ಮೈಸೂರು: ಮೈಸೂರಿನ ರಾಮಕೃಷ್ಣನಗರದಲ್ಲಿ ಕುಂಡಲಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆಸಲ್ಪಡುತ್ತಿರುವ ಮಹಿಳಾ ವೃದ್ಧಾಶ್ರಮದಲ್ಲಿ ಈಗಾಗಲೇ 21 ಮಂದಿಗೆ ಉಚಿತವಾಗಿ ಆಶ್ರಯ ನೀಡಲಾಗಿದೆ. ಇನ್ನು 15 ಮಂದಿಗೆ ಆಶ್ರಯ ನೀಡಲು ವ್ಯವಸ್ಥೆ ಇದೆ. ನಿರಾಶ್ರಿತ ವೃದ್ಧೆಯರು ಈ ಸೌಲಭ್ಯ ಬಳಸಿಕೊಳ್ಳಬಹುದು ಎಂದು ಟ್ರಸ್ಟ್ ಅಧ್ಯಕ್ಷೆ ಸುಮಿತ್ರಾ ರಮೇಶ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ಮೈಸೂರಿನ ರಾಮಕೃಷ್ಣನಗರದ ಸಾಯಿಬಾಬಾ ದೇವಸ್ಥಾನದ ಸಮೀಪ ಟ್ರಸ್ಟ್‍ನಡಿ ವೃದ್ಧಾಶ್ರಮ ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತ 21…