Tag: Legislative Council polls

ವಿಧಾನ ಪರಿಷತ್ ಚುನಾವಣೆಗೆ ಇಂದು ಮತದಾನ
ಹಾಸನ

ವಿಧಾನ ಪರಿಷತ್ ಚುನಾವಣೆಗೆ ಇಂದು ಮತದಾನ

June 8, 2018

ಹಾಸನ: ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪಧವೀದರರ ಕ್ಷೇತ್ರದ, ನೈಋತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾ ವಣೆಯ ಮತದಾನವು ಜೂ. 8ರಂದು ಬೆಳಿಗ್ಗೆ 8 ರಿಂದ ಸಂಜೆ 4ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ 2,801 ಪುರುಷರು ಹಾಗೂ 1,476 ಮಹಿಳೆಯರು ಸೇರಿ ಒಟ್ಟಾರೆ 4,277 ಮತದಾರರು ಮತದಾನವನ್ನು ಮಾಡಲಿದ್ದಾರೆ. ಚುನಾವಣೆಯಲ್ಲಿ ನೈರುತ್ಯ ಪದವೀಧರರ ಕ್ಷೇತ್ರದ, ನೈಋತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವವರು ಮಾತ್ರ ಮತದಾರರಾಗಿರುತ್ತಾರೆ. ದಕ್ಷಿಣ…

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಇಂದು ಮತದಾನ
ಚಾಮರಾಜನಗರ

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಇಂದು ಮತದಾನ

June 8, 2018

ಚಾಮರಾಜನಗರ: ಕರ್ನಾ ಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂನ್ 8ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ನಗರದ ಜೆ.ಎಚ್.ಪಟೇಲ್ ಸಭಾಂಗಣ ದಲ್ಲಿ ಇಂದು ಮಸ್ಟರಿಂಗ್ ಕಾರ್ಯ ನಡೆ ಯಿತು. ಬಳಿಕ ಮತಗಟ್ಟೆಗಳಿಗೆ ಚುನಾವಣೆ ಕಾರ್ಯಕ್ಕೆ ನಿಯೋಜಿತವಾಗಿರುವ ಅಧಿಕಾರಿ ಸಿಬ್ಬಂದಿಯವರು ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆ ಕೇಂದ್ರಗಳಿಗೆ ಅಗತ್ಯ ಪರಿಕರಗಳೊಂದಿಗೆ ತೆರಳಿದರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಸ್ಟರಿಂಗ್ ಸ್ಥಳಕ್ಕೆ ಭೇಟಿ ಕೊಟ್ಟು ಅಲ್ಲಿನ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ದರು. ಜೂನ್ 8ರಂದು…

ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಗೆಲುವಿನ ವಿಶ್ವಾಸ
ಮೈಸೂರು

ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಗೆಲುವಿನ ವಿಶ್ವಾಸ

June 8, 2018

ತಿ.ನರಸೀಪುರ:  ಸಮಾನ ವೇತನ ಸೇರಿದಂತೆ ಶಿಕ್ಷಣ ನೀತಿ ಹಾಗೂ ನಿವೃತ್ತಿ ವೇತನದ ತಾರತಮ್ಯದ ಬಗ್ಗೆ ಹೋರಾಟ ಮಾಡುವ ಬದ್ಧತೆ ಯನ್ನು ಹೊಂದಿರುವ ಬಿಜೆಪಿ ಅಭ್ಯರ್ಥಿ ಬಿ. ನಿರಂಜನಮೂರ್ತಿ ಗೆಲುವು ಖಚಿತವೆಂದು ಹಿರಿಯ ಮುಖಂಡ, ರಾಜ್ಯ ಸಮಿತಿ ಸದಸ್ಯ ಕರುಹಟ್ಟಿ ಮಹಾದೇವಯ್ಯ ಹೇಳಿದರು. ಪಟ್ಟಣದ ವಿದ್ಯೋದಯ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಸಂಜೆ ಶಿಕ್ಷಕ ಮತದಾರರನ್ನು ಭೇಟಿ ಮಾಡಿ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಿ.ನಿರಂಜನಮೂರ್ತಿ ಅವರ ಪರ ಮತಯಾಚಿಸಿ ಮಾತನಾಡಿ, ಕಾಂಗ್ರೆಸ್ ಹಾಗೂ ಜೆಡಿಎಸ್…

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾನಕ್ಕೆ ಸಕಲ ಸಿದ್ಧತೆ
ಮಂಡ್ಯ

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾನಕ್ಕೆ ಸಕಲ ಸಿದ್ಧತೆ

June 8, 2018

ಮಂಡ್ಯ: ಕರ್ನಾಟಕ ವಿಧಾನ ಪರಿ ಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂ.8ರಂದು ಮತದಾನ ನಡೆಯಲಿದ್ದು ಜಿಲ್ಲೆಯಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜೂ.8ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದ್ದು, ಕೆ.ಆರ್. ಪೇಟೆ ತಾಲೂಕಿನ ಮಿನಿ ವಿಧಾನಸೌಧದ ತಾಲೂಕು ಕಚೇರಿ, ನಾಗಮಂಗಲ ತಾಲೂಕಿನ ಮಿನಿ ವಿಧಾನಸೌಧದ ತಾಲೂಕು ಕಚೇರಿ ಕೋರ್ಟ್ ಹಾಲ್ (ಕೊಠಡಿ ಸಂಖ್ಯೆ.104), ಪಾಂಡವಪುರ ತಾಲೂಕಿನ ಮಿನಿ ವಿಧಾನ ಸೌಧದ ತಾಲೂಕು ಕಚೇರಿಯ ಕೋರ್ಟ್ ಹಾಲ್-2 ರಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಮಂಡ್ಯ…

ಪಕ್ಷೇತರ ಅಭ್ಯರ್ಥಿ ಡಾ.ಎಸ್‍ಬಿಎಂ ಪ್ರಸನ್ನ ಮನವಿ : ಶಿಕ್ಷಕರ ಸಮಸ್ಯೆ ಸ್ವತಃ ಅರಿವಿರುವ ನನ್ನನ್ನು ಆಯ್ಕೆ ಮಾಡಿ
ಮೈಸೂರು

ಪಕ್ಷೇತರ ಅಭ್ಯರ್ಥಿ ಡಾ.ಎಸ್‍ಬಿಎಂ ಪ್ರಸನ್ನ ಮನವಿ : ಶಿಕ್ಷಕರ ಸಮಸ್ಯೆ ಸ್ವತಃ ಅರಿವಿರುವ ನನ್ನನ್ನು ಆಯ್ಕೆ ಮಾಡಿ

June 7, 2018

ಮೈಸೂರು: ದಕ್ಷಿಣ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‍ಗೆ ಪಕ್ಷೇತರ ಅಭ್ಯರ್ಥಿಯಾಗಿರುವ ತಮಗೆ ಮೊದಲ ಪ್ರಾಶಸ್ತ್ಯದ ಮತ ನೀಡುವ ಮೂಲಕ ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕರ ಸಮಸ್ಯೆಗಳ ನಿವಾರಣೆಗೆ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಡಾ.ಎಸ್.ಬಿ.ಎಂ.ಪ್ರಸನ್ನ ಇಂದಿಲ್ಲಿ ಶಿಕ್ಷಕ ಮತದಾರರಲ್ಲಿ ಮನವಿ ಮಾಡಿದ್ದಾರೆ. ಕಳೆದ 20 ವರ್ಷಗಳಿಂದ ಅರೆಕಾಲಿಕ ಹಾಗೂ ಅತಿಥಿ ಶಿಕ್ಷಕನಾಗಿ ಸರ್ಕಾರಿ, ಖಾಸಗಿ, ವಿಶ್ವವಿದ್ಯಾನಿಲಯ ಮಟ್ಟದವರೆಗೆ ಶಿಕ್ಷಕನಾಗಿ ದುಡಿದು ಆ ಎಲ್ಲಾ ಕ್ಷೇತ್ರಗಳಲ್ಲಿ ಶಿಕ್ಷಕರು ಅನುಭವಿಸುತ್ತಿರುವ ನೋವನ್ನು ಸ್ವತಃ ನಾನೂ ಅನುಭವಿಸಿದ್ದೇನೆ. ಶಿಕ್ಷಕರ ಮತ್ತು ಶಿಕ್ಷಣ ಕ್ಷೇತ್ರದ…

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಹಣ ಹಂಚುತ್ತಿದ್ದ ಪ್ರಾಂಶುಪಾಲ ಸೇರಿ ಇಬ್ಬರ ಬಂಧನ
ಕೊಡಗು

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಹಣ ಹಂಚುತ್ತಿದ್ದ ಪ್ರಾಂಶುಪಾಲ ಸೇರಿ ಇಬ್ಬರ ಬಂಧನ

June 7, 2018

ಕುಶಾಲನಗರ: ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಪರ ಮತದಾರ ಶಿಕ್ಷಕರಿಗೆ ಹಣ ಹಂಚುತ್ತಿದ್ದ ಇಬ್ಬರು ಜೆಡಿಎಸ್ ಬೆಂಬಲಿತರನ್ನು ಚುನಾವಣಾ ಧಿಗಳು ಬುಧವಾರ ಬಂಧಿಸಿ ರೂ.40 ಸಾವಿರ ನಗದು ವಶ ಪಡಿಸಿಕೊಂಡಿದ್ದಾರೆ. ಸಮೀಪದ ಹೆಬ್ಬಾಲೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎನ್. ಧರ್ಮಪ್ಪ ಹಾಗೂ ಕೂಡಿಗೆ ಗ್ರಾಪಂ ಸದಸ್ಯ ಟಿ.ಕೆ.ವಿಶ್ವನಾಥ್ ಎಂಬುವವರೇ ಹಣ ಹಂಚುತ್ತಿದ್ದವರಾಗಿದ್ದು, ಇವರಿಬ್ಬರ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಮೊಕ ದ್ದಮೆ ದಾಖಲಾಗಿದೆ. ಇವರು ಶಿರಂಗಾಲ ಮತ್ತು ಹೆಬ್ಬಾಲೆ…

ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಬೆಂಬಲಿಸಲು  ಸಂಸದ ಧ್ರುವನಾರಾಯಣ ಮನವಿ
ಮೈಸೂರು

ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಬೆಂಬಲಿಸಲು  ಸಂಸದ ಧ್ರುವನಾರಾಯಣ ಮನವಿ

June 5, 2018

ಮೈಸೂರು: ಈ ಹಿಂದೆ ರಾಜ್ಯದಲ್ಲಿ ಅಸ್ಥಿತ್ವದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಶಿಕ್ಷಕರಿಗೆ ಬಡ್ತಿ ಮೀಸಲಾತಿ ಸೇರಿದಂತೆ ಶಿಕ್ಷಕ ಸಮುದಾಯ ಎದುರಿಸುತ್ತಿದ್ದ ಹಲವಾರು ಸಮಸ್ಯೆಗಳಿಗೆ ಹೋರಾಟ ಮಾಡಿ ಪರಿಹಾರ ಒದಗಿಸಿಕೊಟ್ಟಿರುವ ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್ ಅವರಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರು ಬೆಂಬಲ ನೀಡುವಂತೆ ಸಂಸದ ಆರ್.ಧ್ರುವನಾರಾಯಣ್ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂ.ಲಕ್ಷ್ಮಣ್ ಅವರು ಕಳೆದ ಐದಾರು ವರ್ಷಗಳಿಂದ ಶಿಕ್ಷಕರ ಸಮಸ್ಯೆಗಳ…

ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಪರ ಸಂಸದ ಪ್ರತಾಪ್‍ಸಿಂಹ ಮತ ಯಾಚನೆ
ಮೈಸೂರು

ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಪರ ಸಂಸದ ಪ್ರತಾಪ್‍ಸಿಂಹ ಮತ ಯಾಚನೆ

June 5, 2018

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಪರವಾಗಿ ಸಂಸದ ಪ್ರತಾಪ್‍ಸಿಂಹ ಸೋಮವಾರ ಪ್ರಚಾರ ಕೈಗೊಂಡರು. ಸಂಸದ ಪ್ರತಾಪ್‍ಸಿಂಹ, ಪ್ರಮುಖ ಬಿಜೆಪಿ ಮುಖಂಡರು ಹಾಗೂ ಮೈಸೂರು ನಗರ ಮತ್ತು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರೊಂದಿಗೆ ಮೈಸೂರಿನ ಹಲವು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಶಿಕ್ಷಕರಲ್ಲಿ ಮನವಿ ಮಾಡಿದರು. ಸದ್ವಿದ್ಯಾ ಕಾಲೇಜಿಗೆ ತೆರಳಿ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ, ಸ್ವತಃ…

ವಿಧಾನ ಪರಿಷತ್‍ಗೆ 11 ಮಂದಿ ಅವಿರೋಧ ಆಯ್ಕೆ
ಮೈಸೂರು

ವಿಧಾನ ಪರಿಷತ್‍ಗೆ 11 ಮಂದಿ ಅವಿರೋಧ ಆಯ್ಕೆ

June 5, 2018

ಬೆಂಗಳೂರು: ರಾಜ್ಯದ ವಿಧಾನ ಪರಿಷತ್ ಸದಸ್ಯರಾಗಿ ಮೂರು ಪಕ್ಷಗಳ ಹನ್ನೊಂದು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ 5, ಕಾಂಗ್ರೆಸ್‍ನ 4 ಹಾಗೂ ಜೆಡಿಎಸ್‍ನ ಇಬ್ಬರು ಅಭ್ಯರ್ಥಿಗಳು ಪರಿಷತ್ತಿಗೆ ಪ್ರವೇಶ ಪಡೆದಿದ್ದಾರೆ. ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಹೊರತಾಗಿ ಇನ್ನಾರೂ ನಾಮಪತ್ರ ಸಲ್ಲಿಕೆ ಮಾಡದ ಕಾರಣ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಕುರಿತಂತೆ ಅಧಿಕೃತ ಘೋಷಣೆ ಮಾಡಿದ ಚುನಾವಣಾಧಿಕಾರಿ ಕುಮಾರಸ್ವಾಮಿ, ಮೂರೂ ಪಕ್ಷಗಳ ಅಭ್ಯರ್ಥಿಗಳಿಗೆ ಅವಿರೋಧ ಆಯ್ಕೆ ಪ್ರಮಾಣ ಪತ್ರ ವಿತರಿಸಿದರು. ವಿಧಾನ ಪರಿಷತ್ತಿಗೆ ಆಯ್ಕೆಗೊಂಡ ಮೂರು ಪಕ್ಷದ ಅಭ್ಯರ್ಥಿಗಳಿವರು:…

ಮರಿತಿಬ್ಬೇಗೌಡರ ಪರ ಜಿಪಂ ಸದಸ್ಯ ಸಿ.ಅಶೋಕ್ ಪ್ರಚಾರ
ಮಂಡ್ಯ

ಮರಿತಿಬ್ಬೇಗೌಡರ ಪರ ಜಿಪಂ ಸದಸ್ಯ ಸಿ.ಅಶೋಕ್ ಪ್ರಚಾರ

June 5, 2018

ಪಾಂಡವಪುರ: ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮರಿತಿಬ್ಬೇಗೌಡರ ಪರ ಪಟ್ಟಣದಲ್ಲಿ ಜಿಪಂ ಸದಸ್ಯ ಸಿ.ಅಶೋಕ್ ಪ್ರಚಾರ ನಡೆಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿಜಯ ಕಾಲೇಜು, ಸರ್ಕಾರಿ ಐಟಿಐ ಕಾಲೇಜು ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳಿಗೆ ತೆರಳಿ ಮತಯಾಚನೆ ಮಾಡಿದರು. ನಂತರ ಮಾತನಾಡಿದ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರು ಆಯ್ಕೆ ಬಯಸಿ ಜೆಡಿಎಸ್‍ನಿಂದ ಸ್ಪರ್ಧಿಸಿರುವ ಮರಿತಿ ಬ್ಬೇಗೌಡರಿಗೆ ತಾಲೂಕಿನ ಮತದಾರರು ಮೊದಲ ಪ್ರಾಶಸ್ತ್ಯದ ಮತವನ್ನು ನೀಡ…

1 2 3
Translate »