Tag: Lok Sabha Elections 2019

ಕೆ.ಆರ್.ಕ್ಷೇತ್ರದಲ್ಲಿ ಪ್ರತಾಪ್‍ಸಿಂಹಗೆ ಅತೀ ಹೆಚ್ಚು ಮತಗಳ ಮುನ್ನಡೆ
ಮೈಸೂರು

ಕೆ.ಆರ್.ಕ್ಷೇತ್ರದಲ್ಲಿ ಪ್ರತಾಪ್‍ಸಿಂಹಗೆ ಅತೀ ಹೆಚ್ಚು ಮತಗಳ ಮುನ್ನಡೆ

May 26, 2019

ಮೈಸೂರು: ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಪ್ರತಾಪ್‍ಸಿಂಹರಿಗೆ ಅತ್ಯಧಿಕ ಮತಗಳ ಮುನ್ನಡೆ ದೊರೆತಿದೆ ಎಂದು ಶಾಸಕ ಎಸ್.ಎ.ರಾಮದಾಸ್ ಇಂದಿಲ್ಲಿ ತಿಳಿಸಿದ್ದಾರೆ. ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಪ್ರೆಸಿಡೆಂಟ್ ಹೋಟೆಲಿನಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾ ಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 60,000 ಮತಗಳ ಮುನ್ನಡೆ ಸಾಧಿಸಲು ಅವಕಾಶ ನೀಡಿ, ಪ್ರತಾಪ್‍ಸಿಂಹ 2ನೇ ಬಾರಿ ಸಂಸದರಾಗಿ ಆಯ್ಕೆಯಾಗಲು ಕಾರಣಕರ್ತರಾದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. 2018ರ ವಿಧಾನಸಭೆ ಚುನಾವಣೆಯಲ್ಲಿ 1,46,690 ಮತಗಳು ಚಲಾವಣೆಯಾಗಿತ್ತು. 100 ದಿನಗಳಲ್ಲಿ 1 ಲಕ್ಷ ಮತ ಕ್ಷೇತ್ರವಾಗಿಸುವ…

ಗುರುಗಳಿಬ್ಬರ ಪಾದಕ್ಕೆರಗಿ ಆಶೀರ್ವಾದ ಪಡೆದ `ಲೋಕ’ ವಿಜೇತ ನರೇಂದ್ರ ಮೋದಿ
ಮೈಸೂರು

ಗುರುಗಳಿಬ್ಬರ ಪಾದಕ್ಕೆರಗಿ ಆಶೀರ್ವಾದ ಪಡೆದ `ಲೋಕ’ ವಿಜೇತ ನರೇಂದ್ರ ಮೋದಿ

May 25, 2019

ನವದೆಹಲಿ: ಅದೊಂದು ಅಪರೂಪದ ಕ್ಷಣ, ಭಾವೋದ್ವೇಗದ ಸನ್ನಿವೇಶ. ಬಹಳ ದಿನಗಳ ನಂತರ ಗುರು-ಶಿಷ್ಯರ ಭೇಟಿ. ಅಭಿನಂದನೆ, ಆಶೀರ್ವಾದ, ಆಲಿಂಗನ, ಸಿಹಿ ಸಿಹಿ ಮಾತುಗಳ ವಿನಿಮಯದ ಕ್ಷಣ. ಷ್ಟೇ ಅಂತ್ಯಗೊಂಡ 17ನೇ ಲೋಕ ಸಭೆಯ ಚುನಾವಣೆಯಲ್ಲಿ ಅಭೂತ ಪೂರ್ವ ಜಯ ದಾಖಲಿಸಿದ ನರೇಂದ್ರ ದಾಮೋದರದಾಸ್ ಮೋದಿ ಮತ್ತು ಅಮಿತ್ ಶಾ ಜೋಡಿ, ಪಕ್ಷವನ್ನು ತಳ ಮಟ್ಟದಿಂದ ಕಟ್ಟಿ ಸದೃಢವಾಗಿ ಬೆಳೆಸಿದ ಹಿರಿಯರಿಬ್ಬರನ್ನು ಶುಕ್ರವಾರ ಬೆಳಿಗ್ಗೆ ಅವರ ಮನೆಯಂಗಳದಲ್ಲೇ ಭೇಟಿ ಮಾಡಿ ಶುಭಾಶಯ ವಿನಿಮಯ ಮಾಡಿ ಕೊಂಡರು, ಜೊತೆಗೆ ಆಶೀರ್ವಾದ…

ಮೇ 30ಕ್ಕೆ ಪ್ರಧಾನಿಯಾಗಿ ಮೋದಿ ಪದಗ್ರಹಣ
ಮೈಸೂರು

ಮೇ 30ಕ್ಕೆ ಪ್ರಧಾನಿಯಾಗಿ ಮೋದಿ ಪದಗ್ರಹಣ

May 25, 2019

ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಂಡ ಗೆಲುವಿನ ನಂತರ ಎರಡನೇ ಅವಧಿಗೆ ಪ್ರಧಾನಿಯಾಗಿ ಮೋದಿ ಮೇ30 ರಂದು ಪದಗ್ರಹಣ ಮಾಡಲಿದ್ದಾರೆ. 2014ರಂತೆ ಈ ಬಾರಿಯೂ ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ವಿದೇಶದ ನಾಯಕರು ಆಗಮಿಸುವ ಸಾಧ್ಯತೆ ಇದೆ. 2014ಕ್ಕಿಂತ ಈ ಬಾರಿಯ ಪದಗ್ರಹಣ ಕಾರ್ಯಕ್ರಮ ಬೃಹತ್ ಪ್ರಮಾಣದಲ್ಲಿ ನಡೆಯಲಿದೆ. ಕಳೆದ ಬಾರಿ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಮೋದಿ ಪದ ಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನಿಸಲಾಗಿತ್ತು. ಈ ಬಾರಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ…

ಪ್ರಜ್ವಲ್ ರಾಜೀನಾಮೆ ನಿರ್ಧಾರಕ್ಕೆ ದೇವೇಗೌಡರ ತಡೆ
ಮೈಸೂರು

ಪ್ರಜ್ವಲ್ ರಾಜೀನಾಮೆ ನಿರ್ಧಾರಕ್ಕೆ ದೇವೇಗೌಡರ ತಡೆ

May 25, 2019

ಬೆಂಗಳೂರು: ತುಮಕೂರಿನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಸೋಲಿನ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಪ್ರಜ್ವಲ್ ರೇವಣ್ಣ ಅವರ ನಿರ್ಧಾರಕ್ಕೆ ಸ್ವತಃ ದೇವೇಗೌಡರೇ ತಡೆಯೊಡ್ಡಿದ್ದಾರೆ. ಜನಾದೇಶಕ್ಕೆ ತಲೆಬಾಗಬೇಕು. ಆತುರಕ್ಕೆ ಬುದ್ಧಿ ಕೊಟ್ಟರೆ ಕೆಡುಕಾಗುತ್ತದೆ ಎಂದು ಮಾಜಿ ಪ್ರಧಾನಿ ತಮ್ಮ ಮೊಮ್ಮಗ ಪ್ರಜ್ವಲ್ ಗೆ ಬುದ್ಧಿಮಾತು ಹೇಳಿದ್ದಾರೆ. ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್‍ಗೆ ಬಿಟ್ಟುಕೊಟ್ಟಿದ್ದ ಹೆಚ್.ಡಿ. ದೇವೇಗೌಡರು ಆರಂಭದಲ್ಲಿ ಲೋಕಸಭಾ ಚುನಾವಣೆಗೆ ಈ ಬಾರಿ ಸ್ಪರ್ಧಿಸುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದರು. ಕೊನೆಗೆ…

ಮುಖ್ಯಮಂತ್ರಿಯಾಗಿ ಮುಂದುವರೆಯಿರಿ…!
ಮೈಸೂರು

ಮುಖ್ಯಮಂತ್ರಿಯಾಗಿ ಮುಂದುವರೆಯಿರಿ…!

May 25, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ದಯನೀಯ ಸೋಲಿನ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಲು ಮುಂದಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಡೆದಿದ್ದಾರೆ. ಅಷ್ಟೇ ಅಲ್ಲದೆ, ಇಂತಹ ಕಠಿಣ ಸ್ಥಿತಿಯಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ನೀವಲ್ಲದೆ ಬೇರೆ ಯಾರೂ ಸಮರ್ಥವಾಗಿ ನಿರ್ವ ಹಿಸಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟ ಮಾತು ಗಳಲ್ಲಿ ತಿಳಿಸಿದ್ದಾರೆ. ಪುತ್ರ ಹಾಗೂ ತಂದೆಯ ಸೋಲಿ ನಿಂದ ವಿಚಲಿತರಾ ಗಿದ್ದ ಮುಖ್ಯಮಂತ್ರಿ ಯವರು ನಿನ್ನೆ ಸಂಜೆ ರಾಹುಲ್‍ಗಾಂಧಿ ಅವರನ್ನು ಸಂಪರ್ಕಿಸಿ,…

ಪ್ರತಾಪ್ ಸಿಂಹ ಸೇರಿ ರಾಜ್ಯದ 8 ಮಂದಿಗೆ ಸಚಿವ ಸ್ಥಾನ ಸಾಧ್ಯತೆ
ಮೈಸೂರು

ಪ್ರತಾಪ್ ಸಿಂಹ ಸೇರಿ ರಾಜ್ಯದ 8 ಮಂದಿಗೆ ಸಚಿವ ಸ್ಥಾನ ಸಾಧ್ಯತೆ

May 25, 2019

ನವದೆಹಲಿ: ನರೇಂದ್ರ ಮೋದಿಯವರ ಕೇಂದ್ರ ಸಂಪುಟದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಎಂಟು ಮಂದಿ ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. 25 ಸಂಸದರನ್ನು ನೀಡಿರುವ ಕರ್ನಾಟಕಕ್ಕೆ ಹೆಚ್ಚಿನ ಸಚಿವ ಸ್ಥಾನಗಳು ಸಿಗಬಹುದು ಎಂದು ಹೇಳಲಾಗಿದ್ದು, ಒಕ್ಕಲಿಗ ಸಮಾಜದವರಾದ ಯುವ ಸಂಸದ ಪ್ರತಾಪ್ ಸಿಂಹ ಅವರ ಹೆಸರು ಕೇಳಿಬರುತ್ತಿದೆ. ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಹೆಸರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಫಾರಸ್ಸು ಮಾಡುವ ಸಾಧ್ಯತೆ ಇದೆ. ಅಲ್ಲದೆ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ,…

ಸೋಲಿನ ಕಾರಣ ತಿಳಿಯಲು ಶೀಘ್ರವೇ ಆತ್ಮಾವಲೋಕನ ಸಭೆ
ಮೈಸೂರು

ಸೋಲಿನ ಕಾರಣ ತಿಳಿಯಲು ಶೀಘ್ರವೇ ಆತ್ಮಾವಲೋಕನ ಸಭೆ

May 25, 2019

ಮೈತ್ರಿ ಪರಾಜಿತ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪ್ರತಿಕ್ರಿಯೆ ಮೈಸೂರು: ಸೋಲಿನ ಸ್ಪಷ್ಟ ಕಾರಣದ ಬಗ್ಗೆ ತಿಳಿಯಲು ಶೀಘ್ರದಲ್ಲಿ ಆತ್ಮಾವಲೋಕನ ಸಭೆ ಕರೆಯಲಾಗುವುದು ಎಂದು ತಿಳಿಸಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ -ಜೆಡಿಎಸ್ ಮೈತ್ರಿಯ ಪರಾಜಿತ ಅಭ್ಯರ್ಥಿ ಸಿ.ಹೆಚ್.ವಿಜಯ ಶಂಕರ್, ಈಗಲಾದರೂ ಮಾನಸಿಕವಾಗಿ ಒಂದಾಗಿ ರಾಜ್ಯ ಮೈತ್ರಿ ಸರ್ಕಾರ ಉಳಿಸಿಕೊಳ್ಳಬೇಕು ಎಂದಿದ್ದಾರೆ. `ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಅವರು, ಮೇಲ್ನೋ ಟಕ್ಕೆ ಕಾಣುವ ಕಾರಣಗಳನ್ನೇ ಮುಂದಿಟ್ಟುಕೊಂಡು ಹೇಳಿಕೆ ನೀಡುವುದು ಸೂಕ್ತವಲ್ಲ. ಎರಡೂ ಪಕ್ಷಗಳ ಕಾರ್ಯ ಕರ್ತರನ್ನು ಒಟ್ಟಿಗೆ ಸೇರಿಸಿ ಮಾತನಾಡಬೇಕು. ತಕ್ಷಣಕ್ಕೆ…

ಮೋದಿ ಸುನಾಮಿ ಪ್ರತಿಪಕ್ಷಗಳು ಧೂಳೀಪಟ
ಮೈಸೂರು

ಮೋದಿ ಸುನಾಮಿ ಪ್ರತಿಪಕ್ಷಗಳು ಧೂಳೀಪಟ

May 24, 2019

ಮತ್ತೊಮ್ಮೆ ಮೋದಿ ಪ್ರಧಾನಿಯಾಗಿ ಮೇ 29ಕ್ಕೆ ಪ್ರಮಾಣ ವಚನ ಸಾಧ್ಯತೆ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೂ 5 ವರ್ಷಗಳ ಕಾಲ ದೇಶದ ಆಡಳಿತ ನಡೆಸ ಬೇಕೆಂಬ ಜನಾದೇಶ ವನ್ನು ಯಾರೂ ಊಹಿಸಲಾಗದಷ್ಟು ಬೃಹತ್ ಪ್ರಮಾಣದಲ್ಲಿ ಹಾಗೂ ಸ್ಪಟಿಕ ಸದೃಶದಷ್ಟು ಸ್ಪಷ್ಟ ರೀತಿಯಲ್ಲಿ ದೇಶದ ಜನತೆ ನೀಡಿದೆ. ನಿರೀಕ್ಷೆಗೂ ಮೀರಿ ಬಂದಿರುವ ಜನಾದೇಶ ದಿಂದ ಉಲ್ಲಸಿತರಾಗಿರುವ ನರೇಂದ್ರ ದಾಮೋದರದಾಸ್ ಮೋದಿ ಅವರು ಇದೇ ಮೇ 29ರಂದು ಎರಡನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಬರಿಯ…

ಅಪ್ಪ, ಮಕ್ಕಳು ಸೇರಿ ಕಾಂಗ್ರೆಸ್ ಹೆಸ್ರಿಲ್ಲದಂತೆ ಮಾಡ್ತಾರೆ…!
ಮೈಸೂರು

ಅಪ್ಪ, ಮಕ್ಕಳು ಸೇರಿ ಕಾಂಗ್ರೆಸ್ ಹೆಸ್ರಿಲ್ಲದಂತೆ ಮಾಡ್ತಾರೆ…!

May 24, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನು ಬೆನ್ನಲ್ಲೇ ವಿಧಾನಸಭಾ ಕಲಾಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್. ಯಡಿಯೂರಪ್ಪ ಅವರು ಈ ಹಿಂದೆ ಕಲಾಪದಲ್ಲಿ ಹೇಳಿದ ಭವಿಷ್ಯದ ವಿಡಿಯೋ ವೈರಲ್ ಆಗಿದೆ. ಕಲಾಪದ ವೇಳೆ ಮಾತನಾಡಿದ ಬಿಎಸ್‍ವೈ, ಶಿವಕುಮಾರ್ ಅವರೇ ನೀವು ನಾಳೆ ಪಶ್ಚತ್ತಾಪಪಡುವವರಿದ್ದೀರಿ. ಯಾವುದೋ ಮಾಡಬಾರದಂತಹ ಅಕ್ಷಮ್ಯ ಅಪರಾಧ ಮಾಡಿ ಎಲ್ಲರನ್ನು ರಕ್ಷಣೆ ಮಾಡಿ ಈ ನಾಡಿನ ಜನರ ನಂಬಿಕೆ ವಿಶ್ವಾಸಕ್ಕೆ ದ್ರೋಹ ಮಾಡಿದಂತಹ ವ್ಯಕ್ತಿಯನ್ನು ಮುಖ್ಯ ಮಂತ್ರಿಯನ್ನಾಗಿ ಕೂರಿಸಲು ನೀವು ರಕ್ಷಣೆ ಕೊಟ್ಟಿದ್ದೀರಿ. ಇದರ…

ಲೋಕಸಭಾ ಚುನಾವಣಾ ಮತ ಎಣಿಕೆಗೆ ರಾಜ್ಯದಲ್ಲಿ ಸರ್ವ ಸಿದ್ಧತೆ: ನಾಳೆ ಸಂಜೆ 6ರೊಳಗೆ ಫಲಿತಾಂಶ
ಮೈಸೂರು

ಲೋಕಸಭಾ ಚುನಾವಣಾ ಮತ ಎಣಿಕೆಗೆ ರಾಜ್ಯದಲ್ಲಿ ಸರ್ವ ಸಿದ್ಧತೆ: ನಾಳೆ ಸಂಜೆ 6ರೊಳಗೆ ಫಲಿತಾಂಶ

May 22, 2019

ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೇ 23ರಂದು ಮತ ಎಣಿಕೆಗೆ ಸಕಲ ಸಿದ್ಧತೆ ನಡೆಸಲಾಗಿದ್ದು, ವಿವಿಪ್ಯಾಟ್ ರಸೀತಿ ಎಣಿಕೆ ಹಿನ್ನೆಲೆಯಲ್ಲಿ ಫಲಿತಾಂಶ ಪ್ರಕಟಣೆ ಸುಮಾರು ನಾಲ್ಕು ಗಂಟೆಗಳ ಕಾಲ ವಿಳಂಬವಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ರಾಜ್ಯದಲ್ಲಿ ಒಟ್ಟು 28 ಮತ ಎಣಿಕಾ ಕೇಂದ್ರಗಳಿದ್ದು, 28 ಚುನಾವಣಾಧಿಕಾರಿಗಳು, 258 ಸಹಾಯಕ ಚುನಾವಣಾಧಿಕಾರಿಗಳು ಸೇರಿ 11 ಸಾವಿರದಷ್ಟು ಚುನಾವಣಾ ಸಿಬ್ಬಂದಿಯನ್ನು ಮತ ಎಣಿಕೆಗೆ ನಿಯೋಜಿಸಲಾಗಿದೆ. 28…

1 2 3 4 12
Translate »