ಮೈಸೂರು, ಫೆ.11(ಆರ್‍ಕೆ)-ಕೈಗಾರಿಕೆ, ಹೋಟೆಲ್, ಟ್ರಾವೆಲ್ಸ್, ಪ್ರವಾಸೋದ್ಯಮ ಸೇರಿದಂತೆ ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‍ನಲ್ಲಿ ಅನುದಾನ ಮೀಸಲಿಡುವಂತೆ ವಿವಿಧ ಸಂಘ-ಸಂಸ್ಥೆಗಳು ಫೆಬ್ರವರಿ 13ರಂದು ಮೈಸೂರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಿವೆ ಎಂದು ಮಾಜಿ ಶಾಸಕ ವಾಸು ತಿಳಿಸಿದ್ದಾರೆ. ಮೈಸೂರಿನ ಸಿದ್ಧಾರ್ಥ ಹೋಟೆಲಿನಲ್ಲಿ ಇಂದು ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಶನಿವಾರ ಸಂಜೆ ಕಲಾಮಂದಿರದಲ್ಲಿ ಏರ್ಪಡಿಸಿರುವ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಅವರ ಎರಡು ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಅವರು…