ಮೈಸೂರು: ಮೈಸೂರು ವಿಶ್ವವಿದ್ಯಾನಿಲಯವು ಅಂಧ ಸಹಾಯಕ ಪ್ರಾಧ್ಯಾಪಕರನ್ನು ಸ್ನಾತಕೋತ್ತರ ವಿಭಾಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಪೊಲಿಟಿಕಲ್ ಸೈನ್ಸ್ ಅಧ್ಯಯನ ವಿಭಾಗಕ್ಕೆ ಸಹಾಯಕ ಪ್ರಾಧ್ಯಾಪಕ ಕೃಷ್ಣ ಆರ್. ಹೊಂಬಾಳೆ ಅವರನ್ನು ಅಧ್ಯಕ್ಷರಾಗಿ ನೇಮಿಸ ಲಾಗಿದೆ. 102 ವರ್ಷಗಳ ಇತಿಹಾಸದಲ್ಲಿ ಮೈಸೂರು ವಿಶ್ವವಿದ್ಯಾನಿಲಯವು ಮೊದಲ ಬಾರಿ ಅಂಧರನ್ನು ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರನ್ನಾಗಿ ನೇಮಿಸಿದೆ. 1999ರಲ್ಲಿ ಸೇವೆ ಆರಂಭಿಸಿದ ಅವರು, 2010ರಲ್ಲಿ ಪಿಹೆಚ್‍ಡಿ ಪದವಿ ಪಡೆದರ ಲ್ಲದೆ, ಧಾರವಾಡದ ಕರ್ನಾಟಕ ವಿಶ್ವ ವಿದ್ಯಾನಿಲಯದಲ್ಲಿ ಎಂ.ಎ. ಮತ್ತು ಎಂ.ಫಿಲ್. ಗಳಿಸಿದ್ದರು. ರಾಜ್ಯಶಾಸ್ತ್ರ ವಿಭಾಗಕ್ಕೆ…