Tag: Lok Sabha elections

ಲೋಕಸಭಾ ಚುನಾವಣಾ ಕರ್ತವ್ಯದಿಂದ  ನುಣುಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ
ಮೈಸೂರು

ಲೋಕಸಭಾ ಚುನಾವಣಾ ಕರ್ತವ್ಯದಿಂದ ನುಣುಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ

March 25, 2019

ಮೈಸೂರು: ಸಾರ್ವತ್ರಿಕ ಚುನಾವಣೆಯ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಯತ್ನಿಸುವ ಸಿಬ್ಬಂದಿಗಳಿಗೆ ಬಿಸಿ ಮುಟ್ಟಿಸಲು ಚುನಾವಣಾ ಆಯೋಗ ಮುಂದಾಗಿದ್ದು, ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳ ಮಾಹಿತಿ ಪಡೆದು ಟ್ರೈಸ್ ಸಾಫ್ಟ್‍ವೇರ್‍ನಲ್ಲಿ ಸಂಗ್ರಹಿಸಿಟ್ಟಿದೆ. ಆ ಮೂಲಕ ಸುಳ್ಳು ನೆಪ ಹೇಳಿ ಕರ್ತವ್ಯದಿಂದ ಮುಕ್ತಿ ಪಡೆಯಲು ಬರುವವರಿಗೆ ಬಿಸಿ ಮುಟ್ಟಿಸಲು ಸಜ್ಜಾಗಿದೆ. ವಿಧಾನಸಭಾ, ಲೋಕಸಭಾ ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ ಕರ್ತವ್ಯಕ್ಕೆ ನಿಯೋ ಜನೆಗೊಂಡ ಸಿಬ್ಬಂದಿಗಳಲ್ಲಿ ಹಲವರು ವಿವಿಧ ಕಾರಣ ನೀಡಿ ಕರ್ತವ್ಯದಿಂದ ಮುಕ್ತಿ ನೀಡುವಂತೆ ದುಂಬಾಲು ಬೀಳುತ್ತಿದ್ದದ್ದು ಸಾಮಾನ್ಯವಾಗಿತ್ತು. ಮತ…

ಶ್ರೀನಿವಾಸಪ್ರಸಾದ್, ಪ್ರತಾಪ್‍ಸಿಂಹ, ಸದಾನಂದಗೌಡ, ಶೋಭಾ ಕರಂದ್ಲಾಜೆ ಸ್ಪರ್ಧಿಸಲು ಅವಕಾಶ
ಮೈಸೂರು

ಶ್ರೀನಿವಾಸಪ್ರಸಾದ್, ಪ್ರತಾಪ್‍ಸಿಂಹ, ಸದಾನಂದಗೌಡ, ಶೋಭಾ ಕರಂದ್ಲಾಜೆ ಸ್ಪರ್ಧಿಸಲು ಅವಕಾಶ

March 21, 2019

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರವಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಷ್ ಅವರಿಗೆ ಬೆಂಬಲ ನೀಡದಿರಲು ನಿರ್ಧರಿಸಿ ರುವ ರಾಷ್ಟ್ರೀಯ ಬಿಜೆಪಿ ತನ್ನ ಅಭ್ಯರ್ಥಿ ಯನ್ನು ಕಣಕ್ಕಿಳಿಸಲು ನಿರ್ಧರಿಸಿರುವುದಲ್ಲದೆ, ಕರ್ನಾಟಕದ ಹಾಲಿ ಎಲ್ಲಾ ಸಂಸದರಿಗೂ ಮತ್ತೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅಧ್ಯಕ್ಷತೆ ಯಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲೂ ಅಭ್ಯರ್ಥಿ ಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಲ್ಲದೆ, ಬಹುತೇಕ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದೆ. ಅಧಿಕೃತವಾಗಿ ಪಟ್ಟಿ ಹೊರ…

ನೀತಿ ಸಂಹಿತೆ ಉಲ್ಲಂಘನೆ 203 ಪ್ರಕರಣ ದಾಖಲು,  1,06,96,362 ರೂ. ಮೌಲ್ಯದ ಮದ್ಯ ವಶ
ಮೈಸೂರು

ನೀತಿ ಸಂಹಿತೆ ಉಲ್ಲಂಘನೆ 203 ಪ್ರಕರಣ ದಾಖಲು, 1,06,96,362 ರೂ. ಮೌಲ್ಯದ ಮದ್ಯ ವಶ

March 21, 2019

ಮೈಸೂರು: ಮಾರ್ಚ್ 10ರಿಂದ 19ರವರೆಗೆ ಮೈಸೂರು ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ 203 ಪ್ರಕರಣ ಗಳನ್ನು ದಾಖಲಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 33 ಅಬಕಾರಿ ದಾಳಿ ನಡೆಸಲಾಗಿದ್ದು, 151 ಮಂದಿ ಬಂಧಿಸಿ ಸುಮಾರು 1,06,96,362 ರೂ. ಮೌಲ್ಯದ ಮದ್ಯವನ್ನು ವಶಪಡಿಸಿ ಕೊಳ್ಳಲಾಗಿದೆ. 232 ದ್ವಿಚಕ್ರ ವಾಹನ ಗಳು, 2 ಆಟೋಗಳು ಹಾಗೂ 3 ಕಾರು ಗಳು ಸೇರಿ 14,76,000 ರೂ. ಮೌಲ್ಯದ 28 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ….

ಎಲ್ಲಾ ಪಕ್ಷದ ಅಭ್ಯರ್ಥಿಗಳಿಗೂ ಶುಭ ಕೋರಿದ ಮೋದಿ
ಮೈಸೂರು

ಎಲ್ಲಾ ಪಕ್ಷದ ಅಭ್ಯರ್ಥಿಗಳಿಗೂ ಶುಭ ಕೋರಿದ ಮೋದಿ

March 11, 2019

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು 17ನೇ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳಿಗೂ ಶುಭ ಕೋರಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ 9 ಬಾರಿ ಟ್ವೀಟ್ ಮಾಡಿರುವ ಮೋದಿ, ಪ್ರಜಾಪ್ರಭುತ್ವದ ಹಬ್ಬ ಚುನಾವಣೆ ಬಂದಿದೆ. 2019ರ ಲೋಕಸಭಾ ಚುನಾವಣೆ ಯಲ್ಲಿ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನಾನು ಒತ್ತಾಯಿಸುತ್ತೇನೆ. ಈ ಚುನಾವಣೆ ಐತಿಹಾಸಿಕ ಬದಲಾವ ಣೆಗೆ ಸಾಕ್ಷಿಯಾಗಲಿದೆ ಎಂದು ಭಾವಿಸುತ್ತೇನೆ. ಮೊದಲ ಬಾರಿಗೆ ಮತ ಚಲಾಯಿಸುವವರು ದಾಖಲೆ ಪ್ರಮಾಣದಲ್ಲಿ ಮತ…

ಸಾಮಾಜಿಕ ಜಾಲ ತಾಣಗಳ ಮೇಲೆ ಹದ್ದಿನ ಕಣ್ಣು
ಮೈಸೂರು

ಸಾಮಾಜಿಕ ಜಾಲ ತಾಣಗಳ ಮೇಲೆ ಹದ್ದಿನ ಕಣ್ಣು

March 11, 2019

ನವದೆಹಲಿ: ಚುನಾವಣಾ ಆಯೋಗವು ಸಾಮಾಜಿಕ ಜಾಲ ತಾಣಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಚುನಾವಣೆ ಸಂದರ್ಭದಲ್ಲಿ ಟ್ವೀಟರ್, ವಾಟ್ಸಪ್, ಫೇಸ್‍ಬುಕ್, ಇನ್‍ಸ್ಟ್ರಾ ಗ್ರಾಂ ಮುಂತಾದ ಸಾಮಾಜಿಕ ಜಾಲ ತಾಣಗಳಲ್ಲಿ ಅಭ್ಯರ್ಥಿ ಪರ ಪ್ರಚಾರ ಅಥವಾ ಶಾಂತಿ-ಸುವ್ಯವಸ್ಥೆ ಕದಡುವಂತಹ ಪೋಸ್ಟ್‍ಗಳನ್ನು ಹಾಕಿದರೆ, ಶಿಕ್ಷೆ ಕಟ್ಟಿಟ್ಟ ಬುತ್ತಿ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನೀಲ್ ಅರೋರಾ ಅವರು ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತ ನಾಡುತ್ತಾ, ಸಾಮಾಜಿಕ ಜಾಲ ತಾಣದಲ್ಲಿ ಪ್ರಚಾರ ಮಾಡಬೇಕಾದರೂ, ಅಭ್ಯರ್ಥಿ ಗಳು ಕಡ್ಡಾಯವಾಗಿ ಆಯೋಗದ ಅನು ಮತಿ…

ಲೋಕಸಭಾ ಚುನಾವಣೆಗೆ ದೋಸ್ತಿ ಹೊಂದಾಣಿಕೆ ಕಾಂಗ್ರೆಸ್ 18, ಜೆಡಿಎಸ್ 10
ಮೈಸೂರು

ಲೋಕಸಭಾ ಚುನಾವಣೆಗೆ ದೋಸ್ತಿ ಹೊಂದಾಣಿಕೆ ಕಾಂಗ್ರೆಸ್ 18, ಜೆಡಿಎಸ್ 10

February 26, 2019

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಗ್ಗೂಡಿ ಹೋರಾಡಲು ಕಾಂಗ್ರೆಸ್-ಜೆಡಿಎಸ್ ನಿರ್ಧರಿಸಿದ್ದು, ಇಪ್ಪತ್ತೆಂಟು ಕ್ಷೇತ್ರಗಳ ಪೈಕಿ ಕಾಂಗ್ರೆಸ್ 18, ಜೆಡಿಎಸ್ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಉಭಯ ಪಕ್ಷಗಳಿಗೆ ಯಾವ ಯಾವ ಕ್ಷೇತ್ರ ಎಂಬುದನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್‍ಗಾಂಧಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ದೆಹಲಿಯಲ್ಲಿ ಮಾರ್ಚ್ 5 ರಂದು ನಡೆಯಲಿರುವ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿ ಸಲಿದ್ದಾರೆ. ಮೈತ್ರಿ ಮೂಲಕ ಚುನಾವಣೆ ಎದುರಿಸಿದರೆ, ಕರ್ನಾಟಕ ವೊಂದರಲ್ಲೇ 22 ರಿಂದ 23 ಕ್ಷೇತ್ರಗಳನ್ನು ಬುಟ್ಟಿಗೆ ಹಾಕಿಕೊಳ್ಳ ಬಹುದು ಎಂಬ…

ಲೋಕಸಭಾ ಚುನಾವಣೆ ಹಿನ್ನೆಲೆ: ಐಎಎಸ್, ಐಪಿಎಸ್ ಸೇರಿದಂತೆ ಅಧಿಕಾರಿಗಳ ಭಾರೀ ವರ್ಗಾವರ್ಗಿ
ಮೈಸೂರು

ಲೋಕಸಭಾ ಚುನಾವಣೆ ಹಿನ್ನೆಲೆ: ಐಎಎಸ್, ಐಪಿಎಸ್ ಸೇರಿದಂತೆ ಅಧಿಕಾರಿಗಳ ಭಾರೀ ವರ್ಗಾವರ್ಗಿ

February 22, 2019

ಬೆಂಗಳೂರು: ಮುಂಬರುವ ಲೋಕ ಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಐಎಎಸ್, ಐಪಿಎಸ್ ಹಾಗೂ ಕೆಳವರ್ಗದ ಅಧಿಕಾರಿಗಳನ್ನು ವರ್ಗಾವರ್ಗಿ ಮಾಡಿದೆ. ಕೇಂದ್ರ ಚುನಾವಣಾ ಆಯೋಗ ನೀಡಿರುವ ಗಡುವು ಮತ್ತು ಮಾರ್ಗಸೂಚಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಗಿರುವ ಅಧಿಕಾರ ಬಳಸಿಕೊಂಡು, ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ವರ್ಗಾವರ್ಗಿಗೆ ಚಾಲನೆ ನೀಡಿದೆ. ನಿನ್ನೆಯಷ್ಟೇ ಸಚಿವಾಲಯ ಹಾಗೂ ಜಿಲ್ಲಾ ಮಟ್ಟದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾ ವಣೆ ಮಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ತಡರಾತ್ರಿ ಹಿರಿಯ ಐಪಿಎಸ್…

ಲೋಕಸಭಾ ಚುನಾವಣೆ; ಸೆಕ್ಟರ್ ಅಧಿಕಾರಿಗಳಿಗೆ ಕಾರ್ಯಾಗಾರ
ಕೊಡಗು

ಲೋಕಸಭಾ ಚುನಾವಣೆ; ಸೆಕ್ಟರ್ ಅಧಿಕಾರಿಗಳಿಗೆ ಕಾರ್ಯಾಗಾರ

February 19, 2019

ಮಡಿಕೇರಿ: ಲೋಕಸಭಾ ಸಾರ್ವತ್ರಿಕ ಚುನಾವಣಾ ಸಂದರ್ಭದಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಮಹತ್ವವಾಗಿದ್ದು, ಅತ್ಯಂತ ಜಾಗರೂಕತೆಯಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ಸೋಮವಾರ ಚುನಾವಣಾ ಸೆಕ್ಟರ್ ಅಧಿಕಾರಿಗಳಿಗೆ ಎಎಂಎಫ್, ವಲ್ನರಬಲ್ ಪ್ರದೇಶ ಮತ್ತು ಇವಿಎಂಗಳ ಬಳಕೆ ಬಗ್ಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ಸೆಕ್ಟರ್ ಅಧಿಕಾರಿಗಳು ಇವಿಎಂ ಮತಯಂತ್ರಗಳ ಬಳಕೆ ಕುರಿತು ಸಂಪೂರ್ಣ ಜ್ಞಾನ ಹೊಂದಿರಬೇಕು. ಇವಿಎಂಗಳ ಬಳ ಕೆಗೂ ಮುನ್ನ…

ಲೋಕಸಭಾ ಸಮರದತ್ತ ಬಿಜೆಪಿ, ಕಾಂಗ್ರೆಸ್ ಚಿತ್ತ
ಮೈಸೂರು

ಲೋಕಸಭಾ ಸಮರದತ್ತ ಬಿಜೆಪಿ, ಕಾಂಗ್ರೆಸ್ ಚಿತ್ತ

February 19, 2019

ಬೆಂಗಳೂರು: ಆಪರೇಷನ್ ಕಮಲದ ಮೂಲಕ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಕೆಳಗಿಳಿಸುವ ಕಾರ್ಯ ಕೈಬಿಟ್ಟಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿ ಯೂರಪ್ಪ, ಲೋಕಸಭಾ ಚುನಾವಣೆಯತ್ತ ಮುಖ ಮಾಡಿದ್ದಾರೆ. ಮತ್ತೊಂದೆಡೆ ಆಪರೇಷನ್ ಕಮಲ ವಿಫಲಗೊಂಡ ಸಂತಸ ದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರು ಕೇಂದ್ರ ದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ತರಲು ಇಂದು ಇಡೀ ದಿನ ಸಭೆಗಳನ್ನು ನಡೆಸಿದರು. ಏಪ್ರಿಲ್ 2ನೇ ಇಲ್ಲವೇ 3ನೇ ವಾರದಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ ಎಂಬ ಮಾಹಿ ತಿಯ ಹಿನ್ನೆಲೆಯಲ್ಲಿ ಎರಡು ರಾಷ್ಟ್ರೀಯ…

ಏಪ್ರಿಲ್ ಅಂತ್ಯಕ್ಕೆ ಲೋಕಸಭಾ ಚುನಾವಣೆ
ಮೈಸೂರು

ಏಪ್ರಿಲ್ ಅಂತ್ಯಕ್ಕೆ ಲೋಕಸಭಾ ಚುನಾವಣೆ

February 17, 2019

ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ ಮೂರನೇ ವಾರದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಹಿನ್ನೆಲೆಯಲ್ಲಿ ಇದೇ 20ರೊಳಗೆ ರಾಜಕೀಯ ನಿರ್ಧಾರ ಹಾಗೂ ಅಧಿಕಾರಿಗಳ ವರ್ಗಾವರ್ಗಿ ಕಾರ್ಯ ಪೂರ್ಣಗೊಳ್ಳಲಿದೆ. ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು, ಲೋಕ ಸಭಾ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡುವ ಬಗ್ಗೆ ಮಾಹಿತಿ ನೀಡಿರುವುದಲ್ಲದೆ, ಆಯೋಗದ ಮಾರ್ಗಸೂಚಿ ಅನುಸಾರ 20ರೊಳಗೆ ವರ್ಗಾವಣೆ ಮುಗಿಸಿ, 25ಕ್ಕೆ ಪೂರ್ಣ ವರದಿ ನೀಡುವಂತೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ…

1 2
Translate »