ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ಪುತ್ರಿ ಮರ್ಯಮ್ ಅವರಿಗೆ ಏಳು ವರ್ಷ ಶಿಕ್ಷೆ ವಿಧಿಸಿ ನ್ಯಾಷನಲ್ ಅಕೌಂಟಬಿಲಿಟಿ ಬ್ಯೂರೊ(ಎನ್‍ಎಬಿ) ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ. ಲಂಡನ್‍ನಲ್ಲಿ ನಾಲ್ಕು ಐಷಾರಾಮಿ ಫ್ಲಾಟ್‍ಗಳನ್ನು ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ 10 ವರ್ಷ ಹಾಗೂ ಪುತ್ರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಪನಾಮ ಪೇಪರ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿ…