ಮೈಸೂರಿನ ಪ್ರತಿಭೆಗಳೇ ಸೇರಿ ಒಂದು ಕುತೂಹಲಕರವಾದ ಚಿತ್ರವೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ, ಇದೀಗ ಬಿಡುಗಡೆಗೆ ಸಿದ್ಧವಾಗಿದೆ. ಶ್ರೀ ರಾಗಶ್ರೀ ಫಿಲಂಸ್ ಪ್ರೊಡಕ್ಷನ್ಸ್ ವತಿಯಿಂದ ‘ತಿರುವು’ ಚಿತ್ರ ನಿರ್ಮಾಣವಾಗಿದ್ದು, ಏಪ್ರಿಲ್‍ನಲ್ಲಿ ಬಿಡುಗಡೆಯಾಗಲಿದೆ. ಒಂದು ಕೊಲೆಯ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ ‘ತಿರುವು’ ಪ್ರತಿ ಹಂತದಲ್ಲೂ ಪ್ರೇಕ್ಷಕರನ್ನು ಕುತೂಹಲ ಗೊಳಿಸುತ್ತದೆ. ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಪಡೆದಿದ್ದು, ಇದೊಂದು ಸದಭಿರುಚಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮೈಸೂರು, ಮಂಡ್ಯ, ಶ್ರೀರಂಗಪಟ್ಟಣ ಸುತ್ತಮುತ್ತಲ ಸ್ಥಳೀಯ ಪ್ರಾಕೃತಿಕ ಲೋಕೇಶನ್‍ನಲ್ಲಿ ಚಿತ್ರೀಕರಣಗೊಂಡಿರುವ ತಿರುವು…
ಮೈಸೂರು
ಜು.6ಕ್ಕೆ `ಪರಸಂಗ-ತಿಮ್ಮನ ಕಥೆ’ ಚಿತ್ರ ರಾಜ್ಯಾದ್ಯಂತ ಬಿಡುಗಡೆ
July 1, 2018ಮೈಸೂರು: ದ್ಯಾ ಸಿನಿಹೌಸ್ ಬ್ಯಾನರ್‍ನಡಿ ನಿರ್ಮಾಣಗೊಂಡಿರುವ ಹಳ್ಳಿಯೊಂದರಲ್ಲಿ ನಡೆದ ನೈಜ ಘಟನೆಯಾಧಾರಿತ ಚಿತ್ರ `ಪರಸಂಗ-ತಿಮ್ಮನ ಕಥೆ’ ಜು.6ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ಚಿತ್ರ ನಿರ್ದೇಶಕ ಕೆ.ಎಂ.ರಘು ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದ ನೈಜ ಘಟನೆಯ ಕಥಾಹಂದರದ ಸಿನಿಮಾ ಇದಾಗಿದ್ದು, ಚಿತ್ರದ ಬಹುತೇಕ ಚಿತ್ರೀಕರಣ ಮೈಸೂರು ನಗರ ಸೇರಿದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ನಡೆದಿರುವುದು ವಿಶೇಷ ಎಂದು ಹೇಳಿದರು. ನಾಯಕರಾಗಿ ಮಿತ್ರ ಹಾಗೂ ನಾಯಕಿಯಾಗಿ ಅಕ್ಷತಾ…