Tag: Local Body Elections

ಆ.31 ಮೈಸೂರು ಮಹಾನಗರ ಪಾಲಿಕೆ ಚುನಾವಣೆ
ಮೈಸೂರು

ಆ.31 ಮೈಸೂರು ಮಹಾನಗರ ಪಾಲಿಕೆ ಚುನಾವಣೆ

August 10, 2018

ಅದರಂತೆ ಆಗಸ್ಟ್ 13ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಆಗಸ್ಟ್ 20 ನಾಮಪತ್ರ ಸಲ್ಲಿಸಲು ಕಡೇ ದಿನವಾಗಿರುತ್ತದೆ. ಆಗಸ್ಟ್ 21 ನಾಮಪತ್ರಗಳ ಪರಿಶೀಲನೆ, 23ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕಡೇ ದಿನವಾಗಿರುತ್ತದೆ. ಆಗಸ್ಟ್ 31ರಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯವಿದ್ದಲ್ಲಿ ಸೆ.2ರಂದು ಮರು ಮತದಾನವಾಗಬೇಕಿದೆ. ಸೆಪ್ಟೆಂಬರ್ 3ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಮಹಾನಗರಗಳ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಸೆಪ್ಟೆಂಬರ್…

ಸ್ಥಳೀಯ ಸಂಸ್ಥೆ ಚುನಾವಣೆ: ಮೈಸೂರು, ಕೊಡಗು ಸೇರಿ ಕೆಲ ಜಿಲ್ಲೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆ: ಮೈಸೂರು, ಕೊಡಗು ಸೇರಿ ಕೆಲ ಜಿಲ್ಲೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ

August 10, 2018

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಚಳ್ಳೆಹಣ್ಣು ತಿನ್ನಿಸಲು ಮೈಸೂರು, ಕೊಡಗು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು, ಕಣಕ್ಕಿಳಿಯಲಿವೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೀಮಿತ ಕ್ಷೇತ್ರಗಳಲ್ಲಿ ಮೈತ್ರಿ ಮಾಡಿಕೊಂಡು ಕಣಕ್ಕಿಳಿ ಯುವ ಮೂಲಕ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್-ಜೆಡಿಎಸ್ ಪ್ರಾಯೋಗಿಕ ಪ್ರಯತ್ನ ನಡೆಸಲಿವೆ. ಮೈಸೂರು, ಕೊಡಗು ಅಲ್ಲದೆ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಸೀಮಿತವಾಗಿ ಈ ಚುನಾವಣಾ ಮೈತ್ರಿ ಆಗಲಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ…

ಸ್ಥಳೀಯ ಸಂಸ್ಥೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ
ಕೊಡಗು

ಸ್ಥಳೀಯ ಸಂಸ್ಥೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

August 10, 2018

ಮಡಿಕೇರಿ: ಸೋಮವಾರಪೇಟೆ, ಕುಶಾಲನಗರ ಮತ್ತು ವಿರಾಜಪೇಟೆ ಪಟ್ಟಣ ಪಂಚಾಯತ್ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಕಾ ಪ್ರಕ್ರಿಯೆಯು ಆಗಸ್ಟ್ 10 ರಿಂದ ಆರಂಭವಾಗಲಿದೆ. ಆಗಸ್ಟ್ 10 ರಂದು ಜಿಲ್ಲಾಧಿಕಾರಿಯವರು ಚುನಾವಣಾ ಅಧಿ ಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ 17 ರಂದು ನಾಮಪತ್ರ ಸಲ್ಲಿ ಸಲು ಕೊನೆ ದಿನವಾಗಿದೆ. ಆಗಸ್ಟ್ 18 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಆಗಸ್ಟ್ 20 ರಂದು ಉಮೇ ದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದೆ, ಆಗಸ್ಟ್ 29…

ನಿಷ್ಪಕ್ಷಪಾತವಾಗಿ ಸ್ಥಳೀಯ ಸಂಸ್ಥೆಗಳ  ಚುನಾವಣೆ ನಡೆಸಲು ಸೂಚನೆ
ಹಾಸನ

ನಿಷ್ಪಕ್ಷಪಾತವಾಗಿ ಸ್ಥಳೀಯ ಸಂಸ್ಥೆಗಳ  ಚುನಾವಣೆ ನಡೆಸಲು ಸೂಚನೆ

August 10, 2018

ಹಾಸನ:  ‘ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಯಾವುದೇ ಗೊಂದಲಗಳಿಲ್ಲದಂತೆ ನಿಷ್ಪಕ್ಷಪಾತವಾಗಿ ನೆರವೇರಿಸಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಗುರುವಾರ ನಗರಸಭೆ, ಪುರಸಭೆ ಚುನಾ ವಣೆಗಳ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಸಭೆ ನಡೆಸಿದ ಅವರು ಪ್ರತಿಯೊಂದು ಚುನಾವಣೆಯೂ ಅತ್ಯಂತ ಪ್ರಮುಖವಾಗಿರುತ್ತದೆ ಯಾವುದೇ ನಿರ್ಲಕ್ಷ್ಯ ತೋರದೆ ಜವಾಬ್ದಾರಿ ಯಿಂದ ನಡೆಸಬೇಕು ಎಂದರು. ನಾಮಪತ್ರಗಳ ಸ್ವೀಕಾರ, ಪರಿಶೀಲನೆ, ಜಾತಿ ಪ್ರಮಾಣ ಪತ್ರಗಳನ್ನು ಗಮನಿಸು ವುದು ಚಿಹ್ನೆಗಳನ್ನು ನೀಡುವ ವಿಚಾರವನ್ನು…

ನಾಳೆಯಿಂದ ಚಾ.ನಗರ, ಕೊಳ್ಳೇಗಾಲ ನಗರಸಭೆಗೆ ನಾಮಪತ್ರ ಸಲ್ಲಿಕೆ ಆರಂಭ
ಚಾಮರಾಜನಗರ

ನಾಳೆಯಿಂದ ಚಾ.ನಗರ, ಕೊಳ್ಳೇಗಾಲ ನಗರಸಭೆಗೆ ನಾಮಪತ್ರ ಸಲ್ಲಿಕೆ ಆರಂಭ

August 9, 2018

ಚಾಮರಾಜನಗರ:  ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರಸಭೆ ಚುನಾವಣೆಗೆ ದಿನಾಂಕ ನಿಗದಿ ಆಗುತ್ತಿದ್ದಂತೆಯೇ ಸ್ಥಳೀಯ ರಾಜಕೀಯ ಚುರುಕುಗೊಂಡಿದೆ. ನಾಮಪತ್ರ ಸಲ್ಲಿಕೆ ಆ.10ರಿಂ ಆರಂಭವಾಗಲಿದ್ದು, ನಂತರ ಸ್ಥಳೀಯ ರಾಜಕೀಯ ಮತ್ತಷ್ಟು ಚುರುಕುಗೊಳ್ಳಲಿದೆ. ರಿಯಲ್ ಎಸ್ಟೇಟ್ ಉದ್ಯಮಿಗಳು, ಗುತ್ತಿಗೆ ದಾರರು ಹಾಗೂ ಲೇವಾದೇವಿದಾರರು ಅಭ್ಯರ್ಥಿಗಳಾಗಲು ಉತ್ಸಾಹ ತೋರಿದ್ದಾರೆ. ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಯಿಂದ ಸ್ಪರ್ಧಿಸಲು ಆಕಾಂಕ್ಷಿಗಳು ಮುಗಿಬಿದ್ದಿದ್ದಾರೆ. ಒಂದೊಂದು ವಾರ್ಡ್‍ಗೆ ಮೂರು-ನಾಲ್ಕು ಮಂದಿ ಆಕಾಂಕ್ಷಿಗಳು ಇರುವುದು ಆ ಪಕ್ಷದ ವರಿಷ್ಠರಿಗೆ ತಲೆ ಬಿಸಿ ತರಿಸಿದೆ. ಕೊಳ್ಳೇಗಾಲದಲ್ಲಿ ಬಿಎಸ್‍ಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿ…

ಹಾಸನ ನಗರಸಭೆಯ 35 ವಾರ್ಡ್‍ನಲ್ಲೂ ಸ್ಪರ್ಧೆ:ಸಚಿವ ಹೆಚ್.ಡಿ.ರೇವಣ್ಣ
ಹಾಸನ

ಹಾಸನ ನಗರಸಭೆಯ 35 ವಾರ್ಡ್‍ನಲ್ಲೂ ಸ್ಪರ್ಧೆ:ಸಚಿವ ಹೆಚ್.ಡಿ.ರೇವಣ್ಣ

August 9, 2018

ಹಾಸನ: ಆಗಸ್ಟ್ 29ರಂದು ನಡೆಯುವ ಹಾಸನ ನಗರಸಭೆ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆಯಾಗದಂತೆ 35 ವಾರ್ಡ್‍ಗಳಲ್ಲಿಯೂ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದರು. ನಗರದ ಎಂ.ಜಿ ರಸ್ತೆಯ ಶ್ರೀ ಆದಿ ಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್‍ನಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸ್ಥಳೀಯ ಜೆಡಿಎಸ್ ನಾಯಕರ ಅಭಿಪ್ರಾಯ ಪಡೆದು ನಗರಸಭೆ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಜಿಲ್ಲೆಯಲ್ಲಿ 2 ನಗರ ಸಭೆ ಸೇರಿದಂತೆ ಪುರಸಭೆಗಳಿಗೆ ಚುನಾವಣೆ ನಡೆಯಲಿದೆ….

ನಗರಸಭೆ ಚುನಾವಣೆ: ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸಲು ಸೂಚನೆ
ಚಾಮರಾಜನಗರ

ನಗರಸಭೆ ಚುನಾವಣೆ: ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸಲು ಸೂಚನೆ

August 8, 2018

ಚಾಮರಾಜನಗರ:  ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆ ಚುನಾವಣೆಗೆ ನಿಯೋಜಿತರಾಗಿ ರುವ ಅಧಿಕಾರಿಗಳು ಅತ್ಯಂತ ಹೊಣೆ ಗಾರಿಕೆಯಿಂದ ಕರ್ತವ್ಯ ನಿರ್ವಹಿಸ ಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಗರಸಭೆ ಚುನಾವಣೆಗೆ ನೇಮಕವಾಗಿರುವ ಚುನಾವಣಾ ಅಧಿಕಾರಿ, ಮಾದರಿ ನೀತಿಸಂಹಿತೆ ಪಾಲನೆ ತಂಡ, ಸೆಕ್ಟರ್ ಅಧಿಕಾರಿಗಳು, ಚುನಾವಣಾ ವೆಚ್ಚ ನಿರ್ವಹಣಾ ತಂಡದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಳ್ಳೇಗಾಲ ಹಾಗೂ ಚಾಮರಾಜನಗರ…

ನಗರಸಭೆಯ ಎಲ್ಲಾ ವಾರ್ಡ್‍ನಲೂ ಬಿಎಸ್‍ಪಿ ಸ್ಪರ್ಧೆ
ಚಾಮರಾಜನಗರ

ನಗರಸಭೆಯ ಎಲ್ಲಾ ವಾರ್ಡ್‍ನಲೂ ಬಿಎಸ್‍ಪಿ ಸ್ಪರ್ಧೆ

August 7, 2018

ಚಾಮರಾಜನಗರ:  ‘ಜಿಲ್ಲೆಯ ಕೊಳ್ಳೇಗಾಲ ಹಾಗೂ ಚಾಮರಾಜನಗರ ನಗರಸಭೆಯ ಎಲ್ಲಾ ವಾರ್ಡ್‍ಗಳಿಗೂ ಬಿಎಸ್‍ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಪಕ್ಷದ ಜಿಲ್ಲಾಧ್ಯಕ್ಷ ಮಾದಪ್ಪ ಹೇಳಿದರು. ನಗರದ ಭಾಗ್ಯಹೋಟಲ್‍ನ ಸಭಾಂಗಣದಲ್ಲಿ ನಗರಸಭೆ ಚುನಾವಣಾ ಸಂಬಂಧ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಬಂಧ ಕೊಳ್ಳೇಗಾಲ, ಚಾಮರಾಜ ನಗರದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಚರ್ಚಿಸಲಾ ಯಿತು. ಪ್ರತಿ ವಾರ್ಡ್‍ಗೂ ಹೆಚ್ಚಿನ ಅಭ್ಯರ್ಥಿಗಳ ಸ್ಪರ್ಧೆ ಮಾಡಲು ಬಂದಿ ದ್ದಾರೆ. ಕಳೆದ ವಿಧಾನಸಭಾ ಚುನಾವಣೆ…

ಸಾಮಾಜಿಕ ನ್ಯಾಯದಡಿ ಅರಸೀಕೆರೆ ನಗರಸಭೆ ಮೀಸಲಾತಿ ಪಟ್ಟಿ
ಹಾಸನ

ಸಾಮಾಜಿಕ ನ್ಯಾಯದಡಿ ಅರಸೀಕೆರೆ ನಗರಸಭೆ ಮೀಸಲಾತಿ ಪಟ್ಟಿ

August 7, 2018

ಅರಸೀಕೆರೆ: ನಗರಸಭೆ ಚುನಾ ವಣೆಯಲ್ಲಿ ನಿಗದಿಯಾಗಿರುವ ಮೀಸ ಲಾತಿಯು ಸರ್ವ ಜನಾಂಗಕ್ಕೂ ಸಾಮಾಜಿಕ ನ್ಯಾಯ ದೊರಕುವ ನಿಟ್ಟಿನಲ್ಲಿ ಸಿದ್ ಪಡಿಸಲಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಅಭಿಪ್ರಾಯಪಟ್ಟರು. ನಗರದ ಮಾರುತಿನಗರದ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಮತ್ತು ಚುನಾಚಣಾ ಆಯೋಗ ಅಧಿಕೃತ ಮೀಸಲಾತಿ ಪಟ್ಟಿಯನ್ನು ಘೋಷಣೆ ಮಾಡಿದ ನಂತರ ನಗರದಲ್ಲಿ ಇಲ್ಲ ಸಲ್ಲದ ಚರ್ಚೆ ಗಳು ನಡೆಯುತ್ತಿವೆ. ಈ ಚರ್ಚೆಗಳು ಅನಾವಶ್ಯಕವಾಗಿದ್ದು, ಚುನಾವಣೆ ಕಡೆ ಮಾತ್ರ ಆಕಾಂಕ್ಷಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಯೋಚಿಸಬೇಕು….

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ

August 6, 2018

ಬೆಂಗಳೂರು: ಮೈತ್ರಿ ಸರ್ಕಾರದ ದೋಸ್ತಿ ರಾಜ್ಯ ಮಟ್ಟದ ಚುನಾವಣೆಗೆ ಮಾತ್ರ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಘೋಷಿಸಿದ್ದು, ಮಿನಿ ಸಮರದ ಮೈತ್ರಿ ವದಂತಿಗೆ ತೆರೆ ಎಳೆದಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ. ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧೆ ಮಾಡಲಿದೆ. ರಾಜ್ಯ ಮಟ್ಟದಲ್ಲಿ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರಿಕೆಯಾಗಲಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್…

1 2 3 4
Translate »