Tag: Kempegowda Jayanti

ಮೈಸೂರು ನಗರ ಸಾರಿಗೆ ಘಟಕದಲ್ಲಿ ಕೆಂಪೇಗೌಡ ಜಯಂತಿ ಆಚರಣೆ
ಮೈಸೂರು

ಮೈಸೂರು ನಗರ ಸಾರಿಗೆ ಘಟಕದಲ್ಲಿ ಕೆಂಪೇಗೌಡ ಜಯಂತಿ ಆಚರಣೆ

June 28, 2018

ಮೈಸೂರು: ಮೈಸೂರಿನ ಕುವೆಂಪುನಗರದ ಕೆಎಸ್ಆರ್‌ಟಿಸಿ ನಗರ ಸಾರಿಗೆ 2ನೇ ಘಟಕದಲ್ಲಿ ಬುಧವಾರ ಕೆಎಸ್ಆರ್‌ಟಿಸಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು. ಕೆಂಪೇಗೌಡರ ಭಾವಚಿತ್ರಕ್ಕೆ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್ ಪುಷ್ಪಾರ್ಚನೆ ಮಾಡಿದರು. ಬಳಿಕ ಮಾತನಾಡಿದ ಅವರು, ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರು ಯಾವುದೇ ಒಂದು ಜಾತಿ ಅಥವಾ ವರ್ಗಕ್ಕೆ ಸೇರದ ಜಾತ್ಯತೀತ ಮಹಾನ್ ನಾಯಕ ಎಂದು ಸ್ಮರಿಸಿದರು. ಕೆಎಸ್ಆರ್‌ಟಿಸಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಟಿ.ಬಸವರಾಜು ಅಧ್ಯಕ್ಷತೆ ವಹಿಸಿದ್ದರು….

ನಾಡು ಕಟ್ಟಿದವರಲ್ಲಿ ಕೆಂಪೇಗೌಡ ಪ್ರಮುಖರು: ಸಚಿವ ಹೆಚ್.ಡಿ.ರೇವಣ್ಣ
ಹಾಸನ

ನಾಡು ಕಟ್ಟಿದವರಲ್ಲಿ ಕೆಂಪೇಗೌಡ ಪ್ರಮುಖರು: ಸಚಿವ ಹೆಚ್.ಡಿ.ರೇವಣ್ಣ

June 28, 2018

ಹಾಸನ: ನಾಡು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ ಕೆಂಪೇಗೌಡರ ಸಾಮಾಜಿಕ ಸೇವೆಯನ್ನು ಎಲ್ಲರೂ ಸ್ಮರಿಸ ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿ ವರೂ ಆದ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಕೆಂಪೇಗೌಡ ಜಯಂತಿ ಉದ್ಘಾಟಿಸಿ ಮಾತನಾಡಿದ ಸಚಿವರು, ದೇಶಕ್ಕಾಗಿ ಕೊಡುಗೆ ನೀಡಿದವರನ್ನು ಗುರುತಿಸುವುದು, ಸ್ಮರಿಸುವುದು ಎಲ್ಲರ ಕರ್ತವ್ಯ ಎಂದರು. ಕೆಂಪೇಗೌಡರು ಬೆಂಗಳೂರು ನಗರ ನಿರ್ಮಾಣದ ಮೂಲಕ ರಾಜ್ಯದ ಸರ್ವ ತೋಮುಖ ಅಭಿವೃದ್ಧಿಗೆ ಕೊಡುಗೆ ನೀಡಿ ದ್ದಾರೆ….

ಜಿಲ್ಲಾದ್ಯಂತ ಕೆಂಪೇಗೌಡರ ಜಯಂತಿ ಸಂಭ್ರಮ
ಮಂಡ್ಯ

ಜಿಲ್ಲಾದ್ಯಂತ ಕೆಂಪೇಗೌಡರ ಜಯಂತಿ ಸಂಭ್ರಮ

June 28, 2018

ಜಾನಪದ ಕಲಾತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ, ಎಲ್ಲೆಡೆ ಬೆಂಗಳೂರು ನಿರ್ಮಾತೃವಿನ ಗುಣಗಾನ ಮಂಡ್ಯ:  ಜಿಲ್ಲಾದ್ಯಂತ ಬುಧ ವಾರ ನಾಡಪ್ರಭು ಕೆಂಪೇಗೌಡರ ಜಯಂತಿ ಯನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರ ಸೇರಿದಂತೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಬೆಂಗಳೂರು ನಿರ್ಮಾತೃ ವಿನ ಗುಣಗಾನ ನಡೆಯಿತು. ಸಾಧನೆಗೆ ಇತಿಹಾಸದ ಅರಿವು ಅಗತ್ಯ: ‘ಜೀವನದಲ್ಲಿ ಯಾರಾದರೂ ಸಾಧನೆ ಮಾಡ ಬೇಕಾದರೆ ಇತಿಹಾಸದ ಅರಿವು ಅಗತ್ಯ. ಕೆಂಪೇಗೌಡರು ತಮ್ಮ ಜೀವನದಲ್ಲಿ ಇತಿ ಹಾಸ ಸೃಷ್ಟಿಸಿದ ವೀರವ್ಯಕ್ತಿ’ ಎಂದು ಬಿ.ಇಡಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎಸ್.ಬಿ.ಶಂಕರೇಗೌಡ ಹೇಳಿದರು….

ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರ ಕೊಡುಗೆ ಅಪಾರ
ಕೊಡಗು

ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರ ಕೊಡುಗೆ ಅಪಾರ

June 28, 2018

ಮಡಿಕೇರಿ: ಬೆಂಗಳೂರು ನಿರ್ಮಾತೃ, ಆದರ್ಶ ಆಡಳಿತಗಾರ ಕೆಂಪೇ ಗೌಡರ ಆಡಳಿತ ವ್ಯವಸ್ಥೆ, ದಕ್ಷತೆ ವಿಚಾರ ಗಳನ್ನು ಇಂದಿನ ಯುವ ಜನರು ತಿಳಿದು ಕೊಳ್ಳುವಂತಾಗಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಸಲಹೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರ ದಲ್ಲಿ ಬುಧವಾರ ನಡೆದ ನಾಡಪ್ರಭು ಕೆಂಪೇ ಗೌಡ ಜಯಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಡಪ್ರಭು ಕೆಂಪೇಗೌಡರು ಆದರ್ಶ ಆಡಳಿತಗಾರರಾಗಿ ಬೆಂಗಳೂರು ನಗರ ನಿರ್ಮಾಣಕ್ಕೆ ಅಪಾರ…

ನಾಳೆ ನಾಡಪ್ರಭು ಕೆಂಪೇಗೌಡ ಜಯಂತಿ
ಮಂಡ್ಯ

ನಾಳೆ ನಾಡಪ್ರಭು ಕೆಂಪೇಗೌಡ ಜಯಂತಿ

June 26, 2018

ಮಂಡ್ಯ:  ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂ.27 ರಂದು ಬೆಳಿಗ್ಗೆ 11 ಗಂಟೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ. ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆವಹಿಸುವರು. ಆದಿಚುಂಚನ ಗಿರಿ ಕ್ಷೇತ್ರದ ಕಾರ್ಯದರ್ಶಿ ಶ್ರೀಪುರುಷೋತ್ತಮನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ಅಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ನಾಡಪ್ರಭು ಕೆಂಪೇಗೌಡರ ಅಲಂಕೃತ ಭಾವಚಿತ್ರದ ಮೆರವಣಿಗೆ…

ಅರ್ಥಪೂರ್ಣ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನ
ಹಾಸನ

ಅರ್ಥಪೂರ್ಣ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನ

June 22, 2018

ಹಾಸನ:  ನಾಡಪ್ರಭು ಕೆಂಪೇಗೌಡ ಜಯಂತಿ ಯನ್ನು ಜೂ. 27ರಂದು ನಗರದ ಹಾಸನಾಂಬ ಕಲಾ ಮಂದಿರ ದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹೆಚ್ಚುವರಿ ಜಿಲ್ಲಾಧಿಕಾರಿ ಪೂರ್ಣಿಮಾ ಅವರ ಅಧ್ಯಕ್ಷತೆ ಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕುರಿತು ಪೂರ್ವ ಸಿದ್ದತಾ ಸಭೆ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಪೂರ್ಣಿಮಾ ಮಾತನಾಡಿ, ಜಯಂತಿ ಕುರಿತು ನಗರದಲ್ಲಿ ವ್ಯಾಪಕ ಪ್ರಚಾರ ಮಾಡಿಸಲು ಕ್ರಮವಹಿಸುವಂತೆ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಅವರಿಗೆ ಸೂಚಿಸಿದರು….

Translate »