ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ಹೊಸ ವರ್ಷದ ರಾತ್ರಿ ಕಫ್ರ್ಯೂ ಇರಲ್ಲ ಉಡುಪಿ,ಡಿ.3-ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಡಿ.5 ಕರ್ನಾ ಟಕ ಬಂದ್ ನಡೆಸಲು ಅವಕಾಶವಿಲ್ಲ. ಆ ದಿನ ಎಲ್ಲಾ ಸರ್ಕಾರಿ ಕಚೇರಿಗಳು ದಿನನಿತ್ಯದಂತೆ ನಡೆಯುತ್ತವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಬಂದ್ ಮಾಡಿದರೆ ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ ಆಗುತ್ತದೆ. ಬಂದ್ ಮಾಡ ಬೇಡಿ ಎಂದು ಸಿಎಂ ಜೊತೆ ನಾನೂ ಮನವಿ ಮಾಡುತ್ತೇನೆ ಎಂದರು. ಹೊಸ ವರ್ಷಾಚರಣೆ ಮತ್ತು…
ಮೈಸೂರಲ್ಲಿ ಪ್ರತಿಭಟನೆಗೆ ಸೀಮಿತವಾಗುವುದೇ ನಾಳಿನ ಬಂದ್?
December 4, 2020ಮೈಸೂರು, ಡಿ.3(ಆರ್‍ಕೆ)-ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿರುವುದರಿಂದ ಕನ್ನಡ ಪರ ಸಂಘಟನೆ ಗಳು ಡಿ.5ರಂದು ಕರೆ ನೀಡಿರುವ ಕರ್ನಾಟಕ ಬಂದ್ ಮೈಸೂರಿನಲ್ಲಿ ಪ್ರತಿಭಟನೆಗೆ ಸೀಮಿತ ವಾಗಬಹುದೇ ಎಂಬ ಪ್ರಶ್ನೆ ಉದ್ಭವಿಸಿದೆ. ರಾಜ್ಯ ಸರ್ಕಾರ ಘೋಷಿಸಿರುವ ಮರಾಠ ಅಭಿವೃದ್ಧಿ ನಿಗಮ ರದ್ದುಗೊಳಿಸುವಂತೆ ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿರುವ ಬಂದ್‍ಗೆ ಬೆಂಬಲ ಸೂಚಿಸಲು ಬಹುತೇಕ ಸಂಘ-ಸಂಸ್ಥೆಗಳು ನಿರಾಕರಿಸಿರುವುದರಿಂದ ಮೈಸೂರಲ್ಲಿ ಕೇವಲ ಪ್ರತಿಭಟನೆಗಷ್ಟೇ ಸೀಮಿತ ವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಡಿ.5ರ ಕರ್ನಾಟಕ ಬಂದ್‍ಗೆ…
ಬಲವಂತ ಬಂದ್‍ಗೆ ಮುಂದಾದರೆ ಕಠಿಣ ಕ್ರಮ
November 22, 2020ಬೆಂಗಳೂರು, ನ.21(ಕೆಎಂಶಿ)- ಸಂಪುಟ ವಿಸ್ತರಣೆ ಬಗ್ಗೆ ಮೌನ ವಹಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ, ಬಲವಂತದಿಂದ ಬಂದ್ ಮಾಡಿದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಮಂತ್ರಿಮಂಡಲವನ್ನು ಮೂರು ನಾಲ್ಕು ದಿನದಲ್ಲಿ ವಿಸ್ತರಿಸುವುದಾಗಿ ಹೇಳುತ್ತಿದ್ದರು. ಅದೇ ಪ್ರಶ್ನೆಯನ್ನು ಇಂದು ಪತ್ರಕರ್ತರು ಕೇಳಿದಾಗ ಕೋಪಗೊಂಡ ಮುಖ್ಯಮಂತ್ರಿಯವರು, ಏನೂ ಉತ್ತರ ನೀಡದೆ ತೆರಳಿದರು. ಅಷ್ಟೇ ಅಲ್ಲ, ಮರಾಠ ನಿಗಮದ ಆದೇಶವನ್ನು ಹಿಂದಕ್ಕೆ ಪಡೆ ಯುವ…
ಮೈಸೂರಲ್ಲಿ ಸಾರಿಗೆ ಬಸ್ ತಡೆದ ಸಂಸದ, ಶಾಸಕರೂ ಸೇರಿದಂತೆ 75 ಮಂದಿ ಬಂಧನ
May 29, 2018ಮೈಸೂರು: ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಮಾಡಿರುವ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್ ಅನ್ನು ಮೈಸೂರಿನಲ್ಲಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆ ಬಸ್‍ಗಳ ಸಂಚಾರಕ್ಕೆ ಅಡ್ಡಿ ಪಡಿಸಲು ಮುಂದಾದ ಸಂಸದ ಪ್ರತಾಪ ಸಿಂಹ, ಶಾಸಕರುಗಳಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಸೇರಿದಂತೆ ಬಿಜೆಪಿಯ 75ಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೋಮವಾರ ಬೆಳಿಗ್ಗೆ ಪೊಲೀಸರು ಬಂಧಿಸಿ, ಮಧ್ಯಾಹ್ನ ಬಿಡುಗಡೆ ಮಾಡಿದರು. ರಾಜ್ಯ ಬಿಜೆಪಿ ಕರೆ ನೀಡಿದ್ದ ‘ಕರ್ನಾಟಕ ಬಂದ್’ ಹಿನ್ನೆಲೆಯಲ್ಲಿ ಮೈಸೂರಿನ ಬಸ್ ನಿಲ್ದಾಣ, ಬಸ್ ಡಿಪೋಗಳ…
ಬಂದ್‍ಗೆ ಹಾಸನದಲ್ಲಿ ಮಿಶ್ರ ಪ್ರತಿಕ್ರಿಯೆ
May 29, 2018ಹಾಸನ: ರೈತರ ಸಾಲಮನ್ನಾ ಮಾಡುವಂತೆ ಸಿಎಂ ಹೆಚ್‍ಡಿ. ಕುಮಾರ ಸ್ವಾಮಿಗೆ ಒತ್ತಡ ಹೇರಲು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದ ಬಂದ್‍ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಗ್ಗೆಯಿಂದಲೇ ನಗರದ ಹೇಮಾವತಿ ಪ್ರತಿಮೆ ಬಳಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಬೆಂಬಲ: ಜೊತೆಗೆ ಎತ್ತಿನಗಾಡಿ, ಟ್ರಾಕ್ಟರ್ ಮೂಲಕ ರೈತರು ಆಗಮಿಸಿ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದರು. ನಂತರ ನಗರದ ಪ್ರಮುಖ ರಸ್ತೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಸಿರು ಶಾಲುಗಳನ್ನು ಕೊರಳಿಗೆ ಹಾಕಿಕೊಂಡು…
ಬೇಲೂರಿನಲ್ಲೂ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ
May 29, 2018ಬೇಲೂರು: ರೈತರ ಸಾಲ ಮನ್ನಾ ಮಾಡುವಂತೆ ಒತ್ತಡ ಹೇರಲು ಬಿಜೆಪಿ ಕರೆ ನೀಡಿದ್ದ ಬಂದ್‍ಗೆ ಪಟ್ಟಣ ದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬಂದ್ ಹಿನ್ನೆಲೆ ಪಟ್ಟಣದ ಶ್ರೀ ಚನ್ನ ಕೇಶವ ದೇವಾಲಯದ ಮುಂಭಾಗದಿಂದ ಬಿಜೆಪಿ ಪರಾಜಿತ ಅಭ್ಯರ್ಥಿ ಹುಲ್ಲಹಳ್ಳಿ ಸುರೇಶ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿ, ಪಟ್ಟಣದ ಅಂಗಡಿ-ಮುಂಗಟ್ಟುಗಳ ಬಳಿ ತೆರಳಿ ಅಂಗಡಿ ಬಾಗಿಲು ಮುಚ್ಚುವಂತೆ ಮನವಿ ಮಾಡಿ ಬಂದ್ ಆಚರಣೆಗೆ ಮುಂದಾದರು. ಈ ಸಂದರ್ಭ ಕೆಲ ಅಂಗಡಿ ಮಾಲೀಕರು ಅಂಗಡಿ ಬಾಗಿಲುಗಳನ್ನು ಹಾಕಲು ಮುಂದಾ…
ಸಿಎಂ ಹೆಚ್‍ಡಿಕೆ ನುಡಿದಂತೆ ನಡೆಯಲಿ
May 29, 2018ಅರಸೀಕೆರೆ: ನೂತನ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡ ಬೇಕೆಂದು ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಜಿ.ವಿ.ಟಿ ಬಸವರಾಜು ಆಗ್ರಹಿಸಿದರು. ತಾಲೂಕು ಬಿಜೆಪಿಯಿಂದ ನಗರದ ಪಿಪಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ ಸಂದರ್ಭದಲ್ಲಿ ಕಾರ್ಯ ಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಹಾದಿ ಹಿಡಿದಿದ್ದು ಕೂಡಲೇ ಕುಮಾರಸ್ವಾಮಿಯವರು ತಾವು ನುಡಿ ದಂತೆ ನಡೆದುಕೊಂಡು ಸಾಲಮನ್ನಾ ಮಾಡ…
ಬಂದ್‍ಗೆ ಕೊಡಗಿನಾದ್ಯಂತ ಮಿಶ್ರ ಪ್ರತಿಕ್ರಿಯೆ
May 29, 2018ಮಡಿಕೇರಿ: ಮಡಿಕೇರಿಯಲ್ಲಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇಂದ್ರ ಹಾಗೂ ರಾಜ್ಯ ಸರಕಾರಿ ಕಚೇರಿ ಗಳು ಎಂದಿನಂತೆ ಕಾರ್ಯನಿರ್ವಹಿಸಿ ದರೂ, ಖಾಸಗಿ ಬಸ್‍ಗಳು ಸಂಚಾರ ಸ್ಥಗಿತ ಗೊಳಿಸಿದ್ದ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ಹಾಜರಾತಿ ಕಡಿಮೆಯಾಗಿತ್ತು. ಬ್ಯಾಂಕ್ ಗಳು ಬಾಗಿಲು ತೆರದಿದ್ದವಾದರೂ, ಬಂದ್ ಸಂಘಟಕರ ಮನವಿ ಮೇರೆಗೆ ಬಳಿಕ ಮುಚ್ಚಲ್ಪ ಟ್ಟವು. ಶಾಲೆಗಳು ಸೋಮವಾರ ಆರಂಭವಾ ಗಬೇಕಿತ್ತಾದರೂ, ಬಸ್‍ಗಳ ಕೊರತೆ ಯಿಂದ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣ ಸಿ ‘ಅಘೋಷಿತ ರಜೆ’ಯಂತೆ ಕಂಡು ಬಂತು. ಮಡಿಕೇರಿ ನಗರದಲ್ಲಿ ಆಟೋ ಹಾಗೂ ಇತರ…
ಸೋ.ಪೇಟೆಯಲ್ಲಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ
May 29, 2018ಸೋಮವಾರಪೇಟೆ: ರೈತರ ಸಾಲ ಮನ್ನಾ ಮಾಡದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಧೋರಣೆಯನ್ನು ಖಂಡಿಸಿ ರಾಜ್ಯವ್ಯಾಪಿ ಬಂದ್‍ಗೆ ಪಟ್ಟಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ರಾಜ್ಯ ಸರ್ಕಾರಿ ಬಸ್, ಖಾಸಗಿ ವಾಹನಗಳು, ಆಟೋರಿಕ್ಷಾ ಗಳು ಎಂದಿನಂತೆ ಸಂಚರಿಸಿದವು. ಪಟ್ಟಣ ವ್ಯಾಪ್ತಿಯ ಮೆಡಿಕಲ್ ಶಾಪ್, ಪೆಟ್ರೋಲ್ ಬಂಕ್, ತಾಲೂಕು ಕಚೇರಿಗಳು, ಸರ್ಕಾರಿ ಕಚೇರಿಗಳು, ಬ್ಯಾಂಕುಗಳು ತೆರೆದಿದ್ದವು. ಎಲ್ಲಾ ಶಾಲಾ ಕಾಲೇಜು ಗಳು ಬಂದ್ ಕುರಿತು ನಿಖರ ಮಾಹಿತಿ ದೊರೆಯದ ಗ್ರಾಮೀಣ ಪ್ರದೇಶದ ರೈತರು ಸೋಮವಾರ ಸಂತೆ ದಿನವಾಗಿದ್ದರಿಂದ ಮಾರ್ಕೆಟ್ ಹಾಗೂ ಆರ್‍ಎಂಸಿ…
ವಿರಾಜಪೇಟೆಯಲ್ಲಿ ಬಂದ್‍ಗೆ ಉತ್ತಮ ಬೆಂಬಲ
May 29, 2018ವಿರಾಜಪೇಟೆ: ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು ಚುನಾವಣಾ ಸಂದರ್ಭ ಸಾಲ ಮನ್ನಾ ಮಾಡುವುದಾಗಿ ಹೇಳಿ ಈಗ ಕೊಟ್ಟಮಾತಿನಂತೆ ನಡೆದುಕೊಂಡಿಲ್ಲ ಎಂದು ಆಪಾದಿಸಿ ಬಿಜೆಪಿ ಕರೆ ನೀಡಿದ್ದ ಬಂದ್‍ಗೆ ವಿರಾಜಪೇಟೆ ಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿರಾಜಪೇಟೆ ಪಟ್ಟಣದಲ್ಲಿ ವರ್ತಕರು ಬೆಳಿಗ್ಗೆಯಿಂದಲೇ ಅಂಗಡಿ-ಹೋಟೆಲ್‍ಗಳ ಮುಂಗಟ್ಟುಗಳನ್ನು ಮುಚ್ಚಿ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದ್ದರು. ಬ್ಯಾಂಕ್‍ಗಳು ಮತ್ತು ಸರಕಾರಿ ಕಚೇರಿಗಳಲ್ಲಿ ಬಾಗಿಲು ಹಾಕಿಕೊಂಡು ಕಾರ್ಯ ನಿರ್ವಹಿಸುತ್ತಿದ್ದುದು ಕಂಡುಬಂತು, ಖಾಸಗಿ ಬಸ್ ಸಂಚಾರ ರದ್ದುಗೊಂಡ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಜನಸಂಖ್ಯೆ ವಿರಳವಾಗಿತ್ತು, ರಾಜ್ಯ…