Tag: K.C. Venugopal

ಕಾಂಗ್ರೆಸ್‍ನಲ್ಲೀಗ ಖಾತೆ ಕ್ಯಾತೆ
ಮೈಸೂರು

ಕಾಂಗ್ರೆಸ್‍ನಲ್ಲೀಗ ಖಾತೆ ಕ್ಯಾತೆ

December 27, 2018

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಸಂಪುಟಕ್ಕೆ ಹೊಸದಾಗಿ ಸೇರ್ಪಡೆ ಗೊಂಡಿರುವ ಎಂಟು ಮಂತ್ರಿಗಳಿಗೆ ಖಾತೆ ಹಂಚಿಕೆ ಮಾಡಲು ಇಂದು ಸೇರಿದ್ದ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ವಿಫಲಗೊಂಡಿದೆ. ಅಷ್ಟೇ ಅಲ್ಲ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಡುವೆ ಕಾವೇರಿದ ಮಾತಿನ ಚಕಮಕಿ ನಡೆದಿದೆ. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಕೆಲವು ಹಿರಿಯ ಸಚಿವರು ತಮ್ಮ ಬಳಿ ಇರುವ ಹೆಚ್ಚುವರಿ ಖಾತೆಗಳನ್ನು ಬಿಟ್ಟು ಕೊಡದಿ ರಲು ಪಟ್ಟು ಹಿಡಿದಿರುವುದೇ ಇದಕ್ಕೆ ಕಾರಣ….

ಸರ್ಕಾರ ಉಳಿಸ್ಕೋತ್ತೀರ? ಚುನಾವಣೆಗೆ ಹೋಗೋಣ್ವ
ಮೈಸೂರು

ಸರ್ಕಾರ ಉಳಿಸ್ಕೋತ್ತೀರ? ಚುನಾವಣೆಗೆ ಹೋಗೋಣ್ವ

September 17, 2018

ಬೆಂಗಳೂರು:  ಬಿಜೆಪಿಯವರು ಆಪರೇಷನ್ ಕಮಲ ಮಾಡಿ ತೊಂದರೆ ಕೊಡುವುದಕ್ಕಿಂತಲೂ ಹೆಚ್ಚಾಗಿ ಕಾಂಗ್ರೆಸ್‍ನವರು ಒಳಗೊಳಗೆ ನಡೆಸುತ್ತಿರುವ ಕುತಂತ್ರಗಳೇ ದೊಡ್ಡ ಸಮಸ್ಯೆಯಾಗಿದೆ… ನೀವು ಸರ್ಕಾರ ಉಳಿಸಿಕೊಳ್ಳು ತ್ತೀರಾ? ಇಲ್ಲಾ ನಾನೇ ಸರ್ಕಾರ ಬಿಟ್ಟು ಹೋಗಬೇಕಾ… ಚುನಾವಣೆಗೆ ಹೋಗ್ಬೇಕಾ? ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬಳಿ ಕಿಡಿಕಾರಿದರು ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ಜಾರಕಿಹೊಳಿ ಸಹೋದರರ ಬಂಡಾಯದಿಂದಾಗಿ ಮೈತ್ರಿ ಸರ್ಕಾರ ಉರುಳುತ್ತದೆ ಎಂಬ ಸುದ್ದಿಗಳ ಹಿನ್ನೆಲೆಯಲ್ಲಿ ಕಳೆದ ರಾತ್ರಿ ವಿದೇಶದಿಂದ ವಾಪಸ್ಸಾದ ಸಿದ್ದರಾಮಯ್ಯ…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬೇಡ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬೇಡ

August 4, 2018

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿ ಕೊಂಡು ಕಣಕ್ಕಿಳಿಯುವುದು ಬೇಡ, ಅಗತ್ಯ ಬಿದ್ದ ಕಡೆಗಳಲ್ಲಿ ಸ್ಥಳೀಯವಾಗಿ ಹೊಂದಾಣಿಕೆಗೆ ಅಲ್ಲಿನ ನಾಯಕರ ನಿರ್ಧಾರಕ್ಕೆ ಬಿಡಲು ಕಾಂಗ್ರೆಸ್ ಮುಂದಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಿದ್ಧತೆ ಹಾಗೂ ಮೈತ್ರಿಗೆ ಸಂಬಂಧಿಸಿದಂತೆ ಅಭಿಪ್ರಾಯ ಪಡೆಯಲು ಕೆಪಿಸಿಸಿ ಕಚೇರಿಯಲ್ಲಿಂದು ಕರೆಯಲಾಗಿದ್ದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಆದರೆ ರಾಜ್ಯ ಘಟಕದ ನಿರ್ಧಾರವನ್ನು ಕೇಂದ್ರ ವರಿಷ್ಠರಿಗೆ ತಿಳಿಸಲಾಗುವುದು. ಅವರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ. ಲೋಕಸಭೆ…

ಬಜೆಟ್ ಅಧಿವೇಶನದ ನಂತರ ನಿಗಮ-ಮಂಡಳಿ ಅಧ್ಯಕ್ಷರ ನೇಮಕ
ಮೈಸೂರು

ಬಜೆಟ್ ಅಧಿವೇಶನದ ನಂತರ ನಿಗಮ-ಮಂಡಳಿ ಅಧ್ಯಕ್ಷರ ನೇಮಕ

July 2, 2018

ಬೆಂಗಳೂರು: ಬಜೆಟ್ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದರು. ಸಮನ್ವಯ ಸಮಿತಿ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದಿನ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಬಜೆಟ್ ಅಧಿವೇಶನದ ನಂತರ ಅದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳನ್ನು 20:10 ಅನುಪಾತದಲ್ಲಿ ಹಂಚಿಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ…

ತಲಚೇರಿ-ಮೈಸೂರು ರೈಲು ಮಾರ್ಗ ಯೋಜನೆ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತೆಗೆದು ಹಾಕುವಂತೆ
ಕೊಡಗು, ಮೈಸೂರು

ತಲಚೇರಿ-ಮೈಸೂರು ರೈಲು ಮಾರ್ಗ ಯೋಜನೆ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತೆಗೆದು ಹಾಕುವಂತೆ

June 24, 2018

ಕೊಡಗು ಮೂಲಕ ವಿನಾಶಕಾರಿ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಮೇಲೆ ವೇಣುಗೋಪಾಲ್ ಒತ್ತಡ: ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಗೆ ಪತ್ರ ಬರೆದ ಕರ್ನಲ್ (ನಿವೃತ್ತ) ಸಿ.ಪಿ.ಮುತ್ತಣ್ಣ ಮಡಿಕೇರಿ/ಮೈಸೂರು: ಕೊಡಗು ಮೂಲಕ ವಿವಾದಿತ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಆ ಸ್ಥಾನದಿಂದ ತೆಗೆದು ಹಾಕ ಬೇಕೆಂದು ಕೊಡಗು ವನ್ಯಜೀವಿ…

Translate »