ತಿ.ನರಸೀಪುರ: ಮುಂಬರುವ ಲೋಕಸಭಾ ಚುನಾವಣೆ ಗೆಲುವಿಗೆ ಮುನ್ನುಡಿಯಾಗಲು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಕಾರ್ಯಕರ್ತರು ಹಾಗೂ ಮುಖಂಡರು ಸಂಘಟಿತರಾಗಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಕಾ.ಪು.ಸಿದ್ದಲಿಂಗಸ್ವಾಮಿ ಹೇಳಿದರು. ಪಟ್ಟಣದ ವಿವೇಕಾನಂದ ನಗರದಲ್ಲಿರುವ ವೀರಶೈವ ವಿದ್ಯಾರ್ಥಿ ನಿಲಯದಲ್ಲಿ ಶನಿವಾರ ನಡೆದ ಪುರಸಭೆ ಚುನಾವಣಾ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಪಕ್ಷದ ಕಾರ್ಯಕರ್ತರು ಸಂಘಟಿತರಾಗದೆ ಯಾವುದೇ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಮುಖಂಡರೆಲ್ಲರೂ ಒಗ್ಗೂಡಿ, ಗೆಲ್ಲುವಂತಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ತಿ.ನರಸೀಪುರ ಪುರಸಭೆಯಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಲು ಸಾಧ್ಯವಿದೆ…