ಮೈಸೂರು: ಲವ್ ವಿತೌಟ್ ರೀಸನ್ ಫೌಂಡೇಶನ್ ವತಿಯಿಂದ ಜೂ.29ರಂದು ನಾಚನಹಳ್ಳಿಪಾಳ್ಯದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೀಳುತುಟಿ ಸಮಸ್ಯೆಯ ಮಕ್ಕಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ ಎಂದು ಶಿಬಿರದ ಸಂಚಾಲಕ ಯು.ಧನಂಜಯ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರಿನ ಅಸ್ಟರ್ ಸಿಎಂಐ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಈ ಶಿಬಿರ ಹಮ್ಮಿಕೊಂಡಿದ್ದು, ಅಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಶಿಬಿರ ನಡೆಯಲಿದೆ ಎಂದು…