ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಆಡಳಿತಾರೂಢ ಎನ್‍ಡಿಎ ಸರ್ಕಾರವು 2ನೇ ಅವಧಿಯ ಮೊದಲ ವರ್ಷವನ್ನು ಪೂರೈಸಿರುವ ಹಿನ್ನೆಲೆ ಯಲ್ಲಿ ನಗರದಲ್ಲಿ ರಾಜ್ಯ ಬಿಜೆಪಿಯು ವರ್ಚುವಲ್ ರ್ಯಾಲಿ ಯೊಂದನ್ನು ಇದೇ ಭಾನುವಾರ ನಡೆಸುತ್ತಿದ್ದು, ರ್ಯಾಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾಷಣ ಮಾಡಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು, ರ್ಯಾಲಿ ಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷರು ಆತ್ಮ ನಿರ್ಭರ ಭಾರತ ಕುರಿತು ಮಾತನಾಡಲಿದ್ದಾರೆ. ಭಾನುವಾರ ಸಂಜೆ 6…