ಮಡಿಕೇರಿ: ಕಾಶ್ಮೀರದ ಪುಲ್ವಾಮ ದಲ್ಲಿ ಉಗ್ರರ ದಾಳಿಯಲ್ಲಿ ಬಲಿಯಾದ ಭಾರತೀಯ ಸೈನಿಕರ ಹತ್ಯೆಗೆ ಭಾರತ ವಾಯು ಪಡೆ ದಾಳಿ ನಡೆಸುವ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಿರುವುದು ಹೆಮ್ಮೆ ತಂದಿದೆ ಎಂದು ನಿವೃತ್ತ ಮೇಜರ್ ಬಿದ್ದಂಡ ನಂದಾ ಸಂತಸ ವ್ಯಕ್ತಪಡಿಸಿದ್ದಾರೆ. ‘ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಅವರು, ಮೀರಾಜ್ ಯುದ್ಧ ವಿಮಾನಗಳ ಪೈಲಟ್‍ಗಳು ಈ ಕಾರ್ಯಾಚರಣೆಯ ನಿಜವಾದ ಹೀರೊಗಳೆಂದು ಬಣ್ಣಿಸಿದರು. ಫ್ರಾನ್ಸ್‍ನ ಡಸಾಲ್ಟ್ ಕಂಪೆನಿ ನಿರ್ಮಿತ ಮೀರಾಜ್ ಯುದ್ಧ ವಿಮಾನಗಳನ್ನು ಈ ಕಾರ್ಯಾಚರ ಣೆಗೆ ಬಳಸಿಕೊಂಡಿದ್ದು, ಬಹುದೊಡ್ಡ ಯಶಸ್ಸು…
ನಕ್ಸಲ್ ಚಟುವಟಿಕೆಗೆ ಕೆಲ ಪರಿಸರವಾದಿಗಳ ಪರೋಕ್ಷ ಬೆಂಬಲ
February 26, 2019ಶಾಸಕ ಕೆ.ಜಿ. ಬೋಪಯ್ಯ ಗಂಭೀರ ಆರೋಪ ಗೋಣಿಕೊಪ್ಪಲು: ಅಭಿವೃದ್ಧಿ ಕಾರ್ಯಗಳಿಗೆ ವಿರೋಧ ವ್ಯಕ್ತಪಡಿಸುವ ಕೆಲವು ಪರಿಸರವಾದಿಗಳು ಪರೋಕ್ಷವಾಗಿ ನಕ್ಸಲ್ ಚಟುವಟಿಕೆಯನ್ನು ಪ್ರೋತ್ಸಾಹಿಸಿ ದಂತಾಗಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಗಂಭೀರ ಆರೋಪ ಮಾಡಿದರು. ಸೇವ್ ಕೊಡಗು ಸಂಘಟನೆ ವತಿಯಿಂದ ನಕಲಿ ಪರಿಸರವಾದಿಗಳ ವಿರುದ್ದ ಪಟ್ಟಣ ದಲ್ಲಿ ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿ ಯಲ್ಲಿ ಮಾತನಾಡಿದ ಅವರು, ಪರಿಸರ ವಾದಿಗಳಿಂದ ಜಿಲ್ಲೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ವಾಹನ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಿದೆ. ಇದರಿಂದ ರಸ್ತೆ ಅಭಿವೃಧ್ಧಿ ಅವಶ್ಯಕವಾಗಿದೆ. ಇದಕ್ಕೆ ವಿರೋಧ…
ಫೆ.28 ರಂದು ಮುಖ್ಯಮಂತ್ರಿಗಳ ಕೊಡಗು ಜಿಲ್ಲಾ ಪ್ರವಾಸ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ
February 26, 2019ಮಡಿಕೇರಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಫೆ.28 ರಂದು ಕೊಡಗು ಜಿಲ್ಲೆಗೆ ಆಗಮಿಸಿ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ನಿರ್ಮಿಸಿರುವ ಮನೆಗಳನ್ನು ಹಸ್ತಾಂತರಿಸಲಿದ್ದಾರೆ. ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳು ವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಮುಖ್ಯಮಂತ್ರಿ ಅವರ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಸಿದ್ಧತೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….
ಪೇದೆ ಮೇಲೆ ಹಲ್ಲೆ: ಸಹೋದರರ ಬಂಧನ
February 26, 2019ಕುಶಾಲನಗರ: ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆತಂದ ಆರೋಪಿಗಳಿಬ್ಬರು ಕರ್ತವ್ಯ ನಿರತ ಪೆÇಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಘಟನೆಯೊಂದಕ್ಕೆ ಸಂಬಂಧಿಸಿದಂತೆ ಕೂಡುಮಂಗಳೂರು ಗ್ರಾಪಂ ಸದಸ್ಯ ಸುರೇಶ ಮತ್ತು ಆತನ ಸಹೋದರ ಸ್ವಾಮಿ ವಿರುದ್ಧ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿಕೊಂಡು ಬಂಧಿಸಲಾಗಿದ್ದು, ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಘಟನೆ ವಿವರ: ಆರೋಪಿಗಳಿಬ್ಬರು ಮದ್ಯಪಾನ ಮಾಡಿ ನೆರೆಮನೆಯವ ರೊಂದಿಗೆ ಗಲಾಟೆ ಮಾಡಿ ಮಹಿಳೆ ಯೊಂದಿಗೆ ಅನುಚಿತವಾಗಿ ವರ್ತಿಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು…
ಕುಪ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಉದ್ಘಾಟನೆ
February 24, 2019ತಿ.ನರಸೀಪುರ: ಗ್ರಾಮೀಣ ಪ್ರದೇಶಗಳ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಉತ್ತಮವಾದ ಸರ್ಕಾರಿ ವೈದ್ಯಕೀಯ ಸೇವೆಯನ್ನು ಕಲ್ಪಿಸಲು ಪ್ರಾಥ ಮಿಕ ಆರೋಗ್ಯ ಕೇಂದ್ರಗಳಿಗೆ ಸುಸಜ್ಜಿತ ಅತ್ಯಾಧುನಿಕ ಶೈಲಿಯ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಡಾ.ಎಸ್.ಯತೀಂದ್ರ ಹೇಳಿದರು. ವರುಣ ವಿಧಾನಸಭಾ ಕ್ಷೇತ್ರದ ತಾಲೂಕಿನ ಕುಪ್ಯ ಗ್ರಾಮದ ಹೊರವಲಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ವಿಭಾಗದಿಂದ 1.16 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡವನ್ನು ಗುರುವಾರ ಸಂಜೆ ಉದ್ಘಾಟಿಸಿದ ನಂತರ…
ಹಾದಿ ತಪ್ಪುತ್ತಿರುವ ವಿದ್ಯಾವಂತರು: ಸರ್ಪಭೂಷಣ ಮಠಾಧೀಶ ಶ್ರೀಮಲ್ಲಿಕಾರ್ಜುನ ಸ್ವಾಮೀಜಿ ಆತಂಕ
February 24, 2019ಸೋಮವಾರಪೇಟೆ: ಇಂದಿನ ಸಮಾಜದಲ್ಲಿ ವಿದ್ಯಾವಂತರೇ ಹಾದಿ ತಪ್ಪುತ್ತಿರುವುದು ವಿಷಾದನೀಯ ಎಂದು ಬೆಂಗಳೂರು ಸರ್ಪಭೂಷಣ ಮಠಾ ಧೀಶರಾದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು. ಇಲ್ಲಿನ ಮಸಗೋಡು ಚೆನ್ನಮ್ಮ ಟ್ರಸ್ಟ್ ಆಶ್ರಯದಲ್ಲಿ ಮಸಗೋಡು ಚೆನ್ನಮ್ಮ ಆಂಗ್ಲ ಮಾಧ್ಯಮ ಪ್ರೌಢಶಾಲೆ ಆವರಣದಲ್ಲಿ ಆಯೋ ಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂ ಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಅತ್ಯವಶ್ಯಕ. ಹಾಗೆಯೇ ಓದಿನ ಜೊತೆಗೆ ಬುದ್ಧಿವಂತಿಕೆಯೂ ಬೇಕು ಎಂದರು. ಹೀಗೆ ಬುದ್ಧೊವಂತಿಕೆ ಮತ್ತು ಶಿಕ್ಷಣ ಪಡೆದವರೇ ಹಾದಿ ತಪ್ಪುತ್ತಿರುವುದು…
ಹುಂಡಿ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಚಾಲನೆ
February 24, 2019ಸಿದ್ದಾಪುರ: ಜಿಪಂ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಚೆನ್ನಯ್ಯನ ಕೋಟೆ ಜಿಪಂ ಕ್ಷೇತ್ರ ವ್ಯಾಪ್ತಿಯ ಹುಂಡಿ ಗ್ರಾಮದಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ 50 ಸಾವಿರ ಲೀಟರ್ ಸಾಮಥ್ರ್ಯದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ತಾಪಂ ಮಾಜಿ ಸದಸ್ಯ ಸಿ.ಎಂ.ಹಂಸ ಚಾಲನೆ ನೀಡಿದರು. ಬಳಿಕ ಮಾತನಾಡಿ, ಬಹುದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಗ್ರಾಮದಲ್ಲಿ ಇರುವುದನ್ನು ಮನಗಂಡು 16 ಲಕ್ಷ ವೆಚ್ಚದಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಮುಂದಾಗಿದೆ. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಯೋಗೇಶ್ ಮಾತನಾಡಿ, ಈ ಭಾಗದಲ್ಲಿ ಕುಡಿಯುವ ನೀರು,…
ಕಿಸಾನ್ ಸಮ್ಮಾನ್ ಯೋಜನೆಯಿಂದ ರೈತರಿಗೆ ಹೆಚ್ಚು ಪ್ರಯೋಜನ
February 24, 2019ಗೋಣಿಕೊಪ್ಪಲು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಣ್ಣ ಹಾಗೂ ಅತೀಸಣ್ಣ ರೈತರನ್ನು ಕೃಷಿಯಲ್ಲಿ ಪ್ರೋತ್ಸಾ ಹಿಸಲು ಜಾರಿಗೆ ತಂದಿರುವ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಸಣ್ಣ ಬೆಳೆಗಾರರಿಗೆ ಹೆಚ್ಚು ಪ್ರಯೋಜನಕಾರಿ ಎಂದು ಶಾಸಕ ಕೆ. ಜಿ. ಬೋಪಯ್ಯ ತಿಳಿಸಿದರು. ಇಲ್ಲಿನ ಕೃಷಿ ವಿಜ್ಞಾನ ಕೇಂದ್ರದ ವತಿ ಯಿಂದ ಆಯೋಜಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಉದ್ಘಾಟನೆಯ ನೇರ ಪ್ರಸಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಮಾಜಿ ಪ್ರಧಾನಿ…
ಅಭಿವೃದ್ಧಿ ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿ ಪಾತ್ರ ಹಿರಿದು
February 24, 2019ಮಡಿಕೇರಿ: ಯುವ ಜನಾಂ ಗವು ಸಾಕಷ್ಟು ಜವಾಬ್ದಾರಿಯನ್ನು ಹೊಂದಿದ್ದು, ಇಂದಿನ ಯುವಕರಿಗೆ ಸರಿಯಾದ ಮಾರ್ಗ ದರ್ಶನ ನೀಡಬೇಕು. ಭಾರತದ ಗಡಿ ಯಲ್ಲಿ ರಕ್ಷಣೆ ಮಾಡುತ್ತಿರುವ ಯೋಧರು ಕೂಡ ಯುವಜನರಾಗಿದ್ದು, ಅವರನ್ನು ಸ್ಮರಿಸಬೇಕಿದೆ. ಭವ್ಯ ರಾಷ್ಟ್ರದ ನಿರ್ಮಾ ಣಕ್ಕೆ ಯುವ ಶಕ್ತಿಯ ಪಾತ್ರ ಮಹತ್ತರ ಎಂದು ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟರು. ನೆಹರು ಯುವ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಶುಕ್ರವಾರ ನಡೆದ “ಜಿಲ್ಲಾ ಯುವ ಸಮ್ಮೇಳನ, ಕಾರ್ಯಾಗಾರ,…
ಮನೆ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ
February 21, 2019ಮಡಿಕೇರಿ: ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ನಿರ್ಮಿಸಿರುವ ಮನೆ ಗಳನ್ನು ಸಂಬಂಧಪಟ್ಟ ಅರ್ಹ ಫಲಾನುಭವಿ ಗಳಿಗೆ ಹಸ್ತಾಂತರ ಮಾಡಲು ಬಾಕಿ ಇರುವ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರಪೇಟೆ ತಾಲೂಕಿನ ಬಸವನ ಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಮನೆಗೆ ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ…