ಧ್ವಜಾರೋಹಣ ನೆರವೇರಿಸಿದ ಸಚಿವ ಹೆಚ್.ಡಿ.ರೇವಣ್ಣ, ಎಲ್ಲೆಡೆ ರಾರಾಜಿಸಿದ ತ್ರಿವರ್ಣ ಧ್ವಜ ಹಾಸನ: ನಗರ ಸೇರಿದಂತೆ ಜಿಲ್ಲಾದ್ಯಂತ ಬುಧವಾರ 72ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಸಂಭ್ರಮ- ಸಡಗರ ದಿಂದ ಆಚರಿಸಲಾಯಿತು. ಎಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿತ್ತು. ಮಕ್ಕಳು, ಅಧಿಕಾರಿ ಗಳು, ಸಂಘ-ಸಂಸ್ಥೆಗಳ ಪದಾಧಿಕಾರಿ ಗಳು ಸೇರಿದಂತೆ ಜನಪ್ರತಿನಿಧಿಗಳು ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಿದರು. ಹಾಸನ ವರದಿ: ನಗರದ ಜಿಲ್ಲಾ ಕ್ರೀಡಾಂ ಗಣದಲ್ಲಿ ಜಿಲ್ಲಾಡಳಿತ ವತಿಯಿಂದ 72ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು…