ಕುಶಾಲನಗರ: ಇಲ್ಲಿಗೆ ಸಮೀ ಪದ ಕೂಡಿಗೆ ಸೈನಿಕ ಶಾಲೆ ವಿದ್ಯಾರ್ಥಿ ಅನು ಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈನಿಕ ಶಾಲೆಯ ಉಪ ಪ್ರಾಂಶುಪಾಲೆ ಸೇರಿದಂತೆ ಐವರ ವಿರುದ್ಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಸೈನಿಕ ಶಾಲೆಯ ಉಪ ಪ್ರಾಂಶುಪಾಲೆ ಸೀಮಾ ತ್ರಿಪಾಠಿ, ಕನ್ನಡ ಶಿಕ್ಷಕ ಮಂಜಪ್ಪ, ಕಂಪ್ಯೂಟರ್ ಶಿಕ್ಷಕ ಗೋವಿಂದರಾಜು, ವಾರ್ಡನ್ ಸುನೀಲ್ ಮತ್ತು ಮ್ಯಾಥ್ಯು ಅವರು ಗಳು ಆರೋಪಕ್ಕೆ ಗುರಿಯಾದವರಾಗಿದ್ದು, ಮೃತ ವಿದ್ಯಾರ್ಥಿ ಎನ್.ಪಿ.ಚಿಂಗಪ್ಪ ತಂದೆ ಸೈನಿಕ ಶಾಲೆಯ ಹಾಕಿ ಕೋಚ್…
ಕೊಡಗು
ಕೂಡಿಗೆ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು
June 24, 2018ಕುಶಾಲನಗರ: ಕೂಡಿಗೆ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿ ಯೋರ್ವ ಅನುಮಾನಸ್ಪದವಾಗಿ ಸಾವಿಗೀಡಾಗಿದ್ದು, ಈತನನ್ನು ಕೊಲೆ ಮಾಡಲಾಗಿದೆ ಎಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ. ಸೋಮವಾರಪೇಟೆ ತಾಲೂಕು ಮಾದಾಪುರ ಗ್ರಾಮದವನಾಗಿದ್ದು, ಕೂಡಿಗೆ ಸೈನಿಕ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಚಿಂಗಪ್ಪ (14) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿ. ಈತ ಇಂದು ಸಂಜೆ ಶಾಲೆಯ ಶೌಚಾಲಯದಲ್ಲಿ ಪ್ರಜ್ಞಾಹೀನನಾಗಿ ಬಿದ್ದಿದ್ದ ಎನ್ನಲಾಗಿದ್ದು, ಅದನ್ನು ಗಮನಿಸಿದ ಶಾಲೆಯವರು ಆತನನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ, ವಿದ್ಯಾರ್ಥಿ ಅದಾಗಲೇ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ವಿದ್ಯಾರ್ಥಿ ಸಾವನ್ನಪ್ಪಿರುವುದು ತಿಳಿಯುತ್ತಿದ್ದಂತೆಯೇ ಕುಶಾಲನಗರ…