ಜಾರಕಿಹೊಳಿ ಸಹೋದರರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಖಡಕ್ ನುಡಿ ಮರು ಮಾತನಾಡದೇ ಬಂಡಾಯದಿಂದ ಹಿಂದೆ ಸರಿದ ಬೆಳಗಾವಿ ದೊರೆಗಳು ಬೆಂಗಳೂರು: ವಿಧಾನಸಭಾ ಸದಸ್ಯತ್ವ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರುವುದಾದರೆ ಇಂದೇ ನಿರ್ಧಾರ ಕೈಗೊಳ್ಳಿ.ದಿನನಿತ್ಯ ನನಗೆ ನಿಮ್ಮಿಂದ ಒತ್ತಡ ಹೆಚ್ಚಾಗುತ್ತಿದೆ. ನೀವು ಇಂದು ನಿರ್ಧಾರ ಕೈಗೊಳ್ಳದಿದ್ದರೆ, ನಾನೇ ಒಂದು ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ ವಿರುದ್ಧ ಬಂಡಾಯ ಎದ್ದಿದ್ದ ಜಾರಕಿಹೊಳಿ ಕುಟುಂಬದವರಿಗೆ ಎಚ್ಚರಿಕೆ ನೀಡಿದ ವರಸೆ ಇದಾಗಿದೆ. ಬಂಡಾಯದ ಮುಂಚೂಣಿಯಲ್ಲಿದ್ದ ಸಚಿವ…
ಜಾರಕಿಹೊಳಿ ಸಹೋದರರ ಅಸಮಾಧಾನ ನಿವಾರಣೆ
September 19, 2018ಬೆಂಗಳೂರು: ಬೆಳಗಾವಿ ದೊರೆಗಳು (ಜಾರಕಿಹೊಳಿ ಸಹೋದರರು) ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಇಂದು ಭೇಟಿ ಮಾಡಿ, ಚರ್ಚೆ ನಡೆಸಿ, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡಿರುವುದಲ್ಲದೆ, ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಗರದ ಪಂಚತಾರಾ ಹೊಟೇಲ್ ಒಂದರಲ್ಲಿ ಗಣಿ ಉದ್ಯಮಿ ಹಾಗೂ ಶಾಸಕ ನಾಗೇಂದ್ರ ಜೊತೆಗೂಡಿ ಮುಖ್ಯಮಂತ್ರಿಯವರ ಜೊತೆ ಸುಮಾರು ಎರಡು ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿ, ತಮ್ಮ ಕೆಲವು ಬೇಡಿಕೆಗಳನ್ನು ಈಡೇರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಕೆಲವು ಬೇಡಿಕೆಗಳಿಗೆ ಕಾಂಗ್ರೆಸ್ ವರಿಷ್ಠರ ಮೇಲೆ ಒತ್ತಡ…
ನಾವೇ ಮೈತ್ರಿ ಸರ್ಕಾರ ಪತನಕ್ಕೆ ಡೆಡ್ಲೈನ್ ಫಿಕ್ಸ್ ಮಾಡ್ತೇವೆ
September 12, 2018ಬೆಂಗಳೂರು: ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮೂಗು ತೂರಿಸುವುದನ್ನು ನಿಲ್ಲಿಸದೇ ಇದ್ದರೆ ಸಮ್ಮಿಶ್ರ ಸರ್ಕಾರ ಪತನಕ್ಕೆ ನಾನೇ ಡೆಡ್ಲೈನ್ ಫಿಕ್ಸ್ ಮಾಡಬೇಕಾಗುತ್ತದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ. ಗೃಹ ಇಲಾಖೆ ಹೊಣೆ ಹೊತ್ತಿರುವ ಉಪ ಮುಖ್ಯಮಂತ್ರಿ ಡಾ|| ಜಿ. ಪರಮೇಶ್ವರ್ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜೊತೆ ಸುದೀರ್ಘ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ನಮಗೂ ತಾಕತ್ತಿದೆ, ಅದನ್ನು ಪ್ರದರ್ಶಿಸಲು ಅವಕಾಶ…
ಮೈತ್ರಿ ಸರ್ಕಾರ ಉರುಳಿಸಲು ಜಾರಕಿಹೊಳಿ ಸಹೋದರರ ಸಿದ್ಧತೆ
September 12, 2018ಬೆಂಗಳೂರು: ಗೌರಿ-ಗಣೇಶ ಹಬ್ಬದ ನಂತರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳುವ ಸ್ಪಷ್ಟ ಸೂಚನೆಗಳು ರಾಜ್ಯ ರಾಜಕೀಯ ವಲಯದಲ್ಲಿ ಕಂಡುಬರುತ್ತಿವೆ. ಜಾರಕಿಹೊಳಿ ಸಹೋದರರು ಸುಮಾರು 16 ಶಾಸಕರೊಂದಿಗೆ ಬಿಜೆಪಿ ಸೇರ್ಪಡೆಗೊಳ್ಳುವ ಮೂಲಕ ಮೈತ್ರಿ ಸರ್ಕಾರವನ್ನು ಉರುಳಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ಶಾಸಕ ಶ್ರೀರಾಮುಲು ಅವರು ಸಚಿವ ರಮೇಶ್ ಜಾರಕಿಹೊಳಿ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿರುವ ಕನಿಷ್ಠ 14 ಶಾಸಕರನ್ನು ಬಿಜೆಪಿಗೆ ಕರೆತರುವ ಹೊಣೆಗಾರಿಕೆಯನ್ನು ರಮೇಶ್ ಜಾರಕಿಹೊಳಿ ಅವರಿಗೆ ನೀಡಲಾಗಿದೆ. ಹಾಗೇನಾದರೂ…
ಲಕ್ಷ್ಮೀ ಹೆಬ್ಬಾಳ್ಕರ್, ಜಾರಕಿ ಹೊಳಿ ಸಹೋದರರ ಕದನ ವಿರಾಮ
September 8, 2018ಬೆಂಗಳೂರು: ರಾಜಕೀಯ ವಲಯದಲ್ಲಿ ಅದರಲ್ಲೂ ಮುಖ್ಯವಾಗಿ ಬೆಳಗಾವಿ ಕಾಂಗ್ರೆಸ್ ಪಾಳೆ ಯದಲ್ಲಿ ತೀವ್ರ ಕುತೂಹಲ ಕೆರಳಿಸಿ ರುವ ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸಹೋದರರ ನಡು ವಿನ ಕದನ ಮತ್ತಷ್ಟು ಬಿಗಡಾಯಿಸಿದೆ. ಬೆಳಗಾವಿ ಗ್ರಾಮೀಣ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವಿಚಾರ ದಲ್ಲಿ ಪಕ್ಷದ ಎರಡು ಬಣಗಳ ನಡುವೆ ಉಂಟಾಗಿದ್ದ ಭಿನ್ನಮತ ಲಕ್ಷ್ಮೀ ಹೆಬ್ಬಾಳ್ಕರ್ ಬಣದ ಮಹದೇವ್ ಪಾಟೀಲ್ ಅಧ್ಯಕ್ಷ ರಾಗಿ, ಬಾಪು ಸಾಹೇಬ್ ಜಮಾ ದಾರ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗುವ ಮೂಲಕ ಸದ್ಯಕ್ಕೆ ಕದನ…
ಇಂದು ಜಾರಕಿಹೊಳಿ ಸಹೋದರರು, ಲಕ್ಷ್ಮೀ ಹೆಬ್ಬಾಳ್ಕರ್ ಬಲ ಪ್ರದರ್ಶನದ ಕ್ಲೈಮ್ಯಾಕ್ಸ್
September 7, 2018ಬೆಂಗಳೂರು: ಬೆಳಗಾವಿ ಪಿಎಲ್ಡಿ ಬ್ಯಾಂಕ್ ಚುನಾ ವಣೆಗೆ ಸಂಬಂಧಿಸಿ ದಂತೆ ಜಾರಕಿಹೊಳಿ ಸಹೋದರರು ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡು ವಿನ ಬಲಾಬಲ ಪ್ರದ ರ್ಶನ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ನಾಳೆ ನಾನಾ ನೀನಾ ಎಂಬುದು ನಿರ್ಧಾರವಾಗಲಿದೆ. ಈ ಮಧ್ಯೆ ರಾಜ್ಯದ ಮೈತ್ರಿ ಸರ್ಕಾರಕ್ಕೆ ಕಂಟಕವಾಗಿ ಪರಿಣಮಿಸಿರುವ ಜಾರಕಿಹೊಳಿ ಸಹೋ ದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಜಟಾಪಟಿಗೆ ತೆರೆ ಎಳೆಯಲು ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಮುಂದಾಗಿದೆ. ನವದೆಹಲಿಯಲ್ಲಿ ನಡೆದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಪಾಲ್ಗೊಂಡಿದ್ದ ಕೆಪಿಸಿಸಿ…