Tag: Karnataka bypolls

ನಾಮಪತ್ರ ಸಲ್ಲಿಕೆಗೆ ಇಂದು ಕಡೇ ದಿನ
ಮೈಸೂರು

ನಾಮಪತ್ರ ಸಲ್ಲಿಕೆಗೆ ಇಂದು ಕಡೇ ದಿನ

November 18, 2019

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಗೆ ರಾಜ ಕೀಯ ಪಕ್ಷಗಳಿಂದ ಭರದ ಸಿದ್ಧತೆ ನಡೆದಿದೆ. ನಾಮಪತ್ರ ಸಲ್ಲಿಸಲು ನಾಳೆ (ಸೋಮವಾರ) ಕಡೆಯ ದಿನವಾಗಿ ರುವ ಹಿನ್ನೆಲೆಯಲ್ಲಿ ಬಂಡಾಯಗಾ ರರ ಮನವೊಲಿಕೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಲ್ಲಿ ಅಂತಿಮ ಕಸರತ್ತು ನಡೆದಿದೆ. ಅಧಿಕೃತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿ ದ್ದಾರೆ. ಪಕ್ಷೇತರ, ಸ್ವತಂತ್ರ, ವಿವಿಧ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಈಗಾಗಲೇ 96 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಚುನಾವಣಾ ಕಣ ಮತ್ತಷ್ಟು ರಂಗೇರಲಿದ್ದು, ಮೆರವಣಿಗೆ, ಪಕ್ಷಗಳ…

ಉಪ ಸಮರದಲ್ಲಿ ದೋಸ್ತಿಗೆ ಭರ್ಜರಿ ಜಯ
ಮೈಸೂರು

ಉಪ ಸಮರದಲ್ಲಿ ದೋಸ್ತಿಗೆ ಭರ್ಜರಿ ಜಯ

November 8, 2018

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಪರಿಗಣಿಸಲ್ಪಟ್ಟಿದ್ದ ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳು ನಾಲ್ಕು ಕ್ಷೇತ್ರಗಳಲ್ಲಿ ಪ್ರಚಂಡ ಜಯಗಳಿಸುವ ಮೂಲಕ ರಾಜ್ಯದಲ್ಲಿ ಪ್ರತಿಪಕ್ಷ ಬಿಜೆಪಿಗೆ ಭಾರೀ ಆಘಾತ ನೀಡಿವೆ. ಈ ಫಲಿತಾಂಶದಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಮತ್ತಷ್ಟು ಗಟ್ಟಿಯಾಗಿದ್ದು, ಮುಂಬ ರುವ ಲೋಕಸಭಾ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರಿಸುವುದಾಗಿ ಉಭಯ ಪಕ್ಷಗಳ ನಾಯಕರು ಘೋಷಣೆ ಮಾಡಿದ್ದಾರೆ. ಮಂಡ್ಯ, ಬಳ್ಳಾರಿ ಲೋಕಸಭಾ ಕ್ಷೇತ್ರ ಹಾಗೂ ರಾಮನಗರ ಮತ್ತು ಜಮಖಂಡಿ ಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್…

ಬಿಜೆಪಿ ಕೈತಪ್ಪಲಿದೆಯೇ ಬಳ್ಳಾರಿ?
ಮೈಸೂರು

ಬಿಜೆಪಿ ಕೈತಪ್ಪಲಿದೆಯೇ ಬಳ್ಳಾರಿ?

November 5, 2018

ಬೆಂಗಳೂರು: ರಾಜ್ಯದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಪಕ್ಷಗಳು ಮೇಲುಗೈ ಸಾಧಿಸಲಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಜಯಗಳಿಸಲಿದ್ದಾರೆ ಎಂದು ಗುಪ್ತಚರ ಇಲಾಖೆಯು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ವರದಿ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಮಂಡ್ಯ ಲೋಕಸಭೆ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ನಿರಾಯಾಸವಾಗಿ ಗೆಲುವು ಸಾಧಿಸಲಿದೆ. ಅದೇ ರೀತಿ ಬಳ್ಳಾರಿ ಲೋಕಸಭೆ ಮತ್ತು ಜಮ ಖಂಡಿ ವಿಧಾನಸಭಾ ಕ್ಷೇತ್ರಗಳಲ್ಲಿ…

ಮಂಡ್ಯ ಲೋಕಸಭಾ ಕ್ಷೇತ್ರ ಉಪ ಚುನಾವಣೆ ಶೇ.53.93ರಷ್ಟು ಮತದಾನ
ಮೈಸೂರು

ಮಂಡ್ಯ ಲೋಕಸಭಾ ಕ್ಷೇತ್ರ ಉಪ ಚುನಾವಣೆ ಶೇ.53.93ರಷ್ಟು ಮತದಾನ

November 4, 2018

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಬಹಳಷ್ಟು ಕುತೂಹಲ ಮೂಡಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಶನಿವಾರ ನಡೆದ ಉಪ ಚುನಾವಣೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೇ 53.93 ರಷ್ಟು ಮಾತ್ರ ಮತದಾನವಾಗಿದೆ. ಹಲವೆಡೆ ಚುನಾವಣೆಯನ್ನು ಬಹಿಷ್ಕರಿಸಿರುವ ವರದಿಗಳಾಗಿವೆ. ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರ ಕ್ಷೇತ್ರ ಮದ್ದೂರಿನಲ್ಲಿ (ಶೇ.57.25) ಅತೀ ಹೆಚ್ಚು ಮತದಾನವಾಗಿದ್ದರೆ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ (ಶೇ.46.87) ಅತೀ ಕಡಿಮೆ ಮತದಾನ ನಡೆದಿದೆ. ಇದರೊಂದಿಗೆ ಕಣದಲ್ಲಿರುವ ಮೈತ್ರಿಕೂಟದ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ, ಬಿಜೆಪಿಯ ಡಾ.ಸಿದ್ದರಾಮಯ್ಯ…

ಉಪ ಸಮರ: ಇಂದು ಮತದಾನ
ಮೈಸೂರು

ಉಪ ಸಮರ: ಇಂದು ಮತದಾನ

November 3, 2018

ಬೆಂಗಳೂರು:  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಪ್ರತಿಷ್ಠೆಯಾಗಿರುವ ಮೂರು ಲೋಕಸಭೆ, ಎರಡು ವಿಧಾನ ಸಭೆ-ಒಟ್ಟು ಐದು ಕ್ಷೇತ್ರಗಳ ಉಪಚುನಾವಣೆಗೆ ನಾಳೆ ಮತದಾನ ನಡೆಯಲಿದೆ. ಈ ಉಪಚುನಾವಣೆಯಲ್ಲಿ ಮೇಲುಗೈ ಸಾಧಿಸಿದರೆ ಮೈತ್ರಿ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ. ಪ್ರತಿಪಕ್ಷ ಬಿಜೆಪಿ ಉಪಟಳಕ್ಕೆ ತೆರೆ ಎಳೆಯಬಹುದು ಎಂಬ ಲೆಕ್ಕಾಚಾರ ಕುಮಾರಸ್ವಾಮಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರದು. ಇನ್ನೊಂದೆಡೆ, ಉಪಚುನಾವಣೆಯಲ್ಲಿ ಮೇಲುಗೈ ಸಾಧಿಸಿದರೆ ಅಲ್ಪ ಅಂತರ ದಲ್ಲಿ ಕೈತಪ್ಪಿರುವ ಅಧಿಕಾರವನ್ನು ಮತ್ತೆ ಹಿಡಿಯಬಹುದೆಂಬ ಲೆಕ್ಕಾಚಾರ ಬಿಜೆಪಿಯದ್ದಾಗಿದೆ….

ಒಂದೇ ವೇದಿಕೆಯಲ್ಲಿ ರಾಜಕೀಯ ದುಷ್ಮನ್‍ಗಳು!
ಮೈಸೂರು

ಒಂದೇ ವೇದಿಕೆಯಲ್ಲಿ ರಾಜಕೀಯ ದುಷ್ಮನ್‍ಗಳು!

October 30, 2018

ಬೆಂಗಳೂರು, ಅ.29: ಉಪಚುನಾವಣೆಯಲ್ಲಿ ಬಿಜೆಪಿ ಮಣಿಸಿ, ಮೈತ್ರಿ ಸರ್ಕಾರವನ್ನು ಮತ್ತಷ್ಟು ಗಟ್ಟಿಗೊಳಿಸುವ ಗುರಿ ಹಿನ್ನೆಲೆಯಲ್ಲಿ, ಹಾವು-ಮುಂಗುಸಿಯಂತಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 13 ವರ್ಷಗಳ ನಂತರ ಒಂದೇ ವೇದಿಕೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ. ಬಿಜೆಪಿ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ಪ್ರತಿಪಕ್ಷಗಳನ್ನು ಒಂದು ಮಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲೂ ಮೈತ್ರಿಯೊಂದಿಗೆ ಕಣಕ್ಕಿಳಿ ಯುವ ಉದ್ದೇಶದಿಂದ ತಮ್ಮೆಲ್ಲಾ ವೈಮನಸ್ಸನ್ನು ಬದಿಗಿರಿಸಿ ಮತದಾರರ ಮನವೊಲಿಸಲು ಹೊರಟಿದ್ದಾರೆ. ದೇವೇಗೌಡರ ಕುಟುಂಬದ ವಿರುದ್ಧ ಸದಾ…

ಬಿಜೆಪಿ ಅಭ್ಯರ್ಥಿ ಪರ ಬಿಎಸ್‍ವೈ ಭರ್ಜರಿ ಪ್ರಚಾರ
ಮಂಡ್ಯ

ಬಿಜೆಪಿ ಅಭ್ಯರ್ಥಿ ಪರ ಬಿಎಸ್‍ವೈ ಭರ್ಜರಿ ಪ್ರಚಾರ

October 24, 2018

ಮಂಡ್ಯ: ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಾಯಕರು ಮಂಗಳವಾರ ಮಂಡ್ಯ ಲೋಕಸಭಾ ಕ್ಷೇತ್ರದ ವಿವಿಧೆಡೆ ಭರ್ಜರಿ ಪ್ರಚಾರ ನಡೆಸಿದರು. ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್. ಪೇಟೆ ಮತ್ತು ಕೆ.ಆರ್.ನಗರ ಸೇರಿದಂತೆ ವಿವಿಧೆಡೆಗಳಲ್ಲಿ ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಆರ್.ಅಶೋಕ್, ಚಿತ್ರನಟಿ ತಾರಾ ಸೇರಿದಂತೆ ಹಲವು ನಾಯಕರು ಬಹಿರಂಗ ಪ್ರಚಾರ ನಡೆಸಿದರು. ಶ್ರಿರಂಗಪಟ್ಟಣ: ಜನ್ಮಭೂಮಿ ಮಂಡ್ಯಜಿಲ್ಲೆ, ಕರ್ಮಭೂಮಿ ಶಿವಮೊಗ್ಗ. ಆದರೆ, ಈ ನನ್ನ ಜನ್ಮಭೂಮಿ ಮಂಡ್ಯದಿಂದ ಒಬ್ಬನೇ ಒಬ್ಬ ಬಿಜೆಪಿಯ ಅಭ್ಯರ್ಥಿಯನ್ನು…

ಬಿಜೆಪಿ ವಿರುದ್ಧ ದೋಸ್ತಿ ರಣಕಹಳೆ
ಮೈಸೂರು

ಬಿಜೆಪಿ ವಿರುದ್ಧ ದೋಸ್ತಿ ರಣಕಹಳೆ

October 21, 2018

ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯನ್ನು ಮಟ್ಟ ಹಾಕಲು ಕರ್ನಾಟಕ ದಿಂದಲೇ ಜಾತ್ಯಾತೀತ ಶಕ್ತಿಗಳು ಒಂದಾಗಿ ಹೋರಾಟ ಮಾಡಲು ಭೂಮಿಕೆ ಸಿದ್ಧಗೊಂಡಿದೆ. ಹಾವು ಮುಂಗುಸಿಯಂತೆ ಬೆನ್ನ ಹಿಂದೆಯೇ ರಾಜಕೀಯ ಮಾಡುತ್ತಿದ್ದ ಹಾಗೂ ಕಡುವೈರಿಗಳೆಂದೇ ಬಣ್ಣಿಸಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಬಿಜೆಪಿಯ ವಿರುದ್ಧ ಸಮರ ಸಾರಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ 3 ಲೋಕಸಭೆ, 2 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದಾಗಿ ಬಿಜೆಪಿಯ ವಿರುದ್ಧ…

ಮಂಡ್ಯ, ಶಿವಮೊಗ್ಗ, ಬಳ್ಳಾರಿ ಲೋಕಸಭಾ ಕ್ಷೇತ್ರ, ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ಕ್ಕೆ ಉಪ ಚುನಾವಣೆ
ಮೈಸೂರು

ಮಂಡ್ಯ, ಶಿವಮೊಗ್ಗ, ಬಳ್ಳಾರಿ ಲೋಕಸಭಾ ಕ್ಷೇತ್ರ, ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ಕ್ಕೆ ಉಪ ಚುನಾವಣೆ

October 7, 2018

ಬೆಂಗಳೂರು: ಮಂಡ್ಯ, ಶಿವಮೊಗ್ಗ, ಬಳ್ಳಾರಿ ಲೋಕಸಭಾ ಕ್ಷೇತ್ರಗಳು, ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಲಿಗೆ ನವೆಂಬರ್ 3ರಂದು ಉಪ ಚುನಾವಣೆ ಘೋಷಣೆಯಾಗಿದೆ. ಐದು ತಿಂಗಳ ಅವಧಿಗೆ ಮೂರು ಲೋಕಸಭಾ ಕ್ಷೇತ್ರಗಳ ಜನಪ್ರತಿನಿಧಿಗಳ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಅವಕಾಶ ಮಾಡಿದ್ದರೆ, ಉಳಿದ ಎರಡು ವಿಧಾನಸಭಾ ಕ್ಷೇತ್ರಗಳ ಕಾಲಾವಧಿ 4 ವರ್ಷ 8 ತಿಂಗಳದ್ದಾಗಿರುತ್ತದೆ. ದೆಹಲಿಯಲ್ಲಿಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್ ಇತರ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಜೊತೆಗೆ ಕರ್ನಾಟಕದಲ್ಲಿ ತೆರವಾಗಿದ್ದ ಕ್ಷೇತ್ರಗಳಿಗೂ ಚುನಾವಣಾ…

Translate »