ಮಂಗಳೂರು, ಅ.11-ವಿಶ್ವವಿಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲ ನಾಥ್ (70) ವಯೋಸಹಜ ಅನಾ ರೋಗ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 1949ರ ಡಿಸೆಂಬರ್ 11ರಂದು ಜನಿ ಸಿದ ಗೋಪಾಲನಾಥ್ ಅವರು ಸ್ಯಾಕ್ಸೋ ಫೆÇೀನ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆ ಯಿಂದ ವಿಶ್ವಪ್ರಸಿದ್ಧಿ ಪಡೆದಿದ್ದರು. ಕೆಲವು ದಿನಗಳಿಂದ ಅನಾರೋಗ್ಯ ದಿಂದ ಬಳಲುತ್ತಿದ್ದ ಗೋಪಾಲನಾಥ್ ಅವರು ಮಂಗಳೂರು ಎ.ಜೆ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪತ್ನಿ ಸರೋಜಿನಿ, ಪುತ್ರರಾದ ಸಂಗೀತ ನಿರ್ದೇಶಕ ಮಣಿಕಾಂತ ಕದ್ರಿ, ಗುರು ಪ್ರಸಾದ್…