ಮಡಿಕೇರಿ: ಪ್ರಧಾನಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಮಾಜಿ ಸೈನಿಕರು ಉದ್ಯೋಗ ಪಡೆಯಲು ಮುಂದಾಗ ಬೇಕಿದೆ ಎಂದು ಭಾರತೀಯ ಭೂಸೇನೆಯ ದಕ್ಷಿಣ ವಿಭಾಗದ ಸೇನಾ ಮುಖ್ಯಸ್ಥರಾದ ಲೆ.ಜ.ದಿವಾನ್ ರವೀಂದ್ರನಾಥ್ ಸೋನಿ ಅವರು ತಿಳಿಸಿದ್ದಾರೆ. ಭಾರತೀಯ ಸೇನೆ, ಕರ್ನಾಟಕ ಹಾಗೂ ಕೇರಳ ಸಬ್ ಏರಿಯಾ ವತಿಯಿಂದ ಗೋಣ ಕೊಪ್ಪದ ಕಾವೇರಿ ಕಾಲೇಜಿನಲ್ಲಿ ಭಾನು ವಾರ ನಡೆದ ಮಾಜಿ ಸೈನಿಕರ ರ್ಯಾಲಿ ಯಲ್ಲಿ ಅವರು ಮಾಡಿದರು. ಮಾಜಿ ಸೈನಿಕರು ಮತ್ತು ಅವಲಂಬಿತ ಕುಟುಂಬದವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸಾಕಷ್ಟು ಕಾರ್ಯಕ್ರಮ…