ಮೈಸೂರು: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲ ಯದ (ಐಜಿಎನ್‍ಓಯು) ವಿವಿಧ ಕೋರ್ಸ್‍ಗಳಿಗೆ ಆನ್‍ಲೈನ್ ಪ್ರವೇಶಾತಿ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಇಗ್ನೋದ ಬೆಂಗಳೂರು ಪ್ರಾದೇಶಿಕ ಕೇಂದ್ರ ವಲಯದ ಸಹಾಯಕ ನಿರ್ದೇಶಕಿ ಡಾ.ಹೇಮಾಮಾಲಿನಿ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಭಾರತ ಸರ್ಕಾರದ ಮಾನವ ಸಂಪನ್ಮೂಲ ಸಚಿವಾಲಯದ ಅಧೀನದಲ್ಲಿ 1985ರಿಂದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ವಿವಿ ಇಗ್ನೋ, ಶಿಕ್ಷಣ ವಂಚಿತರಿಗೆ, ದುರ್ಬಲರಿಗೆ ಹಾಗೂ…