ರೈತರ ಲಕ್ಷದವರೆಗಿನ ಚಾಲ್ತಿ ಬೆಳೆ ಸಾಲವೂ ಮನ್ನಾ 10,700 ಕೋಟಿ ರೂ. ಹೆಚ್ಚುವರಿ ಹೊರೆ ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜುಲೈ 5ರಂದು ಮಂಡಿಸಿದ್ದ 2018-19ನೇ ಸಾಲಿನ ಧನವಿನಿಯೋಗ ವಿಧೇಯಕ ಗುರುವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಸಾಲ ಮನ್ನಾ ನಮ್ಮ ಸರ್ಕಾರದ ಬದ್ಧತೆಯಾಗಿತ್ತು. ಅದನ್ನು ಈಡೇರಿಸ ಲಿದ್ದೇವೆ ಎಂದರು. ಇದೇ ವೇಳೆ ರೈತರ ಚಾಲ್ತಿ ಸಾಲ ವನ್ನೂ ಮನ್ನಾ ಮಾಡುವುದಾಗಿ ಘೋಷಿಸಿದ ಸಿಎಂ, ಒಂದು…
ಸಾಲ ಮನ್ನಾ ಕಾಫಿ ಬೆಳೆಗಾರರಿಗೆ ಕಹಿ!
July 8, 2018ಕೊಡಗಿನ ಡಿಸಿಸಿ ಬ್ಯಾಂಕ್ ವ್ಯಾಪ್ತಿಯ ಕೇವಲ 168 ಬೆಳೆಗಾರರಿಗೆ ಮಾತ್ರ ಸಾಲ ಮನ್ನಾ ಸೌಲಭ್ಯ ಸಹಕಾರ ಬ್ಯಾಂಕ್‍ಗಳಲ್ಲಿ ಸಾಲ ಪಡೆದಿರುವ 35 ಸಾವಿರ ಬೆಳೆಗಾರರು ಸೌಲಭ್ಯ ವಂಚಿತರು ಅವಿಭಕ್ತ ಕುಟುಂಬದ ರೈತರಿಗೆ ಸೌಲಭ್ಯ ಗಗನ ಕುಸುಮ ಮಡಿಕೇರಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್ ನಲ್ಲಿ ರಾಜ್ಯದ ರೈತರಿಗೆ 34 ಸಾವಿರ ಕೋಟಿ ರೂ. ಸುಸ್ತಿ ಸಾಲ ಮನ್ನಾ ಮಾಡು ವುದಾಗಿ ಘೋಷಿಸಿದ್ದಾರೆ. ಈ ಸಾಲ ಮನ್ನಾ ಕಾಫಿ ಬೆಳೆಗಾರರಿಗೂ ಅನ್ವಯಿಸು ತ್ತದೆಯಾದರೂ, ಸಹಕಾರಿ ಬ್ಯಾಂಕ್‍ಗಳಲ್ಲಿ ಸಾಲ…
ಪೂರ್ಣ ಸಾಲ ಮನ್ನಾ ಭರವಸೆ ಭಗ್ನ: ಇಬ್ಬರು ರೈತರ ಆತ್ಮಹತ್ಯೆ
July 7, 2018ಮಂಡ್ಯ, ಚಾಮರಾಜನಗರ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್ ನಲ್ಲಿ ಪೂರ್ಣ ಸಾಲ ಮನ್ನಾ ಆಗಲಿಲ್ಲ ಎಂದು ಮನ ನೊಂದು ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ದೇಮಹಳ್ಳಿ ಹಾಗೂ ಮಂಡ್ಯ ಜಿಲ್ಲೆ ಕಚ್ಚಿಗೆರೆ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ವರದಿ: ಚಾಮರಾಜ ನಗರ ತಾಲೂಕಿನ ದೇಮಹಳ್ಳಿ ಗ್ರಾಮದ ನಂಜುಂಡಪ್ಪನವರ ಮಗ ಚಿಕ್ಕಸ್ವಾಮಿ ಉ. ಬೆಳ್ಳಪ್ಪ (42) ನೇಣು ಹಾಕಿಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಸ್ವಾಮಿ ತಮಗಿದ್ದ ಎರಡೂ ವರೆ ಎಕರೆ ಜಮೀನಿನಲ್ಲಿ ಬಾಳೆ ಮತ್ತು ಉದ್ದು…
ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯ: ವಿದ್ಯಾರ್ಥಿಗಳ ಪ್ರತಿಭಟನೆ
July 7, 2018ಮೈಸೂರು: ರಾಜ್ಯ ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ್ಯಿಸಲಾಗಿದೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೈಸೂರಿನ ವಿ.ವಿ.ಮೊಹಲ್ಲಾದಲ್ಲಿರುವ ಮಾತೃಮಂಡಳಿ ವೃತ್ತದ ಬಳಿ ಶುಕ್ರವಾರ ಸಂಜೆ ಜಮಾಯಿಸಿದ್ದ ವಿದ್ಯಾರ್ಥಿಗಳು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಜೆಟ್ ಬಗ್ಗೆ ಇದ್ದ ನಿರೀಕ್ಷೆಗಳು ಹುಸಿಯಾಗಿವೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ, ಸರ್ಕಾರಿ ಹಾಸ್ಟೆಲ್‍ಗಳ ಉನ್ನತೀಕರಣ ಸೇರಿದಂತೆ ಅವಶ್ಯಕವಾದ ಕಾರ್ಯಕ್ರಮಗಳ ಬಗ್ಗೆ ಬಜೆಟ್‍ನಲ್ಲಿ ಪ್ರಸ್ತಾಪಿಸಿಲ್ಲ. ಅಲ್ಲದೆ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಹುದ್ದೆಗಳ ಭರ್ತಿ…
ಮೈತ್ರಿ ಸರ್ಕಾರ ಬಜೆಟ್‍ನಲ್ಲಿ ರೈತರಿಗೆ ಬಳುವಳಿ: 2 ಲಕ್ಷದವರೆಗಿನ ಕೃಷಿ ಸಾಲ ಮನ್ನಾ
July 6, 2018ಸಾರಿಗೆ, ವಿದ್ಯುತ್, ಪೆಟ್ರೋಲ್, ಡೀಸೆಲ್, ಮದ್ಯ ದುಬಾರಿ ಬೆಂಗಳೂರು: ಪ್ರತಿ ರೈತ ಕುಟುಂಬ ಮಾಡಿರುವ ಎರಡು ಲಕ್ಷ ರೂ.ವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಕಟಿಸಿದ್ದಾರೆ. ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಮಾಡಿದ ಬೆಳೆ ಸಾಲ ಯೋಜನೆಯ ವ್ಯಾಪ್ತಿಗೆ ಒಳಪಡಲಿದೆ. ಸರ್ಕಾರಿ ಅಧಿಕಾರಿಗಳು, ಕಳೆದ ಮೂರು ವರ್ಷಗಳಲ್ಲಿ ಆದಾಯ ತೆರಿಗೆ ಕಟ್ಟಿರುವಂತಹ ರೈತರು ಹಾಗೂ ಇತರೆ ಕೃಷಿ ಸಾಲಗಾರರನ್ನು ಈ ಸಾಲ ಮನ್ನಾ ಯೋಜನೆಯಿಂದ ಹೊರಗಿಟ್ಟಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ…
ಡಿಸ್ನಿಲ್ಯಾಂಡ್ ಮಾದರಿ ಕೆಆರ್‌ಎಸ್ ಅಭಿವೃದ್ಧಿ
July 6, 2018ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ಭರವಸೆ ಮಂಡ್ಯಕ್ಕೆ 50 ಕೋಟಿ ವಿಶೇಷ ಪ್ಯಾಕೇಜ್ ಗಗನಚುಕ್ಕಿ ಭರಚುಕ್ಕಿಯಲ್ಲಿ ಮೂಲ ಸೌಕರ್ಯಕ್ಕೆ 5 ಕೋಟಿ ಮೈಸೂರಲ್ಲಿ ರೇಷ್ಮೆಗೂಡು ಮಾರುಕಟ್ಟೆ ಬೆಂಗಳೂರು: ಕೃಷ್ಣರಾಜಸಾಗರ ಅಣೆಕಟ್ಟೆಗೆ ಪರ್ಯಾಯವಾಗಿ ಮೇಕೆದಾಟು ಸಮೀಪ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ನೀಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಕಟಿಸಿದ್ದಾರೆ. ಹಣಕಾಸು ಇಲಾಖೆ ಹೊಣೆ ಹೊತ್ತಿರುವ ಮುಖ್ಯಮಂತ್ರಿಯವರು 2018-19ನೇ ಸಾಲಿನ ಚೊಚ್ಚಲ ಮುಂಗಡ ಪತ್ರ ಮಂಡಿಸಿ, ಪ್ರಸ್ತುತ ಮೇಕೆದಾಟು ಕುರಿತಂತೆ ಪೂರ್ವಕಾರ್ಯ ಸಾಧ್ಯತಾ ವರದಿ ಪ್ರಸ್ತಾವನೆಗೆ ಪ್ರಾಧಿಕಾರದ…
ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭ
July 6, 2018ಪ್ರಾಥಮಿಕ ಶಾಲಾ ಆವರಣಕ್ಕೆ ಅಂಗನವಾಡಿ ಕೇಂದ್ರ ಸ್ಥಳಾಂತರ ಹಂಪಿಯಲ್ಲಿ ಪ್ರವಾಸೋದ್ಯಮ, ಶಿವಮೊಗ್ಗದಲ್ಲಿ ತಾಯ್ನಾಡು ಭದ್ರತಾ ವಿವಿ ಸ್ಥಾಪನೆ ಬೆಂಗಳೂರು: ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮ ತರಗತಿಗಳ ಜೊತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಹೆಚ್ಚು ಮಕ್ಕಳನ್ನು ನಮ್ಮ ಶಾಲೆಗಳಿಗೆ ಆಕರ್ಷಿಸುವ ಉದ್ದೇಶದಿಂದ ಇಂತಹ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಆರಂಭಿಕವಾಗಿ ಒಂದು ಸಾವಿರ ಶಾಲೆಗಳಲ್ಲಿ ಇಂತಹ ಪ್ರಯೋಗ ಮಾಡಲಾಗುವುದು. ಇದಕ್ಕಾಗಿ ಅಗತ್ಯ ಸಿಬ್ಬಂದಿ ಮತ್ತು…
ಬಡ ರೋಗಿಗಳ ನೆರವಿಗೆ 30 ಕೋಟಿ ಮೀಸಲು
July 6, 2018ಬೆಂಗಳೂರು: ಬಡ ರೋಗಿಗಳಿಗೆ ಹೃದಯ, ಮೂತ್ರಪಿಂಡ, ಯಕೃತ್ ಇತ್ಯಾದಿ ಅಂಗಾಂಗ ಕಸಿಗಾಗಿ ಪ್ರತ್ಯೇಕ ಯೋಜನೆ ರೂಪಿಸಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಯೋಜನೆಗೆ 30 ಕೋಟಿ ರೂ. ಅನುದಾನ ನೀಡಿದ್ದಾರೆ. ರಾಮನಗರ ಜಿಲ್ಲೆ ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಪ್ರಕಟಿಸಿದ್ದಾರೆ. ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯನ್ನು 800 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು 30 ಕೋಟಿ ರೂ. ಮೀಸಲಿರಿಸಿದ್ದಾರೆ. ರಾಮನಗರ ದಿನದಿಂದ ದಿನಕ್ಕೆ ಶೀಘ್ರಗತಿಯಲ್ಲಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ 300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆಯಲು 40 ಕೋಟಿ…
ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಮೈಸೂರಲ್ಲಿ ಸಂಭ್ರಮಾಚರಣೆ
July 6, 2018ಮೈಸೂರು: ಸಮ್ಮಿಶ್ರ ಸರ್ಕಾರ ಚೊಚ್ಚಲ ಬಜೆಟ್‍ನಲ್ಲಿ ಕರ್ನಾ ಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಅದಕ್ಕೆ 25ಕೋಟಿ ಅನುದಾನ ಮೀಸಲಿಟ್ಟಿರುವುದು ಹಾಗೂ ಶಂಕರಾ ಚಾರ್ಯರ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸುವುದಕ್ಕೆ ನಿರ್ಧರಿಸಿರುವುದನ್ನು ಸ್ವಾಗತಿಸಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಕಾರ್ಯಕರ್ತರು ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕ ರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿ ಅವರು ಗುರುವಾರ ಮಂಡಿಸಿದ ಬಜೆಟ್‍ನಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಆದ್ಯತೆ ನೀಡಿ ಅಭಿವೃದ್ಧಿ ಮಂಡಳಿಯನ್ನು…
ರಾಜ್ಯ ಬಜೆಟ್ ಕುರಿತು ಪ್ರಮುಖರ ಪ್ರತಿಕ್ರಿಯೆ
July 6, 2018ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗುರುವಾರ ಮಂಡಿಸಿದ ರಾಜ್ಯ ಬಜೆಟ್‍ಗೆ ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರಿನ ಶಾಸಕರು, ವಿವಿಧ ಸಂಘಟನೆಗಳ ಅಧ್ಯಕ್ಷರು, ಪ್ರಮುಖರು ವ್ಯಕ್ತಪಡಿಸಿರುವ ಅಭಿಪ್ರಾಯಗಳಿವು: ಮೂರು ಜಿಲ್ಲೆಗೇ ಸೀಮಿತ ಬಜೆಟ್: ಸಮಗ್ರ ಕರ್ನಾಟಕ ಬಜೆಟ್ ಬದಲಿಗೆ ಕೇವಲ ಮಂಡ್ಯ, ಹಾಸನ, ರಾಮನಗರಕ್ಕಷ್ಟೇ ಸೀಮಿತವಾದ ಬಜೆಟ್ ಇದಾಗಿದೆ. ಮುಖ್ಯಮಂತ್ರಿಗಳು ರಾಜ್ಯದಲ್ಲಿ 30 ಜಿಲ್ಲೆಗಳಿರುವುದನ್ನು ಮರೆತಿರುವಂತಿದೆ. ಮೈಸೂರಿಗಿದ್ದ ಫಿಲಂ ಸಿಟಿಯನ್ನು ರಾಮನಗರಕ್ಕೆ ಹಾಕಿಕೊಂಡಿದ್ದಾರೆ. ಮೈಸೂ ರಿಗೆ ಈ ಬಜೆಟ್‍ನಲ್ಲಿ ಏನೂ ಸಿಕ್ಕಿಲ್ಲ. ಪೆಟ್ರೋಲ್, ಡೀಸೆಲ್, ವಿದ್ಯುತ್ ದರ ಹೆಚ್ಚಳ…