Tag: JD(S)

ಪಪಂ ಚುನಾವಣೆ; ಜೆಡಿಎಸ್‍ನಿಂದ ಪ್ರಚಾರಕ್ಕೆ ಚಾಲನೆ
ಕೊಡಗು

ಪಪಂ ಚುನಾವಣೆ; ಜೆಡಿಎಸ್‍ನಿಂದ ಪ್ರಚಾರಕ್ಕೆ ಚಾಲನೆ

October 22, 2018

ವಿರಾಜಪೇಟೆ: ಜನಪ್ರತಿನಿಧಿ ಗಳು ಜನಪರ ಅಭಿವೃದ್ಧಿ ಕಾಮಗಾರಿ ಗಳಿಗೆ ಒತ್ತು ನೀಡುವುದರೊಂದಿಗೆ ಜನ ತೆಯ ಅಗತ್ಯ ಬೇಡಿಕೆಗಳನ್ನು ಈಡೇರಿ ಸಲು ಜಾತ್ಯಾತೀತ ಮನೋಭಾವನೆವುಳ್ಳ, ಜನತೆಯ ಸಮಸ್ಯೆಗಳಿಗೆ ನೇರವಾಗಿ ನಿರಂ ತರ ಸ್ಪಂದಿಸುವ ಅಭ್ಯರ್ಥಿಗಳನ್ನು ಮತ ದಾರರು ಬೆಂಬಲಿಸುವಂತಾಗಬೇಕು ಎಂದು ಜಾತ್ಯಾತೀತ ಜನತಾ ದಳದ ಜಿಲ್ಲಾ ಸಮಿತಿ ಅಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು. ಪಟ್ಟಣದ ಹದಿನೈದನೇ ವಾರ್ಡ್ ಗಾಂಧಿ ನಗರದಿಂದ ಪಟ್ಟಣ ಪಂಚಾಯಿತಿ ಚುನಾ ವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಪಿ.ಎ.ಮಂಜುನಾಥ್ ಅವರ ಪರ ಚುನಾ ವಣಾ…

ಇಂದು ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಸಭೆ
ಮೈಸೂರು

ಇಂದು ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಸಭೆ

September 22, 2018

ಬೆಂಗಳೂರು: ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಆಪರೇಷನ್ ಕಮಲ ನಡೆಸಲು ಯತ್ನಿಸುತ್ತಿದೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿರುವ ಬೆನ್ನಲ್ಲೇ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ತುರ್ತಾಗಿ ನಾಳೆ (ಸೆ.22) ಹಾಸನದಲ್ಲಿ ಕರೆಯಲಾಗಿದೆ. ಹಾಸನದ ಹೊಯ್ಸಳ ರೆಸಾರ್ಟ್‍ನಲ್ಲಿ ನಾಳೆ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಎಸ್‍ನ ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿ ಸಲಿದ್ದಾರೆ ಎಂದು ಹೇಳಲಾಗಿದೆ. ಈ ಸಭೆಯಲ್ಲಿ ಮೈತ್ರಿ…

ಮೈಸೂರು ಮೇಯರ್ ಸ್ಥಾನ ಜೆಡಿಎಸ್‍ಗೆ ದಕ್ಕುವ ಸಾಧ್ಯತೆ: ಕಾಂಗ್ರೆಸ್‍ಗೆ ಬೆಂಗಳೂರು, ತುಮಕೂರು ಪಾಲಿಕೆ ಬಿಟ್ಟು ಮೈಸೂರು ಉಳಿಸಿಕೊಳ್ಳಲು ಜೆಡಿಎಸ್ ತಂತ್ರಗಾರಿಕೆ
ಮೈಸೂರು

ಮೈಸೂರು ಮೇಯರ್ ಸ್ಥಾನ ಜೆಡಿಎಸ್‍ಗೆ ದಕ್ಕುವ ಸಾಧ್ಯತೆ: ಕಾಂಗ್ರೆಸ್‍ಗೆ ಬೆಂಗಳೂರು, ತುಮಕೂರು ಪಾಲಿಕೆ ಬಿಟ್ಟು ಮೈಸೂರು ಉಳಿಸಿಕೊಳ್ಳಲು ಜೆಡಿಎಸ್ ತಂತ್ರಗಾರಿಕೆ

September 6, 2018

ಮೈಸೂರು: ಅತಂತ್ರ ಸ್ಥಿತಿಯನ್ನೇ ದಾಳವಾಗಿರಿಸಿಕೊಂಡಿರುವ ಜಾತ್ಯಾತೀತ ಜನತಾದಳ ಹೇಗಾದರೂ ಮಾಡಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಮತ್ತೆ ಮೇಯರ್ ಸ್ಥಾನ ಗಿಟ್ಟಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಚುನಾವಣಾ ಫಲಿತಾಂಶ ಹೊರ ಬೀಳುತ್ತಿ ದ್ದಂತೆಯೇ ಹಳೇ ಮೈಸೂರು ಪ್ರಾಂತ್ಯದಲ್ಲಿ ಪ್ರಾಬಲ್ಯ ಹೊಂದಿರುವ ಜೆಡಿಎಸ್ ಮೈಸೂರು ಪಾಲಿಕೆಯಲ್ಲಿ ಕಾಂಗ್ರೆಸ್ ನೊಂದಿಗೆ ಕೈಜೋಡಿಸುವುದು ಅನಿವಾರ್ಯ ಎಂಬುದು ಖಚಿತವಾಗುತ್ತಿದ್ದಂತೆಯೇ ಮೇಯರ್ ಸ್ಥಾನ ಕೈ ತಪ್ಪದಂತೆ ಎಚ್ಚರ ವಹಿಸಿ ರಣತಂತ್ರ ರೂಪಿಸುತ್ತಿದೆ. ಅತಂತ್ರವಾಗಿರುವ ತುಮಕೂರು ಮಹಾನಗರ ಪಾಲಿಕೆಯಲ್ಲೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ ಮುಂದಾಗಿದ್ದು, ಬಿಜೆಪಿಯನ್ನು ಅಧಿಕಾರದಿಂದ ದೂರ…

ಆ. 13ಕ್ಕೆ ಸಂಪುಟ ವಿಸ್ತರಣೆ
ಮೈಸೂರು

ಆ. 13ಕ್ಕೆ ಸಂಪುಟ ವಿಸ್ತರಣೆ

August 7, 2018

ಕಾಂಗ್ರೆಸ್ ವರಿಷ್ಠರ ಸಲಹೆಯಂತೆ ಸಿಎಂ ಕುಮಾರಸ್ವಾಮಿ ನಿರ್ಧಾರ ಕಾಂಗ್ರೆಸ್‍ನ ಐದು, ಜೆಡಿಎಸ್‍ನ ಒಂದು ಸ್ಥಾನ ಭರ್ತಿಗೆ ತೀರ್ಮಾನ ಇದೇ ವೇಳೆ 30 ನಿಗಮ-ಮಂಡಳಿಗೂ ನೇಮಕ ಬೆಂಗಳೂರು:  ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಮಂತ್ರಿಮಂಡಲ ವಿಸ್ತರಿಸಲಿದ್ದಾರೆ. ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಲಹೆ ಮೇರೆಗೆ ಆಗಸ್ಟ್ 13 ರಂದು ಮಂತ್ರಿಮಂಡಲ ವಿಸ್ತರಣೆ ಜರುಗಲಿದೆ. ಮಂತ್ರಿಮಂಡಲ ವಿಸ್ತರಣೆಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಎಂಬ ರಾಜ್ಯ…

ಜನತಾ ಪರಿವಾರ ತೊರೆದವರ ಮತ್ತೆ ಒಗ್ಗೂಡಿಸಲು ಪ್ರಯತ್ನ: ನೂತನ ಜೆಡಿಎಸ್ ಸಾರಥಿ ಅಡಗೂರು ಹೆಚ್. ವಿಶ್ವನಾಥ್ ವಿಶ್ವಾಸ
ಮೈಸೂರು

ಜನತಾ ಪರಿವಾರ ತೊರೆದವರ ಮತ್ತೆ ಒಗ್ಗೂಡಿಸಲು ಪ್ರಯತ್ನ: ನೂತನ ಜೆಡಿಎಸ್ ಸಾರಥಿ ಅಡಗೂರು ಹೆಚ್. ವಿಶ್ವನಾಥ್ ವಿಶ್ವಾಸ

August 7, 2018

ಬೆಂಗಳೂರು:  ಜನತಾ ಪರಿವಾರದಿಂದ ದೂರವಾಗಿರುವ ನಾಯಕರನ್ನು ಮತ್ತೆ ಒಗ್ಗೂಡಿಸಲು ಪ್ರಯತ್ನಿಸಲಾಗುವುದು ಎಂದು ಜೆಡಿಎಸ್‍ನ ನೂತನ ರಾಜ್ಯಾಧ್ಯಕ್ಷ ಅಡಗೂರು ಹೆಚ್. ವಿಶ್ವನಾಥ್ ತಿಳಿಸಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರಕ್ಕೆ ಮುನ್ನ ದೇವಾಲಯಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಬಲಪಡಿಸಬೇಕಿದೆ ಎಂದರು. ನಂತರ ಪಕ್ಷದ ಕಚೇರಿಯಲ್ಲಿ ಮಾತನಾಡಿ, ಪಕ್ಷ ಸಂಘಟನೆ ಮೊದಲ ಗುರಿ, ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಮರ್ಥವಾಗಿ ಸಂಘಟಿಸುವಲ್ಲಿ ಒಟ್ಟಾಗಿ ಹೋಗಲು ಸಜ್ಜಾಗುತ್ತಿದ್ದೇವೆ, ಕೊಟ್ಟಿರುವ ದೊಡ್ಡ ಜವಾಬ್ದಾರಿ ನಿರ್ವಹಿಸಲು ಹಿರಿಯರು…

ಎ.ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ
ಮೈಸೂರು

ಎ.ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ

August 6, 2018

ಬೆಂಗಳೂರು: ಹಿರಿಯ ರಾಜ ಕೀಯ ಮುತ್ಸದ್ಧಿ, ಮಾಜಿ ಸಂಸದ, ಹುಣಸೂರು ಶಾಸಕ ಅಡಗೂರು ಹೆಚ್. ವಿಶ್ವನಾಥ್ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆದ ಹೆಚ್.ಡಿ.ದೇವೇಗೌಡ ಮತ್ತು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವನಾಥ್ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ರಾಜ್ಯಾಧ್ಯಕ್ಷರಾಗಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ವಿಶ್ವನಾಥ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಒಮ್ಮತದಿಂದ ಆಯ್ಕೆ ಮಾಡಲಾಯಿತು. ನಂತರ ನಡೆದ ಸಮಾರಂಭದಲ್ಲಿ…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ

August 6, 2018

ಬೆಂಗಳೂರು: ಮೈತ್ರಿ ಸರ್ಕಾರದ ದೋಸ್ತಿ ರಾಜ್ಯ ಮಟ್ಟದ ಚುನಾವಣೆಗೆ ಮಾತ್ರ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಘೋಷಿಸಿದ್ದು, ಮಿನಿ ಸಮರದ ಮೈತ್ರಿ ವದಂತಿಗೆ ತೆರೆ ಎಳೆದಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ. ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧೆ ಮಾಡಲಿದೆ. ರಾಜ್ಯ ಮಟ್ಟದಲ್ಲಿ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರಿಕೆಯಾಗಲಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬೇಡ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬೇಡ

August 4, 2018

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿ ಕೊಂಡು ಕಣಕ್ಕಿಳಿಯುವುದು ಬೇಡ, ಅಗತ್ಯ ಬಿದ್ದ ಕಡೆಗಳಲ್ಲಿ ಸ್ಥಳೀಯವಾಗಿ ಹೊಂದಾಣಿಕೆಗೆ ಅಲ್ಲಿನ ನಾಯಕರ ನಿರ್ಧಾರಕ್ಕೆ ಬಿಡಲು ಕಾಂಗ್ರೆಸ್ ಮುಂದಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಿದ್ಧತೆ ಹಾಗೂ ಮೈತ್ರಿಗೆ ಸಂಬಂಧಿಸಿದಂತೆ ಅಭಿಪ್ರಾಯ ಪಡೆಯಲು ಕೆಪಿಸಿಸಿ ಕಚೇರಿಯಲ್ಲಿಂದು ಕರೆಯಲಾಗಿದ್ದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಆದರೆ ರಾಜ್ಯ ಘಟಕದ ನಿರ್ಧಾರವನ್ನು ಕೇಂದ್ರ ವರಿಷ್ಠರಿಗೆ ತಿಳಿಸಲಾಗುವುದು. ಅವರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ. ಲೋಕಸಭೆ…

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎ.ಎಚ್.ವಿಶ್ವನಾಥ್?
ಮೈಸೂರು

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎ.ಎಚ್.ವಿಶ್ವನಾಥ್?

August 3, 2018

ಬೆಂಗಳೂರು: ಜಾತ್ಯಾತೀತ ಜನತಾದಳ ರಾಜ್ಯಾ ಧ್ಯಕ್ಷರಾಗಿ ಮಾಜಿ ಸಚಿವ, ಹುಣಸೂರಿನ ಶಾಸಕ ಅಡಗೂರು ಎಚ್. ವಿಶ್ವನಾಥ್ ನೇಮಕಗೊಳಿಸಲು ಜೆಡಿಎಸ್ ವರಿಷ್ಠರು ನಿರ್ಧರಿಸಿದ್ದು, ಆ.5ಕ್ಕೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜೆಡಿಎಸ್ ಮುಖ್ಯಸ್ಥ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶ್ವನಾಥ್ ಅವರನ್ನು ನೂತನ ರಾಜಾಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಉದ್ದೇಶಿಸಿದ್ದು, ಖುದ್ದು ದೇವೇಗೌಡರೇ ವಿಶ್ವನಾಥ್ ಅವರೊಂದಿಗೆ ಮಾತುಕತೆ ಕೂಡ ನಡೆಸಿದ್ದಾರೆ. ಆಗಸ್ಟ್ 5ರಂದು ನೂತನ ರಾಜ್ಯಾಧ್ಯಕ್ಷರ ನೇಮಕದ ಅಧಿಕೃತ ಘೋಷಣೆ ಹೊರಬೀಳಲಿದೆ. ಪ್ರಸ್ತುತ ಜೆಡಿಎಸ್ ಪಕ್ಷದ…

ಜೆಡಿಎಸ್ ಮಡಿಕೇರಿ ನಗರಾಧ್ಯಕ್ಷ ರಾಜೀನಾಮೆ
ಕೊಡಗು

ಜೆಡಿಎಸ್ ಮಡಿಕೇರಿ ನಗರಾಧ್ಯಕ್ಷ ರಾಜೀನಾಮೆ

August 1, 2018

ಮಡಿಕೇರಿ: ಜೆಡಿಎಸ್ ಮಡಿಕೇರಿ ನಗರ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರು ವುದಾಗಿ ಬಿ.ವೈ.ರಾಜೇಶ್ ಯಲ್ಲಪ್ಪ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಕ್ಷದ ಮುಖಂಡರು ಹಾಗೂ ಮಾಜಿ ಸಚಿವ ಬಿ.ಎ.ಜೀವಿಜಯ ಅವರಿಗೆ ರಾಜೀನಾಮೆ ಸಲ್ಲಿಸಿರುವುದಾಗಿ ಹೇಳಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ರಾಜೀನಾಮೆ ನೀಡಿರು ವುದರಿಂದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸುಗಮವಾಗಿ ನಡೆಯಲು, ಪಕ್ಷದ ಪುನರ್ ರಚನೆ ಮತ್ತು ಪುನರ್ ಸಂಘಟನೆ ಬಲಯುತ ವಾಗಬೇಕೆನ್ನುವ ಉದ್ದೇಶದಿಂದ ನಗರಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ರಾಜೇಶ್ ಯಲ್ಲಪ್ಪ…

1 2 3 4 5 9
Translate »