Tag: Heavy Rains

ನೂರರ ಗಡಿ ತಲುಪಿದ ಕೆಆರ್‍ಎಸ್ ನೀರಿನ ಮಟ್ಟ
ಮೈಸೂರು

ನೂರರ ಗಡಿ ತಲುಪಿದ ಕೆಆರ್‍ಎಸ್ ನೀರಿನ ಮಟ್ಟ

June 17, 2018

ಮಂಡ್ಯ:  ಜೀವನಾಡಿ ಕೃಷ್ಣರಾಜ ಸಾಗರ(ಕೆಆರ್‍ಎಸ್) ಜಲಾಶಯದ ನೀರಿನ ಮಟ್ಟ ನೂರರ ಗಡಿ ತಲುಪಿದೆ. ಹಾಗೆಯೇ ಇನ್ನಿತರೆ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚು ತ್ತಿದ್ದು ರೈತರಲ್ಲಿ ಸಂತಸ ಮೂಡಿಸಿದೆ.ಕೊಡಗಿನ ಭಾಗಮಂಡಲ ಸೇರಿದಂತೆ ಕಾವೇರಿ ಕೊಳ್ಳದಲ್ಲಿ ಮುಂಗಾರು ಮಳೆ ಉತ್ತಮವಾಗಿರು ವುದರಿಂದ ಕೆಆರ್‍ಎಸ್ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುವುದ ರೊಂದಿಗೆ ನೀರಿನ ಮಟ್ಟ ನೂರಡಿ ತಲುಪಿದೆ. ಸದ್ಯ 28,132 ಕ್ಯೂಸೆಕ್ ಒಳ ಹರಿವಿದ್ದು ಜಲಾ ಶಯ ಮೈದುಂಬುತ್ತಿದೆ. ಹಾಗೆಯೇ 451 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಯ ಬಿಡಲಾಗುತ್ತಿದೆ….

ಜಲಮಯ… ಕೊಡಗೆಲ್ಲಾ ಜಲಮಯಾ…!
ಕೊಡಗು

ಜಲಮಯ… ಕೊಡಗೆಲ್ಲಾ ಜಲಮಯಾ…!

June 12, 2018

ನಾಪೋಕ್ಲು : ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹಳ್ಳಕೊಳ್ಳ, ತೋಡು, ಹೊಳೆ, ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.ಕಾವೇರಿ ನದಿ ಹರಿಯುತ್ತಿರುವ ಚೆರಿಯ ಪರಂಬು, ಕೊಟ್ಟಮುಡಿ ಹಾಗೂ ಬೊಳಿ ಬಾಣೆಗಳಲ್ಲಿ ನೀರಿನ ಮಟ್ಟ ಏರಿಕೆಯಾ ಗಿದ್ದು, ರಸ್ತೆಯ ಮೇಲೆ ಉಕ್ಕಿ ಹರಿಯು ತ್ತಿದೆ. ಚೆರಿಯಪರಂಬು, ನಾಪೋಕ್ಲು -ಮೂರ್ನಾಡು ರಸ್ತೆಯ ಬೊಳಿಬಾಣೆಯ ಲ್ಲಿಯೂ ಕಾವೇರಿ ನದಿ ಪ್ರವಾಹ ಜೋರಾ ಗಿದ್ದು, ವಾಹನಗಳು ನೀರಿನಲ್ಲಿಯೇ ಸಾಗು ತ್ತಿವೆ. ಇದೇ ರೀತಿ ಮಳೆ ಮುಂದುವರಿ ದರೆ. ನಾಪೋಕ್ಲು -ಮೂರ್ನಾಡು ರಸ್ತೆಯ ಸಂಪರ್ಕ…

ಮಳೆಯ ಅಬ್ಬರಕ್ಕೆ ಅಪಾರ ಹಾನಿ
ಕೊಡಗು

ಮಳೆಯ ಅಬ್ಬರಕ್ಕೆ ಅಪಾರ ಹಾನಿ

June 12, 2018

ಸೋಮವಾರಪೇಟೆ: ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಕಳೆದ 24ಗಂಟೆಯಲ್ಲಿ ಬಿರುಗಾಳಿ ಸಹಿತ ಮಳೆ ಸುರಿದ ಪರಿಣಾಮ ಹಾನಿ ಮುಂದುವರಿದಿದೆ. ಮರಗಳು ವಿದ್ಯುತ್ ಕಂಬಗಳು ಮುರಿದು ಬೀಳುತ್ತಿರು ವುದರಿಂದ ಸೆಸ್ಕ್ ಸಿಬ್ಬಂದಿಗಳಿಗೆ ಹೆಚ್ಚಿನ ಒತ್ತಡ ಬೀಳುತ್ತಿದೆ. ಅತಿಹೆಚ್ಚು ಮಳೆ ಬೀಳುವ ಶಾಂತಳ್ಳಿ ಹೋಬಳಿಯಲ್ಲಿ, ದುರಸ್ತಿ ಕೆಲಸ ಭರದಿಂದ ಸಾಗುತ್ತಿದ್ದರೂ, ಮಳೆ ಅರ್ಭಟ ದಿಂದ ಕೆಲಸಕ್ಕೆ ಹಿನ್ನಡೆಯಾಗಿದೆ. ಪುಷ್ಪಗಿರಿ ತಪ್ಪಲು ಗ್ರಾಮ ಗಳಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಅಲ್ಲಿ ದುರಸ್ತಿ ಕೆಲಸಕ್ಕೆ ತೆರಳಲು ಸೆಸ್ಕ್ ಸಿಬ್ಬಂದಿಗಳಿಗೆ ಸಾಧ್ಯವಾಗುತ್ತಿಲ್ಲ. ಗೌಡಳ್ಳಿ ಗ್ರಾಮ…

ಹಾಸನದಲ್ಲಿ ವರುಣನ ಆರ್ಭಟ
ಹಾಸನ

ಹಾಸನದಲ್ಲಿ ವರುಣನ ಆರ್ಭಟ

June 12, 2018

ಹೇಮಾವತಿ ಜಲಾಶಯದಲ್ಲಿ ಜೀವಕಳೆ ಶಾಲಾ-ಕಾಲೇಜುಗಳಿಗೆ ರಜೆ ವಿದ್ಯುತ್, ರಸ್ತೆ-ರೈಲು ಸಂಚಾರ ವ್ಯತ್ಯಯ ಹಾಸನ: ಜಿಲ್ಲೆಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ರಸ್ತೆ, ರೈಲು ಸಂಚಾರ ಅಸ್ತವ್ಯಸ್ತವಾಗಿರುವುದಲ್ಲದೆ, ಅನೇಕ ಪ್ರಮಾಣದ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮುಂಗಾರಿನ ಆರ್ಭಟ ಕಳೆದ ನಾಲ್ಕು ದಿನದಿಂದ ಜೋರಾಗಿದ್ದು, ಭಾನುವಾರ ಸುರಿದ ಭಾರೀ ಮಳೆಗೆ ಜನರು ತತ್ತರಿಸಿದ್ದಾರೆ. ಹಲವೆಡೆ ಮರಗಳು ಧರೆಗುರುಳಿದ್ದು, ಮನೆಗಳ ಗೋಡೆಗಳು ಕುಸಿದಿವೆ. ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯೂ ಸಂಭವಿಸಿದೆ. ಹಾಸನ ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ರೈಲು…

ಮಳೆ ಪರಿಹಾರ ಕಾರ್ಯಕ್ಕೆ ತಾಲೂಕುವಾರು ತಂಡ ರಚನೆ
ಕೊಡಗು

ಮಳೆ ಪರಿಹಾರ ಕಾರ್ಯಕ್ಕೆ ತಾಲೂಕುವಾರು ತಂಡ ರಚನೆ

June 11, 2018

ಮಡಿಕೇರಿ:  ಮುಂಗಾರು ಮಳೆ ಸಂದರ್ಭದಲ್ಲಿ ಪ್ರಕೃತಿ ವಿಕೋಪದಿಂದ ಉಂಟಾ ಗಬಹುದಾದ ಭೂಕುಸಿತ, ಸಂಚಾರಕ್ಕೆ ಅಡ್ಡಿ, ಸಿವಿಲ್ ಕಾರ್ಯಗಳು ಮತ್ತು ಸಂತ್ರಸ್ಥ ರನ್ನು ಸ್ಥಳಾಂತರ ಮಾಡುವುದು, ಮತ್ತಿತರ ಕಾರ್ಯಗಳನ್ನು ಸಮರ್ಪಕವಾಗಿ ನಿಭಾ ಯಿಸಲು ತಹಶೀಲ್ದಾರರ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ಮಡಿಕೇರಿ ತಾಲೂಕು ಭಾಗಮಂಡಲ, ತಲಕಾವೇರಿ, ನಾಪೋಕ್ಲು, ಬೊಳಿಬಾಣೆ ಮತ್ತು ಅಯ್ಯಂಗೇರಿ ವ್ಯಾಪ್ತಿಗೆ ತಹಶೀಲ್ದಾ ರರು(ತಂಡದ ಮುಖ್ಯಸ್ಥರು), ಸಹಾಯಕ ಕಾರ್ಯ ಎಂಜಿನಿಯರ್ ಜಿಪಂ, ಸೆಸ್ಕ್ ಸಹಾಯಕ ಎಂಜಿನಿಯರ್, ಹೋಬಳಿ ಕೇಂದ್ರದ ಪರಿವೀಕ್ಷಕರು, ಗ್ರಾಪಂ ಅಭಿ ವೃದ್ಧಿ ಅಧಿಕಾರಿಗಳು, ವಲಯ…

ರಾಜ್ಯದಲ್ಲಿ ಭಾರೀ ಮಳೆ, ಚಂಡಮಾರುತ ಎಚ್ಚರಿಕೆ
ಮೈಸೂರು

ರಾಜ್ಯದಲ್ಲಿ ಭಾರೀ ಮಳೆ, ಚಂಡಮಾರುತ ಎಚ್ಚರಿಕೆ

June 5, 2018

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ರಾಜ್ಯದÀ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮತ್ತು ಚಂಡಮಾರುತದ ಎಚ್ಚರಿಕೆ ನೀಡಿದೆ. ‘ಕರ್ನಾಟಕ ಒಳನಾಡು, ಆಂಧ್ರಪ್ರದೇಶದ ಕರಾವಳಿ, ತೆಲಂಗಾಣ, ತಮಿಳುನಾಡು, ಕೇಂದ್ರ ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಜಾರ್ಖಂಡ್, ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಛತ್ತೀಸಗಢ ಮತ್ತು ವಿದರ್ಭಗಳ ವಿವಿಧ ಭಾಗಗಳಲ್ಲಿ ಬಿರುಗಾಳಿ, ಸಿಡಿಲು ಸಹಿತ ಭಾರಿ ಮಳೆಯಾಗ ಲಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ, ಮಣ…

ಮಳೆ ಅವಘಡ: ಪರಿಹಾರ ಕ್ರಮಗಳಿಗೆ ಸನ್ನದ್ಧರಾಗಲು ಸೂಚನೆ
ಚಾಮರಾಜನಗರ

ಮಳೆ ಅವಘಡ: ಪರಿಹಾರ ಕ್ರಮಗಳಿಗೆ ಸನ್ನದ್ಧರಾಗಲು ಸೂಚನೆ

June 5, 2018

ಚಾಮರಾಜನಗರ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಎದುರಾಗುವ ಯಾವುದೇ ಸಮಸ್ಯೆಯನ್ನು ನಿವಾರಿಸಿ ಪರಿಹಾರ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳಲು ಅಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಸುತ್ತೋಲೆ ಹೊರಡಿಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಅತಿವೃಷ್ಟಿ ಸಂಭವಿಸಿದ್ದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಹಾರ ಕ್ರಮಕೈಗೊಳ್ಳಬೇಕು. ಸಕಾಲದಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಮುಖ್ಯ ಜವಾಬ್ದಾರಿ ಯಾಗಿದೆ ಎಂದು ತಿಳಿಸಿದ್ದಾರೆ….

ಭಾರೀ ಮಳೆಗೆ ಕೊಚ್ಚಿ ಹೋದ ಬೆಳೆ
ಮೈಸೂರು

ಭಾರೀ ಮಳೆಗೆ ಕೊಚ್ಚಿ ಹೋದ ಬೆಳೆ

June 4, 2018

ಹನಗೋಡು: ಹನಗೋಡು ಹೋಬಳಿಯ ಗ್ರಾಮಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹತ್ತಾರು ಗ್ರಾಮಗಳಲ್ಲಿ ಬೆಳೆದಿದ್ದ ವಿವಿಧ ಬೆಳೆಗಳು ಜಲಾವೃತವಾಗಿ, ಕೆರೆಗಳಂತೆ ಗೋಚರಿಸುತ್ತಿದ್ದರೆ, ಕೆಲವೆಡೆ ಕೊಚ್ಚಿ ಹೋಗಿದೆ. ಹತ್ತಕ್ಕೂ ಹೆಚ್ಚು ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿದೆ. ಹನಗೋಡಿಗೆ ಸಮೀಪದ ಕಿರಂಗೂರು, ಹಿಂಡಗುಡ್ಲು, ದಾಸನಪುರ, ದೊಡ್ಡ ಹೆಜ್ಜೂರು, ಭಾರತವಾಡಿ, ಮಾದಹಳ್ಳಿ, ಹರಳಹಳ್ಳಿ ಮತ್ತಿತರ ಗ್ರಾಮಗಳಲ್ಲಿ ಭಾನುವಾರ ಮಧ್ಯಾಹ್ನ 1.30 ರಿಂದ 2.30ರವರೆಗೆ ಸುರಿದ ಭಾರೀ ಮಳೆಯು ಸಾಕಷ್ಟು ಅನಾಹುತ ಸೃಷ್ಟಿಸಿದೆ. ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದಿರುವ ಮುಸುಕಿನ ಜೋಳ, ತಂಬಾಕು, ಶುಂಠಿ,…

ಮೈಸೂರಲ್ಲಿ ಮಳೆ ಅವಾಂತರ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
ಮೈಸೂರು

ಮೈಸೂರಲ್ಲಿ ಮಳೆ ಅವಾಂತರ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

June 1, 2018

ಮೈಸೂರು: ಮಳೆಯಿಂದ ಅವಾಂತರ ಉಂಟಾಗಿದ್ದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ ಅವರು ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೈಸೂರಿನ ಕನಕಗಿರಿ, ಗುಂಡೂರಾವ್‍ನಗರ, ಮುನೇಶ್ವರ ಹಾಗೂ ಶ್ರೀರಾಂಪುರ ಬಡಾವಣೆಗಳಲ್ಲಿ ಪರಿಶೀಲನೆ ನಡೆಸಿದ ಅವರು, ಮಳೆಯಿಂದ ನೀರು ನುಗ್ಗಿ ತೀವ್ರ ಸಮಸ್ಯೆಯಾಗಿದೆ. ಸ್ಥಳದಲ್ಲಿ ಚರಂಡಿ ತೆರವುಗೊಳಿಸುವುದು, ಕಿರು ಸೇತುವೆಗಳ ನಿರ್ಮಾಣ, ಡೀ ಶೆಲ್ಟಿಂಗ್ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆ ಹಾಗೂ ಮುಡಾ ಅಧಿಕಾರಿಗಳಿಗೆ ಸೂಚಿಸಿದರು. ಗಣಪತಿ ಆಶ್ರಮದ ಹಿಂಭಾಗದ ತಗ್ಗು ಪ್ರದೇಶದಲ್ಲಿ ಚರಂಡಿ ನೀರು ಸರಾಗವಾಗಿ…

ತಾಲೂಕಿನ ವಿವಿಧೆಡೆ ಉತ್ತಮ ಮಳೆ
ಚಾಮರಾಜನಗರ

ತಾಲೂಕಿನ ವಿವಿಧೆಡೆ ಉತ್ತಮ ಮಳೆ

May 29, 2018

ಚಾಮರಾಜನಗರ:  ಚಾಮರಾಜನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಸೋಮವಾರ ಉತ್ತಮ ಮಳೆ ಯಾಯಿತು. ಮಧ್ಯಾಹ್ನ 3 ಗಂಟೆಯಿಂದ 4.30ರವರೆಗೆ ಸುರಿದ ಧಾರಾಕಾರ ಮಳೆ ಯಿಂದ ಜನ ಜೀವನ ಅಸ್ತವ್ಯಸ್ತವಾಯಿತು. ಮಳೆಯಿಂದ ರೈತರು ಹಾಗೂ ವನ್ಯಜೀವಿ ಪ್ರಿಯರಲ್ಲಿ ಸಂತಸ ಮೂಡಿಸಿದರೆ, ಇನ್ನೊಂದೆಡೆ ವಾಹನ ಸವಾರರು ಹಾಗೂ ನಗರದ ಜನರಿಗೆ ಕಿರಿಕಿರಿ ಉಂಟಾಯಿತು. ನಗರದ ಬಹುತೇಕ ಎಲ್ಲ ಪ್ರಮುಖ ರಸ್ತೆಗಳ ಅಭಿವೃದ್ಧಿ ಕಾಮಗಾರಿ ನಡೆ ಯುತ್ತಿದೆ. ರಸ್ತೆಗಳನ್ನು ಅಗೆಯಲಾಗಿದೆ. ಇದರಿಂದ ಮಳೆ ನೀರು ರಸ್ತೆ ತುಂಬೆಲ್ಲ ತುಂಬಿ ರಸ್ತೆಗಳು ಸಂಪೂರ್ಣ ಜಲಾವೃತ…

1 2 3
Translate »