ಮೈಸೂರು: ಕೃಷಿಯಲ್ಲಿ ಕ್ರೀಯಾಶೀಲವಾಗಿ ತೊಡಗಿಸಿಕೊಂಡರೆ, ಸರ್ಕಾರಕ್ಕೆ ರೈತ ಸಮುದಾಯವೇ ಸಾಲ ನೀಡಬಹುದು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕøತ ಪ್ರಗತಿಪರ ಕೃಷಿಕರಾದ ಕವಿತಾ ಮಿಶ್ರಾ ಅಭಿಪ್ರಾಯಪಟ್ಟರು. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ರೈತಮಿತ್ರ ಫಾರ್ಮರ್ಸ್ ಪೆÇ್ರಡ್ಯೂಸರ್ ಕಂಪನಿ ಲಿಮಿಟೆಡ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕೃಷಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರು ಒಂಟಿ ಬೆಳೆ ಪದ್ಧತಿಗಿಂತ ಬಹುಬೆಳೆ ಪದ್ಧತಿಗೆ ಆದ್ಯತೆ ನೀಡಿದರೆ, ಉತ್ತಮ ಆದಾಯ ಗಳಿಸಬಹುದು ಎಂದು ತಿಳಿಸಿದರು. ಪ್ರಸ್ತುತ ಗ್ರಾಮೀಣ ಪ್ರದೇಶದ ನಮ್ಮ ಯುವ ಜನರು ನಗರ ಪ್ರದೇಶಗಳಿಗೆ…