Tag: Jammu and Kashmir

ಸಹಜ ಸ್ಥಿತಿಯತ್ತ ಜಮ್ಮು-ಕಾಶ್ಮೀರಶಾಲಾ, ಕಾಲೇಜು ಪ್ರಾರಂಭ, ನಿಷೇಧಾಜ್ಞೆ ತೆರವು
ಮೈಸೂರು

ಸಹಜ ಸ್ಥಿತಿಯತ್ತ ಜಮ್ಮು-ಕಾಶ್ಮೀರಶಾಲಾ, ಕಾಲೇಜು ಪ್ರಾರಂಭ, ನಿಷೇಧಾಜ್ಞೆ ತೆರವು

August 11, 2019

ಶ್ರೀನಗರ, ಆ.10- ಹಲವು ದಿನಗಳಿಂದ ಸ್ತಬ್ಧವಾಗಿದ್ದ ಜಮ್ಮು-ಕಾಶ್ಮೀರ ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿದ್ದು, 5 ಜಿಲ್ಲೆಗಳಲ್ಲಿ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದೆ. ಉಳಿದೆಡೆಯೂ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಹೇರಿದ್ದ ನಿಷೇಧಾಜ್ಞೆಯನ್ನು ತೆರವುಗೊಳಿ ಸಿದ್ದರಿಂದ ಸ್ಥಗಿತಗೊಂಡಿದ್ದ ಸಾಮಾನ್ಯ ಚಟುವಟಿಕೆಗಳು ಪುನರಾರಂಭಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮುವಿನ 5 ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿದ್ದು, ಅಲ್ಲದೆ, ಸರ್ಕಾರಿ ಕಚೇರಿಗಳ ಹಾಜರಾತಿ ಯಲ್ಲಿಯೂ ಹೆಚ್ಚಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಮ್ಮು, ಕಥುವಾ, ಸಾಂಬಾ, ಉಧಂಪುರ್ ಮತ್ತು ರಿಯಾಸಿಯ…

ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಶಾಂತ
ಮೈಸೂರು

ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಶಾಂತ

August 8, 2019

ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರ ಮತ್ತು ವಿಶೇಷ ಸ್ಥಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ಬುಧವಾರ ಪರಿಸ್ಥಿತಿ ಶಾಂತವಾಗಿತ್ತು. ಕೆಲವೆಡೆ ಮಾತ್ರ ಸಣ್ಣ ಪ್ರಮಾಣದಲ್ಲಿ ಕಲ್ಲು ತೂರಾ ಟದ ಪ್ರಕರಣಗಳು ವರದಿಯಾಗಿವೆ. ಕಲ್ಲು ತೂರಾಟ ದಲ್ಲಿ ಓರ್ವ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ. ಉಳಿದಂತೆ ರಾಜಧಾನಿ ಶ್ರೀನಗರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ. ಜನರು ದ್ವಿಚಕ್ರ ವಾಹನ ಮತ್ತು ಕಾರುಗಳಲ್ಲಿ ನಿರ್ಭೀತಿಯಿಂದ ಓಡಾಡುತ್ತಿದ್ದಾರೆ. ಅಂಗಡಿ ಮುಂಗಟ್ಟುಗಳು ತೆರೆಯುತ್ತಿವೆ. ಭದ್ರತೆಯ ದೃಷ್ಟಿಯಿಂದ ಹಲವು ಹೋರಾಟಗಾರರು, ರಾಜಕೀಯ ಮುಖಂಡರು…

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದು
ಮೈಸೂರು

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದು

August 6, 2019

ಪ್ರಧಾನಿ ಮೋದಿ ಸರ್ಕಾರದ ಐತಿಹಾಸಿಕ ನಿರ್ಧಾರ ನವದೆಹಲಿ, ಆ.5-ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370 ಮತ್ತು 35ಎ ವಿಧಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಿಸಿ ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಮಾತು ಉಳಿಸಿಕೊಂಡಿದ್ದಾರೆ. ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಕೈಗೊಂಡ ಈ ನಿರ್ಧಾರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯು ತ್ತಿವೆ. ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ…

ಯೋಧ ಔರಂಗಜೇಬ್‍ನ ಹತ್ಯೆ  ಹಿಂದೆ ಪಾಕ್‍ನ ಐಎಸ್‍ಐ ಕೈವಾಡ?
ದೇಶ-ವಿದೇಶ

ಯೋಧ ಔರಂಗಜೇಬ್‍ನ ಹತ್ಯೆ  ಹಿಂದೆ ಪಾಕ್‍ನ ಐಎಸ್‍ಐ ಕೈವಾಡ?

June 18, 2018

ನವದೆಹಲಿ:  ಯೋಧ ಔರಂಗಜೇಬ್‍ನ ಹತ್ಯೆ ಹಿಂದೆ ಪಾಕಿಸ್ತಾನದ ಐಎಸ್‍ಐ ಕೈವಾಡವಿದೆ ಎಂದು ಗುಪ್ತಚರ ಇಲಾಖೆ ಅನುಮಾನ ವ್ಯಕ್ತಪಡಿಸಿದೆ. ಭಯೋತ್ಪಾದಕ ರಿಂದ ಅಪಹರಣಕ್ಕೊಳಗಾಗಿದ್ದ ಯೋಧ ಔರಂಗಜೇಬ್‍ನ್ನು ಜಮ್ಮು-ಕಾಶ್ಮೀರದ ಪುಲ್ವಾಮ ದಲ್ಲಿ ಹತ್ಯೆ ಮಾಡಲಾಗಿತ್ತು. ಔರಂಗಜೇಬ್ ಹತ್ಯೆಯಲ್ಲಿ ಪಾಕಿಸ್ತಾನದ ಐಎಸ್‍ಐ, ಪಾಕ್‍ನ ಉಗ್ರ ಸಂಘಟನೆಗಳಾದ ಲಷ್ಕರ್-ಎ-ತಯ್ಬಾ(ಎಲ್‍ಇಟಿ) ಜೈಶ್-ಎ-ಮೊಹಮ್ಮದ್ ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕೈವಾಡವಿರುವ ಸಾಧ್ಯತೆ ಇದ್ದು, ಘಟನೆಗೆ ಹೊಣೆ ಹೊರದಂತೆ ಐಎಸ್‍ಐ ಉಗ್ರ ಸಂಘಟನೆಗಳಿಗೆ ಸೂಚಿಸಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ. ಔರಂಗಜೇಬ್‍ನ ಹತ್ಯೆಯ ನಂತರ ಐಎಸ್‍ಎಸ್…

Translate »