ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಎ.ಹೆಚ್.ವಿಶ್ವನಾಥ್ ಹುಣಸೂರು: ಜೀತ ಹಾಗೂ ಮಲ ಹೊರುವ ಪದ್ಧತಿ ಹೋಗ ಲಾಡಿಸಿದ ಡಿ. ದೇವರಾಜ ಅರಸು ಅವರನ್ನು ಪೌರ ಕಾರ್ಮಿಕರು ಸ್ಮರಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಎ.ಹೆಚ್.ವಿಶ್ವನಾಥ್ ಅಭಿಪ್ರಾಯ ಪಟ್ಟರು. ನಗರದ ನಗರಸಭಾ ಕಚೇರಿ ಸಭಾಂಗಣ ದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸನ್ಮಾನ ಸಮಾ ರಂಭದಲ್ಲಿ ಮಾತನಾಡಿದ ಅವರು, ಪೌರ ಕಾರ್ಮಿಕರು ಮೊದಲು ತಮ್ಮ ಅರೋಗ್ಯ ರಕ್ಷಣೆಗೆ ಮುಂದಾಗಬೇಕು. ಜೊತೆಗೆ ನಿಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ…
ಶಿಕ್ಷಣದ ಜತೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆ ಅಗತ್ಯ
September 28, 2018ಹುಣಸೂರು: ಪ್ರತಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟು ವಟಿಕೆಗಳ ಜೊತೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ತಮ್ಮ ಜೀವನವನ್ನು ಶಕ್ತಿಯುತವಾಗಿ ಮತ್ತು ಮೌಲ್ಯಯುತವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಮೈಸೂರು ವಿವಿಯ ಮನೋವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಜಿ.ವೆಂಕಟೇಶ್ ಕುಮಾರ್ ತಿಳಿಸಿದರು. ನಗರದ ದೇವರಾಜ ಅರಸ್ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಎನ್‍ಎಸ್‍ಎಸ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾ ರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾಸ್ಥ್ಯ ಸಮಾಜದ ನಿರ್ಮಾಣ ಕ್ಕಾಗಿ ವಿದ್ಯಾರ್ಥಿಗಳು ಜೀವನದಲ್ಲಿ…
ಬೇಟೆಗೆ ತೆರಳುತ್ತಿದ್ದ ಮೂವರ ಬಂಧನ ಏಳು ಮಂದಿ ಪರಾರಿ
September 26, 2018ಹುಣಸೂರು: ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ಅಭಯಾರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೋಗುತ್ತಿದ್ದ ಮೂವರನ್ನು ಅರಣ್ಯ ಸಿಬ್ಬಂದಿ ಬಂಧಿಸಿದ್ದಾರೆ. ತಾಲೂಕಿನ ಹನಗೂಡು ಹೋಬಳಿ ಸಿಂಡೆನಹಳ್ಳಿ, ಚಿಕ್ಕೆಗೌಡನಕೊಪ್ಪಲು, ಹೊನ್ನೆನಹಳ್ಳಿ, ಕೊಳುವಿ ಗ್ರಾಮಗಳಿಗೆ ಸೇರಿದ ಸುಮಾರು ಹತ್ತು ಜನರ ತಂಡವೊಂದು ಪ್ರಾಣಿಗಳ ಬೇಟೆಗಾಗಿ ಮಾರಕಾಸ್ತ್ರಗಳೊಂದಿಗೆ ತೆರಳುವಾಗ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವನ್ಯಜೀವಿ ವಲಯದ ಸಣ್ಣಗದ್ದೆ ಗಸ್ತಿನ ಮೆಟ್ಲು ಹೊಲ ಅರಣ್ಯದಲ್ಲಿ ಗಸ್ತಿನಲ್ಲಿದ್ದ ವೀರನಹೊಸಳ್ಳಿ ವನ್ಯಜೀವಿ ವಲಯದ ಅರಣ್ಯ ಸಿಬ್ಬಂದಿಗೆ ಸಿಕ್ಕಿ ಬಿದ್ದಿದ್ದು, ಗುಂಪನ್ನು ಹಿಡಿಯಲೆತ್ನಿಸಿದಾಗ ಮೂವರು ಅರೋಪಿಗಳು ಸಿಕ್ಕಿ ಬಿದ್ದು,…
ವ್ಯವಸ್ಥಾಪಕ ರಾಮಪ್ಪ ಪೂಜಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಬದ್ಧ ಬ್ಯಾಂಕ್ ಅಧ್ಯಕ್ಷ ಎಸ್.ಚಂದ್ರಶೇಖರ್ ಸ್ಪಷ್ಟನೆ
September 19, 2018ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ(ಎಂಸಿಡಿಸಿಸಿ) ಬ್ಯಾಂಕ್‍ನ ಹುಣ ಸೂರು ಶಾಖೆ ವ್ಯವಸ್ಥಾಪಕ ರಾಮಪ್ಪ ಪೂಜಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಡಳಿತ ಮಂಡಳಿ ಬದ್ಧವಾಗಿದೆ ಎಂದು ಕೇಂದ್ರ ಬ್ಯಾಂಕ್‍ನ ಅಧ್ಯಕ್ಷ ಎಸ್.ಚಂದ್ರಶೇಖರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ರುವ ಅವರು ರಾಮಪ್ಪ ಪೂಜಾರ್ ಅವರು ಶಾಖೆಯ ವ್ಯವಸ್ಥಾಪಕರಾಗಿ ಅಧಿಕಾರ ದುರುಪಯೋಗಪಡಿಸಿಕೊಂಡು ತನ್ನ ವ್ಯಾಪ್ತಿಯಲ್ಲಿರುವ ಸಹಕಾರ ಸಂಘಗಳ ಹಣವನ್ನು ದುರ್ಬಳಕೆ ಮಾಡಿಕೊಂಡಿರುತ್ತಾರೆ ಎಂಬುದು ಮೇಲ್ನೋಟಕ್ಕೆ ವರದಿ ಯಾಗಿದ್ದು, ಇವರ ಮೇಲೆ ಕ್ರಿಮಿನಲ್…
ತ್ರಿಕೋನ ಪ್ರೇಮ ಪ್ರಕರಣದಲ್ಲಿ ಹತ್ಯೆ
September 18, 2018ಹುಣಸೂರು: ಯುವಕನೊಬ್ಬನ ನಿಗೂಢ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಹುಣಸೂರು ಪೊಲೀಸರು ಯಶಸ್ವಿಯಾಗಿದ್ದು, ಇದರೊಂದಿಗೆ ತ್ರಿಕೋನ ಪ್ರೇಮ ಪ್ರಕರಣವೇ ಹತ್ಯೆಗೆ ಕಾರಣ ವೆಂಬುದೂ ಬೆಳಕಿಗೆ ಬಂದಿದೆ. ತಾಲೂಕಿನ ಜಾಬಗೆರೆ ಗ್ರಾಮದ ನೀಲನಾಯ್ಕ ಅವರ ಪುತ್ರ ರಮೇಶ ನಾಯಕ(22)ನ ನಿಗೂಢ ಹತ್ಯೆ ಪ್ರಕರಣವನ್ನು ಭೇದಿಸಿದ್ದು, ಮೋದೂರು ಗ್ರಾಮದ ರಮೇಶ್ ಅವರ ಪುತ್ರ ಪುಟ್ಟನಾಯಕ ಹಾಗೂ 17 ವರ್ಷದ ಬಾಲಕನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಓರ್ವ ಯುವತಿಯನ್ನು, ಹತ್ಯೆಯಾದ ರಮೇಶ ನಾಯಕ ಹಾಗೂ ಕೊಲೆಗಾರ ಪುಟ್ಟನಾಯಕ ಇಬ್ಬರೂ ಪ್ರೇಮಿಸುತ್ತಿದ್ದರು ಎನ್ನಲಾಗಿದ್ದು,…
ಹೆಜ್ಜೇನು ದಾಳಿಗೆ ರೈತ ಬಲಿ ಮತ್ತೋರ್ವ ರೈತನಿಗೆ ತೀವ್ರ ಗಾಯ
September 16, 2018ಹುಣಸೂರು, ಸೆ.15(ಕೆಕೆ)- ಹೆಜ್ಜೇನು ದಾಳಿಗೆ ರೈತನೋರ್ವ ಸಾವನ್ನಪ್ಪಿ, ಮತೋರ್ವ ರೈತ ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಅಬ್ಬೂರು ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಹನಗೋಡು ಹೋಬಳಿ ಅಬ್ಬೂರು ಗ್ರಾಮದ ಚನ್ನಬಸವೇ ಗೌಡ ಎಂಬುವರ ಪುತ್ರ ಶಂಕರೇಗೌಡ(42) ಹೆಜ್ಜೇನು ದಾಳಿಗೆ ಸಾವನ್ನಪ್ಪಿದವ ನಾಗಿದ್ದು, ಈತನ ಸ್ನೇಹಿತ ರಾಮೇಗೌಡ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದಿನಂತೆ ಇಂದು ಬೆಳಿಗ್ಗೆ ಶಂಕರೇಗೌಡ ಮತ್ತು ರಾಮೇಗೌಡ ಜಮೀನಿಗೆ ತೆರಳಿದ ವೇಳೆ ಹಠಾತ್ತನೆ ಹೆಜ್ಜೇನು ಹಿಂಡು ಶಂಕರೇಗೌಡ ಮತ್ತು ರಾಮೇಗೌಡನ ಮೇಲೆ ದಾಳಿ…
ಹುಣಸೂರಲ್ಲಿ ಬೆಳಿಗ್ಗೆ ಪೂರ್ಣ ಬಂದ್, ಮಧ್ಯಾಹ್ನ ನಂತರ ವಹಿವಾಟು ಮಾಮೂಲು
September 11, 2018ಹುಣಸೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿ ಪಕ್ಷಗಳು ಹಾಗೂ ವಿವಿಧ ಸಂಘ ಟನೆಗಳು ಕರೆ ನೀಡಿದ ಭಾರತ್ ಬಂದ್‍ಗೆ ಹುಣಸೂರಿನಲ್ಲಿ ಬೆಳಿಗ್ಗೆ ಅಂಗಡಿ ಮುಂಗಟ್ಟು ಇನ್ನಿತರೆ ವಾಣಿಜ್ಯ ಕೇಂದ್ರ ಗಳು ಸಂಪೂರ್ಣ ಮುಚ್ಚಿ ಬೆಂಬಲ ವ್ಯಕ್ತಪಡಿಸಿದರೆ, ಮಧ್ಯಾಹ್ನದ ವೇಳೆಗೆ ಕೆಲವು ಅಂಗಡಿ ಮುಂಗಟ್ಟುಗಳು ತೆರೆದು ಎಂದಿನಂತೆ ವಹಿವಾಟು ನಡೆಯಿತು. ಇಂದಿನ ಬಂದ್‍ನಿಂದ ಅಂಗಡಿ ಮುಂಗಟ್ಟು ಇನ್ನಿತರೆ ವಾಣಿಜ್ಯ ಕೇಂದ್ರಗಳು ಬೆಳಿಗ್ಗೆ ಮುಚ್ಚಿದ್ದವು. ರಾಜ್ಯ ಸಾರಿಗೆ ಬಸ್‍ಗಳ ಸಂಚಾರ ಇಲ್ಲದೆ ಜನ ಪರದಾಡುವಂತಾ ಗಿತ್ತು….
ಬಸ್ ಸಂಚಾರಕ್ಕೆ ಶಾಸಕರಿಂದ ಚಾಲನೆ: ಬಸ್‍ನಲ್ಲೇ ಗ್ರಾಮಸ್ಥರಿಂದ ಸಮಸ್ಯೆ ಆಲಿಸಿದ ವಿಶ್ವನಾಥ್
September 9, 2018ಹಿರೀಕ್ಯಾತನಹಳ್ಳಿ: ಹುಣಸೂರು-ಮುಳ್ಳೂರು ಮಾರ್ಗವಾಗಿ ಕೆ.ಆರ್.ನಗರ ಹಾಗೂ ಹೆಜ್ಜೊಡ್ಲು-ರಾಯನಹಳ್ಳಿ-ಮಂಟಿಕೊಪ್ಪಲು ಮಾರ್ಗದ ಬಸ್ ಸಂಚಾರಕ್ಕೆ ಶಾಸಕ ಎಚ್.ವಿಶ್ವನಾಥ್ ಗಾವಡಗೆರೆ ಹೋಬಳಿಯ ಮುಳ್ಳೂರಿ ನಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಭಾಗದ ಬಹು ದಿನಗಳ ಬೇಡಿಕೆಯಂತೆ ಕೆ.ಆರ್.ನಗರ ಡಿಪೋದಿಂದ ಮುಳ್ಳೂರು, ತೊಂಡಾಳು, ಉಂಡುವಾಡಿ ಮಾರ್ಗ ಹುಣ ಸೂರು ಹಾಗೂ ಹುಣಸೂರು ಡಿಪೋದಿಂದ ಕೆ.ಆರ್.ನಗರ-ಹೆಜ್ಜೊಡ್ಲು-ರಾಯನ ಹಳ್ಳಿ-ಮಂಟಿಕೊಪ್ಪಲು ಮಾರ್ಗ ಹುಣ ಸೂರಿಗೆ ಸಂಪರ್ಕ ಕಲ್ಪಿಸುವ ಬಸ್‍ಗಳನ್ನು ನಿತ್ಯ ಬೆಳಿಗ್ಗೆ-ಸಂಜೆ ಎರಡು ಬಾರಿ ಒಡಾ ಡಲಿದೆ. ಜನರು…
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ
September 9, 2018ಹುಣಸೂರು: ಅಗತ್ಯ ವಸ್ತುಗಳ ಬೆಲೆ ಏರಿಸುತ್ತಿರುವ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ರ್ಸ್‍ವಾದಿ) ಸ್ಥಳೀಯ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಕಲ್ಪತರು ವೃತ್ತದಲ್ಲಿ ಸಮಾ ವೇಶಗೊಂಡ ಸಿಪಿಐ(ಎಂ) ಕಾರ್ಯರ್ಕತರು ಮೋದಿ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು. ನಂತರ ಭಾರತ ಕಮ್ಯನಿಸ್ಟ್ ಪಕ್ಷ (ಮಾಕ್ರ್ಸ್‍ವಾದಿ)ದ ಸ್ಥಳೀಯ ಸಮಿತಿ ಕಾರ್ಯದರ್ಶಿ ಜಗದೀಶ್ ಸೂರ್ಯ ಪ್ರತಿಭಟನಾಕಾ ರರನ್ನು ಉದ್ದೇಶಿಸಿ ಮಾತನಾಡಿ, ಅಚ್ಚೆ ದಿನ್ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರ್ಕಾರ ದೇಶ ಭಕ್ತಿ…
ಈಡಿಗರ ಸಮುದಾಯ ಭವನ ನಿರ್ಮಾಣಕ್ಕೆ 25 ಲಕ್ಷ ರೂ.
September 7, 2018ಹುಣಸೂರು: ತಾಲೂಕು ಆರ್ಯ ಈಡಿಗರ ಸಂಘದ ಸಮುದಾಯ ಭವನ ನಿರ್ಮಿಸಲು ಸಂಸದರ ನಿಧಿಯಿಂದ 25ಲಕ್ಷ ಹಣ ನೀಡುವುದಾಗಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ನಗರದ ಮುನೇಶ್ವರಕಾವಲ್ ಮೈದಾನದಲ್ಲಿ ಎರ್ಪಡಿಸಲಾಗಿದ್ದ ಶ್ರೀ ನಾರಾಯಣ ಗುರುಗಳ 164ನೇ ಜಯಂತೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿವೇಕನಾಂದ ಹಾಗೂ ನಾರಾಯಣಗುರು ಸಮಕಾಲೀನರು. ಸಮಾಜದ ಅಂಕು-ಡೊಂಕುಗಳನ್ನು ತೊಡೆದು ಹಾಕಲು ಬುದ್ದ-ಬಸವ-ಗಾಂಧಿ-ಅಂಬೇಡ್ಕರರಂತೆ ಸಮಾಜ ಮುಖಿ ಕೆಲಸಗಳಿಗೆ ತಮ್ಮನ್ನು ಮುಡುಪಾಗಿಸಿಕೊಂಡಿದ್ದರು ಎಂದರು. ಕೇರಳ ರಾಜ್ಯದಲ್ಲಿ ಹಿಂದೂ ಧರ್ಮ ಉಸಿರಾಡುತ್ತಿದ್ದರೆ ನಾರಾಯಣಗುರು ಕಾರಣ ಎಂದು ಅವರು ಹೆಸರಿನ…