ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ, ಹಾಲಿ ಶಾಸಕ ಅಡಗೂರು ಹೆಚ್.ವಿಶ್ವನಾಥ್ ನಡುವಿನ ಮುಸುಕಿನ ಗುದ್ದಾಟದಲ್ಲಿ ಕುರುಬ ಸಮಾಜ ಬಡವಾಗುತ್ತಿದೆ ಎಂದು ಹಾಲು ಮತ ಮಹಾಸಭಾದ ರಾಜ್ಯ ಸಂಚಾಲಕ ರಾಜು ಮೌರ್ಯ ದಾವಣಗೆರೆ ಬೇಸರ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ 14 ಕೋಟಿಯಷ್ಟಿರುವ ವಿವಿಧ ಹೆಸರುಗಳಿಂದ ಕರೆಯಲ್ಪಡುತ್ತಿರುವ ಕುರುಬ ಸಮಾಜದ ಜನಸಂಖ್ಯೆ ರಾಜ್ಯದ 30 ಜಿಲ್ಲೆಗಳಲ್ಲೂ ವಿಸ್ತಾರವಾಗಿ ಹರಡಿಕೊಂಡಿದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಅಭಿವೃದ್ದಿ ಹೊಂದಿಲ್ಲ. ಇಂತಹ ಸ್ಥಿತಿಯಲ್ಲಿ ಜೀವಿಸುತ್ತಿರುವ ಸಮುದಾಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು…
ಸಮ್ಮಿಶ್ರ ಸರ್ಕಾರದಲ್ಲಿ ಕುರುಬ ಸಮಾಜಕ್ಕೆ ಅನ್ಯಾಯ: ಖಂಡನೆ
June 18, 2018ಕೆ.ಆರ್.ಪೇಟೆ: ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ದಲ್ಲಿ ಕುರುಬ ಸಮಾಜಕ್ಕೆ ಸಚಿವ ಸ್ಥಾನ ನೀಡದ ಕ್ರಮವನ್ನು ತಾಲೂಕು ಕಾಳಿದಾಸ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಆರ್.ರಂಗಸ್ವಾಮಿ ಖಂಡಿಸಿದರು. ಪಟ್ಟಣದ ಸಾಹುಕಾರ್ ಚನ್ನೇಗೌಡ ಕಾಂಪ್ಲೆಕ್ಸ್‍ನ ಸಂಘದ ಕಚೇರಿಯಲ್ಲಿ ನಡೆದ ಮುಂಖಡರು ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ವೀರಶೈವ-ಲಿಂಗಾ ಯಿತರನ್ನು ಹೊರತು ಪಡಿಸಿದರೆ, ಕುರುಬ ಸಮಾಜ ಜನಸಂಖ್ಯೆಯಲ್ಲಿ 2ನೇ ಸ್ಥಾನ ದಲ್ಲಿದೆ. ಆದರೂ ಕಾಂಗ್ರೆಸ್ ವರಿಷ್ಠರು ಕುರುಬ ಸಮಾಜಕ್ಕೆ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಿದ್ದಾರೆ. ಇದು ಸಮಾಜದ ಅಭಿವೃದ್ಧಿ…
ಮೈತ್ರಿ ಸರ್ಕಾರದಲ್ಲಿ ಕುರುಬ ಸಮುದಾಯಕ್ಕೆ ಸಚಿವ ಸ್ಥಾನ ನೀಡದೇ ಅನ್ಯಾಯ ಆರೋಪ
June 8, 2018ಮೈಸೂರು: ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್‍ನ ಕುರುಬ ಸಮುದಾಯದ ಶಾಸಕರಿಗೆ ಸಚಿವ ಸ್ಥಾನಮಾನ ನೀಡದೇ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಹಾಲುಮತ ಮಹಾಸಭಾದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿಚೌಕದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‍ನಲ್ಲಿರುವ ಕಾರಣಕ್ಕೆ ಶೇ.90ರಷ್ಟು ಕುರುಬ ಸಮುದಾಯದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಆದರೆ ಈಗ ಕಾಂಗ್ರೆಸ್‍ನಲ್ಲಿ ಜನಾಂಗದ ಶಾಸಕರಿಗೆ ಸಚಿವ ಸ್ಥಾನ ನೀಡದೇ ದ್ರೋಹ ಮಾಡಲಾಗಿದೆ ಎಂದು ಆರೋಪಿಸಿದರು. ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಐದು ವರ್ಷಗಳ ಪೂರ್ಣಾವಧಿಗೆ…
ಕುರುಬ ವಧೂ-ವರರ ಸಮಾವೇಶ
June 8, 2018ಮೈಸೂರು: ಬೆಂಗಳೂರಿನ ಕಾಟನ್‍ಪೇಟೆ ತೋಟದೇವರಗಲ್ಲಿಯಲ್ಲಿರುವ ಸ್ಟಾರ್ 69 ಕುರುಬರ ವಿವಾಹ ಕಲ್ಯಾಣ ಕೇಂದ್ರದಲ್ಲಿ ಜೂ.10ರಂದು ವಧು-ವರರ ಸಮಾವೇಶ ಏರ್ಪಡಿಸಲಾಗಿದ್ದು, ಉನ್ನತ ವಿದ್ಯಾರ್ಹತೆ ಹೊಂದಿರುವ, ಉದ್ಯೋಗದಲ್ಲಿರುವವರು ಸೇರಿದಂತೆ ಸಮುದಾಯದ ವಿವಾಹ ಆಕಾಂಕ್ಷಿಗಳು ಪಾಲ್ಗೊಳ್ಳಬಹುದು. ವಿಧವೆ, ವಿಧುರರು ಹಾಗೂ ವಯೋಮಿತಿ ಮೀರಿದವರಿಗೆ ವೈವಾಹಿಕ ಮಾಹಿತಿ ಸಂಪರ್ಕ ನೀಡಲಾಗುವುದು. ಆಸಕ್ತರು ಇತ್ತೀಚಿನ ಭಾವಚಿತ್ರ ಹಾಗೂ ಸ್ವ-ವಿವರಗಳೊಂದಿಗೆ ನೋಂದಣ ಮಾಡಿಕೊಳ್ಳಬಹುದೆಂದು ಕೇಂದ್ರದ ಅಧ್ಯಕ್ಷ ಆರ್.ಗೌರವ್ ಕೆಂಪಯ್ಯ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9880631408, 080-26701410 ಸಂಪರ್ಕಿಸಬಹುದು.