ಬೆಂಗಳೂರು, ಜ.5-ಕೃಷ್ಣರಾಜ ಸಾಗರ ಅಣೆಕಟ್ಟು ಹಾಗೂ ಬೃಂದಾ ವನ ಉದ್ಯಾನದ ಪರಿಸರದಲ್ಲಿ ಗಣಿ ಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಣೆಕಟ್ಟಿನ ಭದ್ರತೆಗೆ ಧಕ್ಕೆಯಾಗ ದಂತೆ ಈ ಪರಿಸರದಲ್ಲಿ ಕೂಡಲೇ ಗಣಿ ಗಾರಿಕೆ ಸ್ಥಗಿತಗೊಳಿಸಿ, ವರದಿ ಸಲ್ಲಿಸು ವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಲ್ಲದೆ ಸೂಕ್ಷ್ಮ ಪ್ರದೇಶ ಗಳಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತ ಗೊಳಿಸುವಂತೆ ನಿರ್ದೇಶನ ನೀಡಿದರು.
3 ದಿನ ಕೆಆರ್‍ಎಸ್‍ಗೆ 42 ಸಾವಿರ ಪ್ರವಾಸಿಗರ ಭೇಟಿ
October 11, 2019ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಕೃಷ್ಣರಾಜಸಾಗರ (ಕೆಆರ್‍ಎಸ್)ಕ್ಕೆ ಅ.7ರಿಂದ 9ರವರೆಗೆ ಮೂರು ದಿನದಲ್ಲಿ 42 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದಾರೆ. ಅ.7 ಮತ್ತು 8ರಂದು ಆಯುಧ ಪೂಜೆ ಮತ್ತು ವಿಜಯದಶಮಿ ಮೆರವಣಿಗೆಯಂದು 25 ಸಾವಿರ ಮತ್ತು ಅ.9ರಂದು ಒಂದೇ ದಿನ 17 ಸಾವಿರ ಮಂದಿ ಕೆಆರ್‍ಎಸ್‍ಗೆ ಭೇಟಿ ನೀಡಿದ್ದಾರೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಸಿಗರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಕೆಆರ್‍ಎಸ್‍ನ ಹೊರಭಾಗದ ಹೆಲಿಪ್ಯಾಡ್ ಬಳಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿ ಅಲ್ಲಿಂದ ಕೆಎಸ್‍ಆರ್‍ಟಿಸಿ…
ಕೆಆರ್‍ಎಸ್, ಕಬಿನಿ, ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಳ
August 8, 2019ಮೈಸೂರು: ಕೇರಳದ ವೈನಾಡು ಮತ್ತು ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಬಿನಿ, ಹೇಮಾವತಿ ಮತ್ತು ಕೆಆರ್‍ಎಸ್ ಜಲಾ ಶಯದ ಒಳ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಕಬಿನಿಗೆ 25 ಸಾವಿರ ಕ್ಯೂಸೆಕ್ ನೀರು: ಕೇರಳದ ವೈನಾಡು ಹಾಗೂ ಕಬಿನಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾ ಗುತ್ತಿದ್ದು, ಜಲಾಶಯಕ್ಕೆ ಪ್ರಸ್ತುತ 25,000 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2284 ಅಡಿಗಳಿದ್ದು, ಸದ್ಯ 2281 ಅಡಿಗಳ ನೀರು ಸಂಗ್ರಹವಿದೆ. ಜಲಾಶಯ ಭರ್ತಿಗೆ ಕೇವಲ 3 ಅಡಿಯಷ್ಟೇ…
ಕೆಆರ್‍ಎಸ್ ಡಿಸ್ನಿಲ್ಯಾಂಡ್ ಯೋಜನೆ ರದ್ದು?
August 5, 2019ಮಂಡ್ಯ,ಆ.4(ನಾಗಯ್ಯ)- ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ಮಹತ್ವದ ಯೋಜನೆ, ಅದ ರಲ್ಲೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರ ಕನಸಿನ ಕೆಆರ್‍ಎಸ್‍ನ ಡಿಸ್ನಿಲ್ಯಾಂಡ್ ಯೋಜನೆ ರದ್ದಾಗುವ ಎಲ್ಲಾ ಲಕ್ಷಣಗಳು ದಟ್ಟವಾಗಿವೆ. ಹಿಂದಿನ ಸಮ್ಮಿಶ್ರ ಸರ್ಕಾರವು ಪ್ರಾರಂಭಿಸಲು ನಿರ್ಧರಿಸಿದ್ದ ವಿವಾದಾತ್ಮಕ ಡಿಸ್ನಿಲ್ಯಾಂಡ್ ಯೋಜನೆ ಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಕೈಬಿಡುವ ಸಾಧ್ಯತೆ ಯಿದೆ. ಈಗಾಗಲೇ ಟಿಪ್ಪು ಜಯಂತಿಯನ್ನು ರದ್ದು ಪಡಿಸಿರುವಂತೆಯೇ ಡಿಸ್ನಿಲ್ಯಾಂಡ್ ಯೋಜನೆಗೂ ಸಹ ಎಳ್ಳು ನೀರು ಬಿಡುವ ಸಾಧ್ಯತೆ ಇದೆ. ಈ ಯೋಜನೆಯ ಭವಿಷ್ಯವನ್ನು ನಿರ್ಧರಿಸಲು…
ಮಳೆ ಇಲ್ಲದೆ ಕೆಆರ್‍ಎಸ್, ಕಬಿನಿ ಬರಿದಾಗಿದ್ದರೂ ತಮಿಳ್ನಾಡಿಗೆ ನೀರು
August 3, 2019ಮಂಡ್ಯ, ಆ. 2- ಕಾವೇರಿ ಜಲಾನಯನ ಪ್ರದೇಶದಲ್ಲಿ ವಾಡಿಕೆ ಮಳೆ ಇಲ್ಲದೇ ಜಲಾಶಯ ಗಳು ಬತ್ತಿ ಹೋಗುತ್ತಿದ್ದು, ರೈತರ ಬೆಳೆ ಒಣ ಗುತ್ತಿದ್ದರೂ ಕೂಡ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕೆಆರ್‍ಎಸ್ ಮತ್ತು ಕಬಿನಿ ಜಲಾ ಶಯಗಳಿಂದ ತಮಿಳುನಾಡಿಗೆ ಪ್ರತಿದಿನ ನೀರು ಹರಿಸುತ್ತಿರುವುದು ರೈತರು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೆಆರ್‍ಎಸ್‍ನಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದರೂ ಅದನ್ನು ಗಣನೆಗೆ ತೆಗೆದು ಕೊಳ್ಳದ ಪ್ರಾಧಿಕಾರವು ತಮಿಳುನಾಡಿಗೆ ಯಥೇಚ್ಛವಾಗಿ ನೀರು ಹರಿಸುತ್ತಿರುವ ಪರಿಣಾಮ ರೈತರ ಬೆಳೆ ರಕ್ಷಣೆಗಾಗಿ ಕೆಆರ್‍ಎಸ್‍ನಿಂದ…
ಕೆಆರ್‍ಎಸ್ ಅಣೆಕಟ್ಟೆಗೆ ಟೆಲಿಮೆಟ್ರಿಕ್ವಾಟರ್ ಗೇಜ್ ಅಳವಡಿಕೆ
July 26, 2019ಮೈಸೂರು, ಜು.25(ಆರ್‍ಕೆ)- ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಅಣೆಕಟ್ಟೆಗೆ ಟೆಲಿಮೆಟ್ರಿಕ್ ವಾಟರ್ ಗೇಜ್ ಉಪಕರಣ ಅಳವಡಿಸಲಾಗಿದೆ. ಜಲಾಶಯಗಳ ನೀರಿನ ಸಂಗ್ರಹ ಪ್ರಮಾಣ, ಒಳಹರಿವು ಮತ್ತು ಹೊರ ಹರಿವಿನ ನಿಖರ ಮಾಹಿತಿಯನ್ನು ಅಧಿಕಾರಿ ಗಳು ನವದೆಹಲಿಯಲ್ಲೇ ಕುಳಿತು ಈ ಟೆಲಿ ಮೆಟ್ರಿಕ್ ವಾಟರ್ ಗೇಜ್ ಉಪಕರಣದಿಂದ ಆನ್‍ಲೈನ್ ಮೂಲಕ ತಿಳಿಯಬಹುದಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ದ ಆಂತರಿಕ ಸಮಿತಿ ಸದಸ್ಯರ ನಿಯೋಗವು ಅಣೆಕಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಒಂದು ವಾರದಲ್ಲಿ ಕೆಆರ್‍ಎಸ್ ಮತ್ತು ಹಾರಂಗಿ ಜಲಾಶಯ ಗಳ…
ಬೃಂದಾವನ ದೀಪಾಲಂಕಾರವೂ ಬಂದ್:ನಿರಾಸೆಯಿಂದ ವಾಪಸ್ಸಾದ ಪ್ರವಾಸಿಗರು
July 16, 2019ಶ್ರೀರಂಗಪಟ್ಟಣ, ಜು.15(ವಿನಯ್)- ಕಳೆದ 4 ತಿಂಗಳಿಂದ ಸಂಬಳ ನೀಡಿಲ್ಲ ವೆಂದು ಕೆ.ಆರ್.ಸಾಗರದ ನೂರಾರು ಗುತ್ತಿಗೆ ನೌಕರರು ಕಾವೇರಿ ನೀರಾವರಿ ನಿಗಮದ ಮುಖ್ಯ ಕಚೇರಿ ಮುಂಭಾಗ ದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ದರು. ಅಧಿಕಾರಿಗಳು ಕೆಲವೇ ದಿನಗಳಲ್ಲಿ ಸಂಬಳ ನೀಡುವುದಾಗಿ ಹೇಳಿದರೂ ಯಾವುದಕ್ಕೂ ಬಗ್ಗದ ಪ್ರತಿಭಟನಾ ನಿರತರು ಸಂಜೆವರೆಗೂ ಪ್ರತಿಭಟನೆ ನಡೆಸಿದರು. ಇದರಿಂದ ಸಂಜೆ ಬೃಂದಾವನದ ದೀಪಾಲಂಕಾರ ಬಂದ್ ಆಯಿತು. ಈ ಕಾರಣದಿಂದ ಬೃಂದಾವನದ ದೀಪಾಲಂಕಾರ ನೋಡಲು ಬಂದಿದ್ದ ಸುಮಾರು ಎರಡರಿಂದ ಮೂರು ಸಾವಿರ ಪ್ರವಾಸಿಗರು ನಿರಾಸೆಯಿಂದ ಹಿಂತಿರುಗಿದರು….
ಮಂಡ್ಯ ರೈತರಿಗೆ ಸಿಹಿ ಸುದ್ದಿ: ನಾಲೆಗಳಿಗೆ ನೀರು ಹರಿಸಲು ನಿರ್ಧಾರ
July 16, 2019ಮಂಡ್ಯ, ಜು.15(ನಾಗಯ್ಯ)- ರೈತರ ಬೆಳೆಗಳಿಗೆ ಕೆಆರ್‍ಎಸ್ ಜಲಾಶಯದಿಂದ ನೀರು ಹರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಂಗಳವಾರದಿಂದ (ಜು.16) 10 ದಿನಗಳ ಕಾಲ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಸೋಮವಾರ ಸಂಜೆ ನಡೆದ ತುರ್ತು ಸಭೆಯಲ್ಲಿ ಕಾವೇರಿ ಅಚ್ಚು ಕಟ್ಟು ವ್ಯಾಪ್ತಿಯ ಸಚಿವರು, ಶಾಸಕರು ಹಾಗೂ ಕಾವೇರಿ ಉಸ್ತುವಾರಿ ಸಮಿತಿ ಸದಸ್ಯರು ಬೆಳೆಗಳ ರಕ್ಷಣೆ ಹಾಗೂ ಕುಡಿಯಲು ನೀರು ಬಿಡಲು ತೀರ್ಮಾನ ತೆಗೆದುಕೊಂಡಿದ್ದಾರೆ. ಇದರಿಂದ ರೈತರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಂತಾಗಿದೆ. ಐಸಿಸಿ ಸಭೆಯ ನಿರ್ಣಯದ ಪ್ರಕಾರ ನಾಳೆಯಿಂದ…
ಮಳೆ ಬಂದರೆ ಮಾತ್ರ ತಮಿಳುನಾಡಿಗೆ ನೀರು ಬಿಡಿ
June 26, 2019ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ಸದ್ಯ, ಕರ್ನಾಟಕಕ್ಕೆ ನಿರಾಳ ನವದೆಹಲಿ: ಕಾವೇರಿ ನೀರಿನ ವಿವಾದದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ವಾದವನ್ನು ಪುರಸ್ಕರಿಸದೇ ಮಳೆ ಬಂದರೆ ತಮಿಳುನಾಡಿಗೆ ನೀರು ಹರಿಸಿ ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚನೆ ನೀಡಿದ್ದು, ಇದರಿಂದ ರಾಜ್ಯ ಸರ್ಕಾರ ತುಸು ನಿರಾಳವಾಗಿದೆ. ಸೋಮವಾರ ನವದೆಹಲಿಯಲ್ಲಿ ನಡೆದಿದ್ದ ಕಾವೇರಿ ನೀರು ನಿರ್ವಹಣಾ ಸಭೆಯಲ್ಲಿ, ಕರ್ನಾಟಕ ಜೂನ್ ತಿಂಗಳಲ್ಲಿ ತಮಿಳುನಾಡಿಗೆ ಬಿಡಬೇಕಾಗಿದ್ದ ನೀರನ್ನು ಯಾಕೆ ಬಿಟ್ಟಿಲ್ಲ ಎಂದು ನೀರು ನಿರ್ವಹಣಾ ಮಂಡಳಿ ಪ್ರಶ್ನಿಸಿತ್ತು….
ತಳ ಮಟ್ಟಕ್ಕೆ ಕುಸಿಯುತ್ತಿದೆ ಕೆಆರ್‍ಎಸ್, ಹಾರಂಗಿ ನೀರಿನ ಮಟ್ಟ
June 24, 2019ಮೈಸೂರು: ಕಾವೇರಿ ಕಣಿವೆಯಲ್ಲಿ ಮಳೆ ಕೊರತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕೆಆರ್‍ಎಸ್ ಹಾಗೂ ಹಾರಂಗಿ ಜಲಾಶಯಗಳ ನೀರಿನ ಪ್ರಮಾಣ ತಳಮಟ್ಟ(ಡೆಡ್ ಸ್ಟೋರೇಜ್)ಕ್ಕೆ ಕುಸಿಯುತ್ತಿದ್ದು, ಮೈಸೂರು, ಬೆಂಗಳೂರು ಹಾಗೂ ಇನ್ನಿತರ ಪಟ್ಟಣಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳಲಿರುವ ಆತಂಕ ಎದುರಾಗಿದೆ. ಈ ಬಾರಿ ಮುಂಗಾರು ವಿಫಲವಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಇದೀಗ ಕೃಷಿ ಚಟುವಟಿಕೆಗೆ ಮಾತ್ರವಲ್ಲದೆ ಕುಡಿಯುವ ನೀರಿನ ಸರಬ ರಾಜು ಮಾಡುವುದಕ್ಕೂ ಸಾಧ್ಯವಾಗದಂತಹ ದುಸ್ಥಿತಿ ಎದುರಾಗುವ ಆತಂಕ ನಿರ್ಮಾಣವಾಗಿದೆ. ಸಾಮಾನ್ಯ ವಾಗಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ…