Tag: Karnataka Government

ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ
ಮೈಸೂರು

ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ

September 24, 2018

ಮೈಸೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮೈಸೂರು ವಿಭಾಗದೊಳಗಿನ ಅಂತರ್ ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕ ವೃಂದದ ಘಟಕದೊಳಗಿನ ಕೋರಿಕೆ ವರ್ಗಾವಣೆಗೆ ಸಂಬಂಧಿಸಿದ ತಾತ್ಕಾಲಿಕ ಆದ್ಯತಾ ಪಟ್ಟಿಯನ್ನು ಇಲಾಖೆಯ ವೆಬ್‍ಸೈಟ್ www.schooleducation.kar.nic.in ನಲ್ಲಿ ಈಗಾಗಲೇ ಪ್ರಕಟಿಸಲಾಗಿದೆ. ವರ್ಗಾವಣಾ ಆದ್ಯತಾ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕ ವೃಂದದವರು ಆಕ್ಷೇಪಣೆಗೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ನೇರವಾಗಿ ಸೆಪ್ಟೆಂಬರ್ 25 ರೊಳಗೆ ಆಕ್ಷೇಪಣೆ ಸಲ್ಲಿಸಿ ಸ್ವೀಕೃತಿ ಪಡೆಯುವಂತೆ ವಿಭಾಗೀಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯುಷ್ಮಾನ್ ಭಾರತ ಸಂಬಂಧ ಸಚಿವ ಸಂಪುಟದಲ್ಲಿ ನಿರ್ಧಾರ
ಮೈಸೂರು

ಆಯುಷ್ಮಾನ್ ಭಾರತ ಸಂಬಂಧ ಸಚಿವ ಸಂಪುಟದಲ್ಲಿ ನಿರ್ಧಾರ

September 6, 2018

ಬೆಂಗಳೂರು: ಕೇಂದ್ರ ಸರ್ಕಾರ ಪ್ರಕಟಿಸಿರುವ ‘ಆಯುಷ್ಮಾನ್ ಭಾರತ ‘ ಕಾರ್ಯ ಕ್ರಮ ಹಾಗೂ ರಾಜ್ಯ ಸರ್ಕಾರದ ‘ಆರೋಗ್ಯ ಕರ್ನಾಟಕ’ ಯೋಜನೆ ಯನ್ನು ವಿಲೀನಗೊಳಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ‘ಆಯುಷ್ಮಾನ್ ಭಾರತ’ ಯೋಜನೆಯ ಹಲವಾರು ಲೋಪದೋಷಗಳ ಬಗ್ಗೆ ರಾಜ್ಯ ಸರ್ಕಾರ ಕೋರಿದ ಮಾಹಿತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವೈದ್ಯಕೀಯ ಸಂಘಟನೆಗಳ ಮುಖ್ಯಸ್ಥರೊಂದಿಗೆ ಇಂದು ಚರ್ಚಿಸಿ ಅವರ…

ಪಶ್ಚಿಮ ಘಟ್ಟ ಸಂರಕ್ಷಣೆ ಸಂಬಂಧ: ಡಾ. ಕಸ್ತೂರಿರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ
ಮೈಸೂರು

ಪಶ್ಚಿಮ ಘಟ್ಟ ಸಂರಕ್ಷಣೆ ಸಂಬಂಧ: ಡಾ. ಕಸ್ತೂರಿರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

August 22, 2018

ಬೆಂಗಳೂರು:  ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತು ವಿಜ್ಞಾನಿ ಡಾ. ಕಸ್ತೂರಿರಂಗನ್ ಸಮಿತಿ ನೀಡಿದ್ದ ವರದಿ ಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಇದರೊಂದಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಕಳೆದ 5 ವರ್ಷಗಳಿಂದ ನಡೆಯುತ್ತಿದ್ದ ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಸಮರಕ್ಕೆ ತೆರೆ ಬಿದ್ದಂತಾಗಿದೆ. ರಾಜ್ಯ ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಸಂದೀಪ್ ದವೆ, ಈ ತಿಂಗಳ 17ರಂದು ಕೇಂದ್ರಕ್ಕೆ ಪತ್ರ ಬರೆದಿದ್ದು, ಡಾ.ಕಸ್ತೂರಿರಂಗನ್ ವರದಿ ಅನುಷ್ಠಾನ ಸಾಧ್ಯವಿಲ್ಲ, ಪಶ್ಚಿಮ ಘಟ್ಟ ಸಂರಕ್ಷಣೆಗೆ ರಾಜ್ಯ ಸರ್ಕಾರ…

ಕೃಷಿ ಸಾಲ ಪಡೆಯದ 28 ಲಕ್ಷ ರೈತರಿಗೆ ಬೆಳೆ ಸಾಲ
ಮೈಸೂರು

ಕೃಷಿ ಸಾಲ ಪಡೆಯದ 28 ಲಕ್ಷ ರೈತರಿಗೆ ಬೆಳೆ ಸಾಲ

August 14, 2018

ಸಹಕಾರಿ ಸಚಿವ ಬಂಡೆಪ್ಪ ಕಾಶಂಪುರ್ ವಿವರಣೆ 22 ಲಕ್ಷ ರೈತರು ಸಹಕಾರಿ ಬ್ಯಾಂಕ್, 28 ಲಕ್ಷ ಮಂದಿ ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಸಾಲ ಪಡೆದಿದ್ದಾರೆ ಬೆಂಗಳೂರು: ಇದುವರೆಗೂ ಕೃಷಿ ಸಾಲ ಪಡೆಯಲು ವಿಫಲರಾಗಿರುವ 28 ಲಕ್ಷ ರೈತ ಕುಟುಂಬಗಳಿಗೆ ಬೆಳೆ ಸಾಲ ನೀಡುವುದಾಗಿ ಸಹಕಾರಿ ಸಚಿವ ಬಂಡೆಪ್ಪ ಕಾಶಂಪುರ್ ಇಂದಿಲ್ಲಿ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ 78 ಲಕ್ಷ ರೈತ ಕುಟುಂಬಗಳಿದ್ದು, ಅದರಲ್ಲಿ 22 ಲಕ್ಷ ರೈತರು ಸಹಕಾರಿ ಬ್ಯಾಂಕುಗಳಲ್ಲಿ, 28 ಲಕ್ಷ ಕುಟುಂಬಗಳು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಕೃಷಿಗೆ ಸಂಬಂಧಿಸಿದಂತೆ…

ಕೃಷಿ ಮಾಹಿತಿಗೆ ಡ್ರೋನ್ ಬಳಕೆಕೃಷಿ ಮಾಹಿತಿಗೆ ಡ್ರೋನ್ ಬಳಕೆ
ಮೈಸೂರು

ಕೃಷಿ ಮಾಹಿತಿಗೆ ಡ್ರೋನ್ ಬಳಕೆಕೃಷಿ ಮಾಹಿತಿಗೆ ಡ್ರೋನ್ ಬಳಕೆ

August 9, 2018

ಬೆಂಗಳೂರು: ಕೃಷಿ ಚಟುವಟಿಕೆ, ಬೆಳೆ ವಿಸ್ತೀರ್ಣದ ನಿಖರ ಮಾಹಿತಿ ಪಡೆಯಲು ಡ್ರೋನ್ ಬಳಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಹಿಡುವಳಿ ಬಗ್ಗೆ ಸಮರ್ಪಕ ಮಾಹಿತಿ ದೊರೆಯದ ಕಾರಣ ಆಧುನಿಕ ತಂತ್ರಜ್ಞಾನ ಬಳಕೆ ಮಾಡಿ ಈ ಪ್ರಯೋಗವನ್ನು ಜಾರಿಗೆ ತರಲಾಗಿದೆ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಇಂದಿಲ್ಲಿ ಪ್ರಕಟಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಯೋಗಿಕವಾಗಿ ಹಾವೇರಿ ಜಿಲ್ಲೆಯಲ್ಲಿ ಡ್ರೋನ್ ತನ್ನ ಕಾರ್ಯ ಆರಂಭಿಸಿದ್ದು, ಒಂದು ಡ್ರೋನ್ ಪ್ರತಿನಿತ್ಯ ಒಂದು ಸಾವಿರ ಎಕರೆ ಭೂ ವ್ಯಾಪ್ತಿಯಲ್ಲಿರುವ ಬೆಳೆ ಮಾಹಿತಿ ಹಾಗೂ…

ಆದಿವಾಸಿಗಳಿಗೆ ಮನೆ ಬಾಗಿಲಲ್ಲಿ ಉಚಿತ ಆರೋಗ್ಯ ಸೇವೆ
ಮೈಸೂರು

ಆದಿವಾಸಿಗಳಿಗೆ ಮನೆ ಬಾಗಿಲಲ್ಲಿ ಉಚಿತ ಆರೋಗ್ಯ ಸೇವೆ

August 2, 2018

 ಯೋಜನೆಗೆ ಚಾಲನೆ ನೀಡಿದ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್  8 ಕೋಟಿ ವೆಚ್ಚದಲ್ಲಿ 16 ವಾಹನಗಳ ವ್ಯವಸ್ಥೆ ಮೈಸೂರು, ಕೊಡಗು, ಚಾ.ನಗರ ಸೇರಿ 8 ಜಿಲ್ಲೆ ಅರಣ್ಯ ವ್ಯಾಪ್ತಿ ಆದಿವಾಸಿಗಳಿಗೆ ಸೇವೆ ಲಭ್ಯ ಬೆಂಗಳೂರು: ಅರಣ್ಯದಲ್ಲಿನ ಆದಿವಾಸಿಗಳ ಮನೆ ಬಾಗಿಲಲ್ಲಿ ಉಚಿತ ಆರೋಗ್ಯ ಸೇವೆ ಕಲ್ಪಿಸುವ ನೂತನ ಯೋಜನೆಗೆ ರಾಜ್ಯ ಸರ್ಕಾರ ಇಂದಿಲ್ಲಿ ಚಾಲನೆ ನೀಡಿದೆ. ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆ, ಬೆಳಗಾವಿ ಸಹಯೋಗದಲ್ಲಿ ಈ ಆರೋಗ್ಯ ಸೇವೆ ಕಾರ್ಯ ಕ್ರಮ ಅನುಷ್ಠಾನಗೊಂಡಿದ್ದು, ಮೊದಲ ಹಂತ ದಲ್ಲಿ…

ನಮ್ಮ ಸರ್ಕಾರ ಸುಭದ್ರ, ಅಭಿವೃದ್ಧಿಗೆ ಆದ್ಯತೆ ನೀಡಿ
ಮೈಸೂರು

ನಮ್ಮ ಸರ್ಕಾರ ಸುಭದ್ರ, ಅಭಿವೃದ್ಧಿಗೆ ಆದ್ಯತೆ ನೀಡಿ

July 31, 2018

ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗಳಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ಮಾಧ್ಯಮಗಳ ವರದಿಗಳಿಗೆ ತಲೆ ಕೆಡಿಸಿಕೊಳ್ಳಬೇಡಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಮೈತ್ರಿ ಸರ್ಕಾರ ಕುರಿತು ಏನೇನೊ ವರದಿಗಳು ಬರುತ್ತಿವೆ. ಅವರ ವರದಿ ನೋಡಿ, ಅಧಿಕಾರಿಗಳು ದಾರಿ ತಪ್ಪಬಾರದು. ಮಾಧ್ಯಮಗಳಿಗೆ ಪಾಪ, ಬೇರೆ ಸುದ್ದಿಗಳು ಸಿಕ್ತಿಲ್ಲವೇನೋ, ನಾನು ನಾಲ್ಕು ಜಿಲ್ಲೆಗಳ ಮುಖ್ಯಮಂತ್ರಿ ಅಂತ ವರದಿ ಮಾಡುತ್ತಾರೆ. 2.18 ಲಕ್ಷ ಕೋಟಿ ರೂ. ಮೊತ್ತದ ಬಜೆಟ್‍ನಲ್ಲಿ…

ಮಹಾಮಾರಿ ರೇಬಿಸ್‍ನಿಂದ  ಸಾವು: ಕರ್ನಾಟಕಕ್ಕೆ 2ನೇ ಸ್ಥಾನ
ಮೈಸೂರು

ಮಹಾಮಾರಿ ರೇಬಿಸ್‍ನಿಂದ  ಸಾವು: ಕರ್ನಾಟಕಕ್ಕೆ 2ನೇ ಸ್ಥಾನ

July 30, 2018

ಬೆಂಗಳೂರು: ಪ್ರಾಣಿಗಳ ಮೂಲಕ ಮನುಷ್ಯರಲ್ಲಿ ಹರಡುವ ರೇಬಿಸ್ ಸೋಂಕು ಮಾರಣಾಂತಿಕವಾಗಿದ್ದು, ರಾಜ್ಯ ಸರ್ಕಾರ ಬೀದಿನಾಯಿಗಳಿಗೆ ಅತ್ಯುತ್ತಮ ರೇಬಿಸ್ ಲಸಿಕೆಗಳನ್ನು ಹಾಕುತ್ತಿದ್ದರೂ ರೋಗಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಮಾತ್ರ ಏರುತ್ತಲೇ ಇದೆ. ರಾಷ್ಟ್ರೀಯ ಆರೋಗ್ಯ ಪ್ರೊಫೈಲ್ 2018 ಕೆಲ ದಿನಗಳ ಹಿಂದಷ್ಟೇ ಬಿಡುಗಡೆಯಾಗಿದ್ದು, ಇದರಲ್ಲಿರುವ ಮಾಹಿತಿಗಳ ಪ್ರಕಾರ ದೇಶದಲ್ಲಿಯೇ ರೇಬಿಸ್‍ಗೆ ತುತ್ತಾಗಿರುವವರ ಸಂಖ್ಯೆ ಕರ್ನಾಟಕದಲ್ಲಿಯೇ ಹೆಚ್ಚು ಎಂಬುದಾಗಿ ತಿಳಿದುಬಂದಿದೆ. ರೇಬಿಸ್ ರೋಗಕ್ಕೆ ಸಂಬಂಧಿಸಿದ ಸಾವುಗಳಲ್ಲಿ ಕಳೆದ ವರ್ಷ ಕರ್ನಾಟಕ ರಾಜ್ಯ 2ನೇ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ವರ್ಷ ರಾಜ್ಯದಲ್ಲಿ 97…

ಕೊಡಗು ಮೂಲಕ ತಲಚೇರಿ-ಮೈಸೂರು ರೈಲ್ವೆ ಮಾರ್ಗದ ವಿರುದ್ಧ ಪಿಐಎಲ್: ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಲು ಹೈ ಕೋರ್ಟ್ ಎರಡು ವಾರದ ಗಡುವು
ಕೊಡಗು

ಕೊಡಗು ಮೂಲಕ ತಲಚೇರಿ-ಮೈಸೂರು ರೈಲ್ವೆ ಮಾರ್ಗದ ವಿರುದ್ಧ ಪಿಐಎಲ್: ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಲು ಹೈ ಕೋರ್ಟ್ ಎರಡು ವಾರದ ಗಡುವು

July 28, 2018

ಬೆಂಗಳೂರು:  ಕೊಡಗು ಮೂಲಕ ಹಾದು ಹೋಗುವ ವಿವಾದಿತ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಕೈಗೆತ್ತಿಕೊಂಡಿಲ್ಲ ಎಂಬುದರ ಬಗ್ಗೆ ದಾಖಲೆ ಸಹಿತ ಸಾಕ್ಷ್ಯಾ ಧಾರಗಳನ್ನು ಒದಗಿಸಬೇಕೆಂದು ಹೈ ಕೋರ್ಟ್ ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಗಡುವು ನೀಡಲಾಗಿದೆ. ಹೈ ಕೋರ್ಟ್‍ನಲ್ಲಿ ರೈಲ್ವೆ ಮಾರ್ಗದ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಜು.25 ರಂದು ನಡೆದು, ಸರ್ಕಾರಿ ವಕೀಲರು ರಾಜ್ಯದಲ್ಲಿ ಈ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿಲ್ಲ ಎಂದು ವಾದಿಸಿದರು. ಈ ಯೋಜನೆ ಕೈಗೆತ್ತಿಕೊಂಡಿಲ್ಲ ಎಂಬುದನ್ನು ರಾಜ್ಯ ಸರ್ಕಾರ ದಾಖಲೆ ಸಹಿತ ಸಾಕ್ಷ್ಯಾಧಾರಗಳನ್ನು…

ಬಡ್ತಿ ಮೀಸಲಾತಿ ಕಾಯ್ದೆ-2017 ಜಾರಿಗೆ ಆಗ್ರಹ : ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
ಚಾಮರಾಜನಗರ

ಬಡ್ತಿ ಮೀಸಲಾತಿ ಕಾಯ್ದೆ-2017 ಜಾರಿಗೆ ಆಗ್ರಹ : ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

July 22, 2018

ಚಾಮರಾಜನಗರ: ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರಿಗೆ ತತ್ಪರಿಣಾಮದ ಜೇಷ್ಠತೆ ವಿಸ್ತರಿಸುವ ಕಾಯ್ದೆ-2017 ಅನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ನಗರದಲ್ಲಿ ಶನಿವಾರ ಕರ್ನಾ ಟಕ ರಾಜ್ಯ ಸರ್ಕಾರಿ ಎಸ್‍ಸಿ, ಎಸ್‍ಟಿ ನೌಕ ರರ ಸಮನ್ವಯ ಸಮಿತಿಯ ಜಿಲ್ಲಾ ಸಮಿತಿ ಹಾಗೂ ದಲಿತಪರ ಸಂಘಟನೆಗಳ ಪದಾ ಧಿಕಾರಿಗಳು ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಭವನದ ಮುಂಭಾಗ ಸಮಾ ವೇಶಗೊಂಡ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು. ಬಳಿಕ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯಿತ್ರಿ…

1 2 3 4
Translate »