ಬೆಂಗಳೂರು: ಕನ್ನಡ ಚಿತ್ರರಂಗದ ನಟರು ಮತ್ತು ನಿರ್ಮಾಪಕರ ಮನೆ ಹಾಗೂ ಕಚೇರಿಗಳ ಮೇಲೆ ನಡೆಸಿದ ದಾಳಿ ವೇಳೆ 109 ಕೋಟಿ ರೂ. ಮೌಲ್ಯದ ಅಘೋಷಿತ ಆಸ್ತಿ ಪತ್ತೆಯಾಗಿದ್ದು, 2.85 ಕೋಟಿ ನಗದು ಹಾಗೂ 25.3 ಕೆ.ಜಿ. ಚಿನ್ನಾಭರಣ ಸೇರಿ ಒಟ್ಟು 11 ಕೋಟಿ ರೂ. ಜಪ್ತಿ ಮಾಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ತನಿಖಾ ತಂಡ ಭಾನುವಾರ ಸಂಜೆ ಅಧಿಕೃತವಾಗಿ ಘೋಷಿಸಿದೆ. ಚಿತ್ರನಟರಾದ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಸುದೀಪ್, ಯಶ್, ನಿರ್ಮಾಪಕರಾದ ವಿಜಯ್ ಕಿರಂಗದೂರು,…