ಮೈಸೂರು: ರಿಯಾಯಿತಿ ದರದಲ್ಲಿ ರೇಷ್ಮೆ ಸೀರೆ ಮಾರಾಟ ಅವೈಜ್ಞಾನಿಕವಾಗಿದ್ದು, ರೇಷ್ಮೆ ಸಚಿವ ಸಾ.ರಾ.ಮಹೇಶ್ ಇಂತಹ ಪ್ರಸ್ತಾಪದಿಂದ ಹಿಂದೆ ಸರಿಯಬೇಕೆಂದು ಆಗ್ರಹಿಸಿ ಕರ್ನಾಟಕ ರೇಷ್ಮೆ ಉದ್ಯಮ ನಿಗಮದ (ಕೆಎಸ್‍ಐಸಿ) ಮೈಸೂರು ಸಿಲ್ಕ್ ಫ್ಯಾಕ್ಟರಿ ನೌಕರರು ಗುರುವಾರ ಪ್ರತಿಭಟನೆ ನಡೆಸಿದರು. ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿರುವ ಮೈಸೂರು ಸಿಲ್ಕ್ ಫ್ಯಾಕ್ಟರಿ ಆವರಣದಲ್ಲಿ ಇಂದು ಮಧ್ಯಾಹ್ನ ಊಟದ ವಿರಾಮದ ಅವಧಿಯಲ್ಲಿ ಪ್ರತಿಭಟನೆ ನಡೆಸಿದ ನೌಕರರು, ರಿಯಾಯಿತಿ ದರದಲ್ಲಿ 10,500 ಸಾವಿರ ರೇಷ್ಮೆ ಸೀರೆಯನ್ನು ಕೇವಲ 4,500 ರೂ.ಗಳಿಗೆ ಮಾರಾಟ ಮಾಡುವುದು ಅವೈಜ್ಞಾನಿಕ. ಇದು…