ಮೈಸೂರು: ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ಸೆ.22ರಂದು ನಾಡಪ್ರಭು ಕೆಂಪೇಗೌಡ ಮತ್ತು ಕೆ.ಹೆಚ್.ರಾಮಯ್ಯ ಜನ್ಮ ದಿನಾಚರಣೆ ಹಾಗೂ ವಿಕಾಸಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷೆ ಹೆಚ್.ಎಲ್.ಯಮುನಾ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಪುರಭವನದಲ್ಲಿ ಏರ್ಪಡಿಸಿರುವ ಸಮಾರಂಭ ವನ್ನು ಅಂದು ಮಧ್ಯಾಹ್ನ 3.30ಕ್ಕೆ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಕುಮಾರಚಂದ್ರಶೇಖರನಾಥ ಸ್ವಾಮೀಜಿ ಹಾಗೂ ಕುಣಿಗಲ್ ತಾಲೂಕಿನ ಶ್ರೀ ಅರೇಶಂಕರ…