ಮೈಸೂರು: ಅನಾಮಿಕನೋರ್ವ ಆತಂಕ ಹುಟ್ಟಿಸಿದ್ದಾನೆಂದು ಹೇಳಲಾಗಿರುವ ಮೈಸೂರಿನ ಕೆ.ಆರ್.ಆಸ್ಪತ್ರೆ ಆವರಣದ ನರ್ಸಿಂಗ್ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿಗಳನ್ನು ರಜೆ ಮೇಲೆ, ಮನೆಗೆ ಕಳುಹಿಸಲಾಗಿದೆ. ಘಟನೆಯಿಂದ ಆತಂಕಗೊಂಡು, ಮಾನಸಿಕವಾಗಿ ವಿಚಲಿತರಾಗಿದ್ದ 112 ನರ್ಸಿಂಗ್ ಶಾಲೆ ವಿದ್ಯಾರ್ಥಿಗಳು ಹಾಗೂ 165 ಮಂದಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳನ್ನು ಜು 31ರವರೆಗೆ ರಜೆ ಮೇಲೆ ಅವರ ಪೋಷಕರನ್ನು ಕರೆಸಿ ಕಳುಹಿಸಿಕೊಡಲಾಗಿದೆ ಎಂದು ಕೆ.ಆರ್.ಆಸ್ಪತ್ರೆ ಸ್ಥಾನಿಕ ವೈದ್ಯಾಧಿಕಾರಿ ಡಾ|| ಎಂ.ಎಸ್.ರಾಜೇಶ್‍ಕುಮಾರ್ ತಿಳಿಸಿದ್ದಾರೆ. ಮಂಗಳವಾರ ಸಂಜೆಯೇ ಬಹುತೇಕ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್ ಕೊಠಡಿಗಳನ್ನು ತೆರವುಗೊಳಿಸಿ ಲಗೇಜ್‍ನೊಂದಿಗೆ ತೆರಳಿದರೆ,…