ಗೋಣಿಕೊಪ್ಪಲು: ಇಲ್ಲಿನ ಕಾವೇರಿ ಕಾಲೇಜಿನಲ್ಲಿ ಫೀಲ್ಡ್ ಮಾರ್ಷಲ್ ಕೊಡಂದೇರ ಎಂ.ಕಾರಿಯಪ್ಪ ಅವರ ಜನ್ಮ ದಿನ ಆಚರಿಸಲಾಯಿತು. ಈ ಸಂದರ್ಭ ಕಾರಿಯಪ್ಪನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ನಂತರ ಕಾಲೇಜು ಆವರಣದಲ್ಲಿರುವ ಫೀಲ್ಢ್ ಮಾರ್ಷಲ್ ಕಾರಿಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರುಗಳ ಜೋಡಿ ಪ್ರತಿಮೆಗಳಿಗೆ ಪುಷ್ಪ ಗುಚ್ಚ ಅರ್ಪಿಸಿ ನಮನ ಸಲ್ಲಿಸಲಾಯಿತು. ಈ ಸಂದರ್ಭ ಎನ್‍ಎಸ್‍ಎಸ್ ಸ್ವಯಂ ಸೇವಕಿ ಅಂಜುಷ, ಕಾರಿಯಪ್ಪ ಅವರ ಬಗ್ಗೆ ಮಾಹಿತಿ ನೀಡಿ, ಭಾರತೀಯ ಸೈನ್ಯದಲ್ಲಿ ಶಿಸ್ತು ಹಾಗೂ ಸಮಯಪಾಲನೆ ಮೂಡಿ ಸಿದ, ಕರ್ನಾಟಕ ಹಾಗೂ…