ಮೈಸೂರು: ಶಿಥಿಲಾವಸ್ಥೆಯಲ್ಲಿರುವ ನರ್ಮ್ ಯೋಜನೆಯಡಿ ನಿರ್ಮಿಸಿರುವ ಮನೆಗಳಲ್ಲಿ ದುರಸ್ಥಿ ಮಾಡುವುದರೊಂದಿಗೆ, ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ಆದಿದ್ರಾವಿಡ ಯುವಕರ ಅಭಿವೃದ್ಧಿ ಮಹಾಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ಬನ್ನಿಮಂಟಪದ ಹೈವೇ ವೃತ್ತದ ಬಳಿ ಇರುವ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಮುಂದೆ ಬುಧವಾರ ಬೆಳಿಗ್ಗೆ ಪಾಲಿಕೆ ಸದಸ್ಯ ಎಸ್‍ಎಬಿಎಂ ಮಂಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ನರ್ಮ್ ಯೋಜನೆಯಲ್ಲಿ ಕೊಳಗೇರಿ ನಿವಾಸಿಗಳಿಗಾಗಿ ನಿರ್ಮಿಸಿರುವ ವಸತಿ ಸಮುಚ್ಛಯಗಳು ಕಳಪೆ. ಇದರಿಂದ ಅಲ್ಲಿನ ನಿವಾಸಿಗಳು…