ಥಾಪನೆಗೆ ಡಾ.ಮಂಜುನಾಥ್ ಪತ್ನಿ ಅನುಸೂಯ ಅವರೇ ಪ್ರ್ರಮುಖ ಕಾರಣ. ಇದನ್ನು ಮೈಸೂರಲ್ಲಿ ತೆರೆಯಲು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಕೊಡುಗೆ ಕೂಡ ಇದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಯದೇವ ಹೃದ್ರೋಗ ಆಸ್ಪತ್ರೆ ಕರ್ನಾಟಕ ಮಾತ್ರವಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ಸೇರಿದಂತೆ ಮತ್ತಿತರೆ ರಾಷ್ಟ್ರಗಳ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದೇಶಿ ವೈದ್ಯಕೀಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ….

1 2 3 4
Translate »