ಜೊತೆ ಜೊತೆಗೆ ಬಿರುಸಿನ ರಾಜಕೀಯ ಚಟುವಟಿಕೆಗಳು ಮೈಸೂರು: ರಾಜ್ಯದಲ್ಲಿ ನೂತನ ಸರ್ಕಾರ ರಚಿಸಲು ತುದಿ ಗಾಲಲ್ಲಿ ನಿಂತಿರುವ ಮಾಜಿ ಮುಖ್ಯ ಮಂತ್ರಿಗಳೂ ಆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸ ದಲ್ಲಿ ಈಗ ಸಂತಸ ಮನೆ ಮಾಡಿದೆ. ಕಿಕ್ಕಿರಿದ ಜನವೋ ಜನ. ಜೊತೆ ಜೊತೆಗೆ ಬಿರುಸಿನ ರಾಜಕೀಯ ಚಟುವಟಿಕೆ ಗಳು ನಡೆದಿವೆ. ಬೆಂಗಳೂರಿನ ಪ್ರತಿಷ್ಠಿತ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸ ದಲ್ಲಿ ಹಬ್ಬದ ವಾತಾವರಣ ಕಂಡು ಬರುತ್ತಿದೆ. ಬೆಳಿಗ್ಗೆಯಿಂದಲೇ ಬಿಜೆಪಿ ಶಾಸಕರು, ಮುಖಂಡರು, ಹಿತೈಷಿಗಳು, ಅಭಿಮಾನಿಗಳು, ಪದಾಧಿಕಾರಿಗಳು…