ಜಮ್ಮು-ಕಾಶ್ಮೀರ: ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ ನಡೆಸಿದ ಆರೋಪಿಗಳನ್ನು ಬಂಧಿಸಿರುವುದಾಗಿ ಜಮ್ಮು- ಕಾಶ್ಮೀರ ಪೆÇಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ. ಜನದಟ್ಟಣೆಯ ಬಸ್ ನಿಲ್ದಾಣದಲ್ಲಿ ಶಂಕಿತ ಉಗ್ರ ನಡೆಸಿದ ಗ್ರೆನೇಡ್ ಸ್ಫೋಟದಿಂದಾಗಿ 17 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟು, 32 ಜನರು ಗಾಯ ಗೊಂಡಿದ್ದರು. ಮೂವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷದ ಮೇನಿಂದಾಚೆಗೆ ಜಮ್ಮು ಬಸ್ ನಿಲ್ದಾಣದಲ್ಲಿ ಉಗ್ರರು ನಡೆಸಿರುವ 3ನೇ ಗ್ರೆನೇಡ್ ಸ್ಫೋಟ ಇದಾಗಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಗೆ…