Tag: KRS

ಕೆಆರ್‍ಎಸ್‍ನಲ್ಲಿ ಜನಾಂದೋಲನಕ್ಕೆ ಚಾಲನೆ
ಮೈಸೂರು

ಕೆಆರ್‍ಎಸ್‍ನಲ್ಲಿ ಜನಾಂದೋಲನಕ್ಕೆ ಚಾಲನೆ

December 18, 2018

ಮಂಡ್ಯ: ಡಿಸ್ನಿಲ್ಯಾಂಡ್, ಬೃಹತ್ ಕಾವೇರಿ ಪ್ರತಿಮೆ ನಿರ್ಮಾಣದಿಂದ ಕೆಆರ್‍ಎಸ್‍ಗೆ ಅಪಾಯವಿದೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ತಿಳಿಸಿದರು. ಕಾವೇರಿ-ಕೆಆರ್‍ಎಸ್ ಉಳಿವಿಗಾಗಿ ಜನಾಂದೋಲನ ಸಮಿತಿ, ರೈತಸಂಘ, ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಳ್ಳ ಲಾಗಿದ್ದ ‘ಅಕ್ರಮ ಗಣಿಗಾರಿಕೆ ನಿಲ್ಲಿಸಿ ಕೆಆರ್‍ಎಸ್ ಉಳಿಸಿ’ ಜನಾಂ ದೋಲನಕ್ಕೆ ಸೋಮವಾರ ಕೆಆರ್‍ಎಸ್‍ನ ನಾರ್ಥ್‍ಬ್ಯಾಂಕ್ ಬಳಿ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದ ರೈತರು ಸಾಲದ ಸುಳಿಗೆ ಸಿಲುಕಿ ನಲುಗಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳ ಬರದಿಂದ ತತ್ತರಿಸಿದ್ದಾರೆ. ಮತ್ತೊಂದೆಡೆ ರಸ್ತೆಗಳು ಸರಿ ಇಲ್ಲದೇ ನಾಲೆ,…

ಡಿಸ್ನಿಲ್ಯಾಂಡ್ ಮಾದರಿ ಕೆಆರ್‌ಎಸ್‌  ಅಭಿವೃದ್ಧಿ ಯೋಜನೆಗೆ ತಿಂಗಳಲ್ಲಿ ಟೆಂಡರ್
ಮೈಸೂರು

ಡಿಸ್ನಿಲ್ಯಾಂಡ್ ಮಾದರಿ ಕೆಆರ್‌ಎಸ್‌ ಅಭಿವೃದ್ಧಿ ಯೋಜನೆಗೆ ತಿಂಗಳಲ್ಲಿ ಟೆಂಡರ್

December 9, 2018

ಮೈಸೂರು: ಸಮ್ಮಿಶ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಕೆಆರ್‌ಎಸ್‌ ಅನ್ನು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ತಿಂಗಳಲ್ಲಿ ಜಾಗತಿಕ ಟೆಂಡರ್(ಗ್ಲೋಬಲ್ ಟೆಂಡರ್) ಕರೆಯಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಘೋಷಿಸಿದ್ದಾರೆ. ಕೃಷ್ಣರಾಜಸಾಗರ (ಕೆಆರ್‌ಎಸ್‌)ಕ್ಕೆ ಭೇಟಿ ನೀಡಿ ಉದ್ದೇಶಿತ ಯೋಜನೆ ಸಂಬಂಧ ಬೃಂದಾವನ, ನಾರ್ತ್‍ಬ್ಯಾಂಕ್ ಮತ್ತು ವೇಣು ಗೋಪಾಲಸ್ವಾಮಿ ದೇವಸ್ಥಾನಕ್ಕೆ ಪ್ರವಾ ಸೋದ್ಯಮ ಸಚಿವ ಸಾ.ರಾ.ಮಹೇಶ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು, ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ಸಂಸದ ಎಲ್.ಆರ್.ಶಿವರಾಮೇ ಗೌಡ ಹಾಗೂ ಅಧಿಕಾರಿಗಳೊಂದಿಗೆ ಸ್ಥಳ…

ಕಾವೇರಿ, ಕೆಆರ್‍ಎಸ್ ಉಳಿವಿಗಾಗಿ ಜನಾಂದೋಲನ ಸಮಿತಿ ರಚನೆ
ಮೈಸೂರು

ಕಾವೇರಿ, ಕೆಆರ್‍ಎಸ್ ಉಳಿವಿಗಾಗಿ ಜನಾಂದೋಲನ ಸಮಿತಿ ರಚನೆ

December 9, 2018

ಮೈಸೂರು: ರಾಜ್ಯ ಸರ್ಕಾರ ಕೆಆರ್‍ಎಸ್ ಉದ್ಯಾನವನವನ್ನು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಚಿಂತಿಸುತ್ತಿದ್ದರೆ, ಮೈಸೂರಿನಲ್ಲಿ ವಿವಿಧ ಸಂಘಟನೆಗಳ ಮುಖಂಡರು ಸಭೆ ನಡೆಸಿ ಅಣೆಕಟ್ಟೆಯ ಸಮೀ ಪದ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಸೇರಿದಂತೆ ಅಣೆಕಟ್ಟೆಯ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಶಾಶ್ವತ ವಾಗಿ ನಿಷೇಧಿಸುವುದು, ಡಿಸ್ನಿಲ್ಯಾಂಡ್ ಮಾದರಿಯ ಅಭಿವೃದ್ಧಿ ಹಾಗೂ ಕಾವೇರಿ ಮಾತೆಯ ಪ್ರತಿಮೆ ನಿರ್ಮಾಣ ವಿರೋಧಿಸು ವುದು ಸೇರಿದಂತೆ ಆರು ನಿರ್ಣಯಗಳನ್ನು ಕೈಗೊಂಡು ಸರ್ಕಾ ರದ ವಿರುದ್ಧ ಹೋರಾಟ ರೂಪಿಸಲು ವೇದಿಕೆ ಅಣಿಗೊಳಿಸಿದರು. ಮೈಸೂರು-ಹುಣಸೂರು ಮುಖ್ಯ…

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ಶತಃಸಿದ್ಧ: ಸಿಎಂ ಕುಮಾರಸ್ವಾಮಿ
ಮಂಡ್ಯ, ಮೈಸೂರು

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ಶತಃಸಿದ್ಧ: ಸಿಎಂ ಕುಮಾರಸ್ವಾಮಿ

November 24, 2018

ಮಂಡ್ಯ: ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ನಿರ್ಮಾಣ ಯೋಜನೆ ಕೈ ಬಿಡುವ ಪ್ರಶ್ನೆಯೇ ಇಲ್ಲ. ಕಾವೇರಿ ಮಾತೆ ಪ್ರತಿಮೆ ನಿರ್ಮಾಣ ಮಾತ್ರವಲ್ಲ, ವಿಶ್ವಮಟ್ಟದ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತಾಲೂಕಿನ ದುದ್ದ ಗ್ರಾಮದಲ್ಲಿಂದು ಸಣ್ಣ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 718 ಕೋಟಿ ರೂ. ವೆಚ್ಚದಲ್ಲಿ 54 ಕೆರೆಗಳಿಗೆ ನೀರು ತುಂಬಿಸುವ ಯೋಜನೆ, 47 ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕೆಆರ್‌ಎಸ್‌ನಲ್ಲಿ ಉದ್ದೇಶಿತ ಡಿಸ್ನಿಲ್ಯಾಂಡ್…

ಕೆಆರ್‍ಎಸ್‍ನಲ್ಲಿ ಡಿಸ್ನಿಲ್ಯಾಂಡ್ ಮಾದರಿ ನಿರ್ಮಾಣಕ್ಕೆ ವಿರೋಧ
ಮೈಸೂರು

ಕೆಆರ್‍ಎಸ್‍ನಲ್ಲಿ ಡಿಸ್ನಿಲ್ಯಾಂಡ್ ಮಾದರಿ ನಿರ್ಮಾಣಕ್ಕೆ ವಿರೋಧ

November 22, 2018

ಮೈಸೂರು:  ಕೆಆರ್‍ಎಸ್ ಅಣೆಕಟ್ಟೆಯ ಹಿತದೃಷ್ಟಿಯಿಂದ ಇಲ್ಲಿ ನಿರ್ಮಿ ಸಲು ಉದ್ದೇಶಿಸಿರುವ ಡಿಸ್ನಿಲ್ಯಾಂಡ್ ಹಾಗೂ ಬೃಹತ್ ಕಾವೇರಿ ಮಾತೆ ಪ್ರತಿಮೆ ಸ್ಥಾಪನೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಕಾಡಾ ಕಚೇರಿ ಎದುರು ಜಮಾ ಯಿಸಿದ ಪ್ರತಿಭಟನಾಕಾರರು, ಕೆಆರ್‍ಎಸ್ ಅಣೆಕಟ್ಟೆಯ ಬಳಿ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿ ಹಾಗೂ 125 ಅಡಿಯ ಬೃಹತ್ ಕಾವೇರಿ ಮಾತೆ ಪ್ರತಿಮೆ ನಿರ್ಮಾಣ ಮಾಡುವ ರಾಜ್ಯ ಸರ್ಕಾರದ ಉದ್ದೇಶವು ಸದುದ್ದೇಶದಿಂದ ಕೂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೆಆರ್‍ಎಸ್…

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ಯೋಜನೆಗೆ  ಹೋಟೆಲ್ ಮಾಲೀಕರ ಸಂಘ ಸ್ವಾಗತ
ಮೈಸೂರು

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ಯೋಜನೆಗೆ  ಹೋಟೆಲ್ ಮಾಲೀಕರ ಸಂಘ ಸ್ವಾಗತ

November 20, 2018

ಮೈಸೂರು: ಕೆಆರ್‌ಎಸ್‌ ಉದ್ಯಾನ ವನವನ್ನು ಅಮೆರಿಕದ ಪ್ರವಾಸಿ ತಾಣವಾದ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿಪಡಿಸುವ 1200 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಯನ್ನು ಹೋಟೆಲ್ ಮಾಲೀಕರ ಸಂಘ ಸ್ವಾಗತಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ಈ ಯೋಜನೆ ಅನುಷ್ಠಾನದಿಂದ ಮೈಸೂರು ಹಾಗೂ ಸುತ್ತಮುತ್ತಲ ಜನತೆಗೆ ಸಾಕಷ್ಟು ಅನುಕೂಲ ಆಗಲಿದೆ. ಉದ್ಯೋಗ ಸೃಷ್ಟಿಯಾಗುವ ಜೊತೆಗೆ ರೈತರ ಭೂಮಿಗೆ ಉತ್ತಮ ಬೆಲೆ ದೊರೆಯಲಿದೆ. ಇದರಿಂದ ಮೈಸೂರು ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದಾಯ ಹರಿದು ಬರಲಿದೆ…

ಕೆಆರ್‌ಎಸ್‌ ಉದ್ಯಾನವನ ಡಿಸ್ನಿಲ್ಯಾಂಡ್  ಮಾದರಿ ಅಭಿವೃದ್ಧಿಗೆ ಸರ್ಕಾರ ನಿರ್ಧಾರ
ಮೈಸೂರು

ಕೆಆರ್‌ಎಸ್‌ ಉದ್ಯಾನವನ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿಗೆ ಸರ್ಕಾರ ನಿರ್ಧಾರ

November 15, 2018

ಬೆಂಗಳೂರು: ವಿಶ್ವ ವಿಖ್ಯಾತ ಕೆಆರ್‌ಎಸ್‌ ಉದ್ಯಾನವನವನ್ನು ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಯೋಜನೆ ಸಿದ್ಧಪಡಿಸಿದೆ. 125 ಅಡಿ ಎತ್ತರದ ಕಾವೇರಿ ಮಾತೆ ಪ್ರತಿಮೆ ಒಳಗೊಂಡ 360 ಅಡಿ ಎತ್ತರದ ಮ್ಯೂಸಿಯಂ ಸಮುಚ್ಛಯ, ಗೋಪುರ ಯುಕ್ತ ಗಾಜಿನ ಮನೆ, ವೀಕ್ಷಣೆ ಗೋಪುರ, ಬ್ಯಾಂಡ್ ಸ್ಟ್ಯಾಂಡ್, ಒಳಾಂಗಣ ಕ್ರೀಡಾಂಗಣ ಮತ್ತಿತರ ಐತಿಹ್ಯ ಸಾರುವ ಕಟ್ಟಡಗಳನ್ನು ಈ ಡಿಸ್ನಿಲ್ಯಾಂಡ್ ಮಾದರಿ ಹೊಂದಿರಲಿದೆ. ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವ ಕುಮಾರ್ ನೇತೃತ್ವದಲ್ಲಿ ಬುಧವಾರ ನಡೆದ ಉನ್ನತ ಮಟ್ಟದ ಅಧಿಕಾರಿಗಳ…

ಸಿಎಂ ಆರ್ಥಿಕ ಸಲಹೆಗಾರರಿಂದ ಕೆಆರ್‍ಎಸ್ ಉದ್ಯಾನವನ ಪರಿಶೀಲನೆ
ಮೈಸೂರು

ಸಿಎಂ ಆರ್ಥಿಕ ಸಲಹೆಗಾರರಿಂದ ಕೆಆರ್‍ಎಸ್ ಉದ್ಯಾನವನ ಪರಿಶೀಲನೆ

November 15, 2018

ಮೈಸೂರು: ಡಿಸ್ನಿಲ್ಯಾಂಡ್ ಯೋಜನೆ ಅನುಷ್ಠಾನ ಸಂಬಂಧ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಾಲಸುಬ್ರಹ್ಮಣ್ಯ, ಇತ್ತೀಚೆಗೆ ಕೃಷ್ಣರಾಜ ಸಾಗರ (ಕೆಆರ್‍ಎಸ್)ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರ್ಕಾರವು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆಆರ್‍ಎಸ್ ಉದ್ಯಾನವನ್ನು ಅಭಿವೃದ್ಧಿಪಡಿಸುವುದಾಗಿ ಘೋಷಣೆ ಮಾಡಿದ್ದು, ಕ್ರಿಯಾಯೋಜನೆ, ನಕ್ಷೆ, ಸಮಗ್ರ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಬಾಲಸುಬ್ರಹ್ಮಣ್ಯ ಅವರು ನವೆಂಬರ್ 12ರಂದು ಕೆಆರ್‍ಎಸ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೆ ಕಾವೇರಿ ನೀರಾವರಿ ನಿಗಮ, ಪ್ರವಾಸೋದ್ಯಮ ಇಲಾಖೆ, ತೋಟಗಾರಿಕೆ ಇಲಾಖೆ, ಕರ್ನಾಟಕ…

ಮೈಸೂರಿಂದ ರಾಜಧಾನಿಗೆ ಪಾದಯಾತ್ರೆ
ಮೈಸೂರು

ಮೈಸೂರಿಂದ ರಾಜಧಾನಿಗೆ ಪಾದಯಾತ್ರೆ

November 10, 2018

ಮೈಸೂರು: ಕೆಆರ್‍ಎಸ್ ಅಣೆಕಟ್ಟೆಯ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಿ ಅಣೆಕಟ್ಟೆ ಯನ್ನು ರಕ್ಷಿಸುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯ ಕರ್ತರು ಶುಕ್ರವಾರ ಮೈಸೂರಿನಿಂದ ಬೆಂಗ ಳೂರಿಗೆ ಪಾದಯಾತ್ರೆ ಆರಂಭಿಸಿದರು. ಮೈಸೂರು ಅರಮನೆ ಉತ್ತರ ದ್ವಾರದಲ್ಲಿ ರುವ ಕೋಟೆ ಆಂಜನೇಯಸ್ವಾಮಿ ದೇವಾ ಲಯದ ಮುಂಭಾಗದಿಂದ ತಲೆಯ ಮೇಲೆ ಕಲ್ಲನ್ನು ಎತ್ತಿಕೊಂಡು ಪಾದಯಾತ್ರೆ ಆರಂಭಿಸಿದ ಕಸ್ತೂರಿ ಕರ್ನಾಟಕ ಜನ ಪರ ವೇದಿಕೆಯ ಕಾರ್ಯಕರ್ತರು ದೊಡ್ಡ ಗಡಿಯಾರ ವೃತ್ತ, ಮಹಾತ್ಮ ಗಾಂಧಿ ವೃತ್ತ, ಸಯ್ಯಾಜಿರಾವ್ ರಸ್ತೆಯ ಮೂಲಕ…

6 ದಿನದಲ್ಲಿ ಕೆಆರ್‌ಎಸ್‌ಗೆ 2 ಲಕ್ಷ ಪ್ರವಾಸಿಗರ ಭೇಟಿ
ಮೈಸೂರು

6 ದಿನದಲ್ಲಿ ಕೆಆರ್‌ಎಸ್‌ಗೆ 2 ಲಕ್ಷ ಪ್ರವಾಸಿಗರ ಭೇಟಿ

October 23, 2018

ಮೈಸೂರು:  3ಡಿ ಮ್ಯಾಪಿಂಗ್ ಮೂಲಕ ವಿದ್ಯುದ್ದೀಪಾಲಂಕಾರ ಮಾಡಿರುವುದರಿಂದ ಆಕರ್ಷಕವಾಗಿ ಕಂಗೊಳಿಸುತ್ತಿರುವ ಕೃಷ್ಣರಾಜಸಾಗರ (ಕೆಆರ್‌ಎಸ್‌) ಬೃಂದಾವನಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಕಳೆದ 6 ದಿನಗಳಲ್ಲಿ 2 ಲಕ್ಷ ಮಂದಿ ಕೆಆರ್‌ಎಸ್‌ಗೆ ಭೇಟಿ ನೀಡಿದ್ದಾರೆ ಎಂದು ಕಾವೇರಿ ನೀರಾವರಿ ನಿಗಮ (ಅಓಓ)ದ ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಟೋಬರ್ 10 ರಿಂದ 19ರವರೆಗೆ ಮೈಸೂರಲ್ಲಿ ದಸರಾ ಮಹೋತ್ಸವ ಕಾರ್ಯಕ್ರಮಗಳು ಇದ್ಧ ಕಾರಣ ಕೆಆರ್‌ಎಸ್‌ ಜಲಾಶಯಕ್ಕೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆಯಲ್ಲೂ ಹೆಚ್ಚಳ ಕಂಡು ಬಂದಿದೆ ಎಂದು ತಿಳಿಸಿದ್ದಾರೆ. ವಿದ್ಯುದೀಪಾಲಂಕಾರ, 3 ಡಿ ಮ್ಯಾಪಿಂಗ್…

1 2 3 4 5 7
Translate »