Tag: Maddur

ಮಂಡ್ಯದಲ್ಲಿ ಲಾಕಪ್ ಡೆತ್
ಮಂಡ್ಯ, ಮೈಸೂರು

ಮಂಡ್ಯದಲ್ಲಿ ಲಾಕಪ್ ಡೆತ್

July 14, 2018

ಮಂಡ್ಯ: ಬೈಕ್ ಕಳ್ಳತನ ಆರೋಪದ ಮೇಲೆ ಬಂಧಿತನಾಗಿದ್ದ ವ್ಯಕ್ತಿ ಅನುಮಾನಾಸ್ಪದ ರೀತಿ ಠಾಣೆ ಯಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಘಟನೆ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೂಲತಃ ಮದ್ದೂರು ತಾಲೂಕಿನ ಬೆಳ್ತೂರು ಗ್ರಾಮದ ನಿವಾಸಿ ಬೆಟ್ಟಯ್ಯ ಎಂಬುವವರ ಪುತ್ರ ಮೂರ್ತಿ(45) ಪೊಲೀಸ್ ಠಾಣೆಯಲ್ಲಿ ಸಾವನ್ನಪ್ಪಿದ ಆರೋಪಿ. ಕಳೆದ ಸೋಮವಾರ ಬೈಕ್ ಕಳ್ಳತನ ಆರೋಪದ ಮೇಲೆ ನಗರದ ಪಶ್ಚಿಮ ಠಾಣೆಯ ಪೊಲೀಸರು ಈತನನ್ನು ಬಂಧಿಸಿ, ಕರೆದುಕೊಂಡು ಬಂದಿದ್ದರು. ಆದರೆ ಇಂದು ಬೆಳಿಗ್ಗೆ ಠಾಣೆಯ ಬಾತ್‍ರೂಂನಲ್ಲೇ ನೇಣು ಬಿಗಿದ…

ಜಿಲ್ಲೆಯ ವಿವಿಧೆಡೆ ಸರಣಿ ಪ್ರತಿಭಟನೆ: ಸಾಲಮನ್ನಾಕ್ಕಾಗಿ ರೈತರು, ಸ್ತ್ರೀಶಕ್ತಿ ಸಂಘದ ಮಹಿಳೆಯರು, ಉಚಿತ ಬಸ್‍ಪಾಸ್‍ಗೆ ವಿದ್ಯಾರ್ಥಿಗಳ ಆಗ್ರಹ
ಮಂಡ್ಯ

ಜಿಲ್ಲೆಯ ವಿವಿಧೆಡೆ ಸರಣಿ ಪ್ರತಿಭಟನೆ: ಸಾಲಮನ್ನಾಕ್ಕಾಗಿ ರೈತರು, ಸ್ತ್ರೀಶಕ್ತಿ ಸಂಘದ ಮಹಿಳೆಯರು, ಉಚಿತ ಬಸ್‍ಪಾಸ್‍ಗೆ ವಿದ್ಯಾರ್ಥಿಗಳ ಆಗ್ರಹ

July 14, 2018

ಮಂಡ್ಯ:  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು, ಸ್ತ್ರೀಶಕ್ತಿ ಸಂಘದ ಕಾರ್ಯಕರ್ತರು, ವಿದ್ಯಾರ್ಥಿಗಳು ಶುಕ್ರವಾರ ಜಿಲ್ಲೆಯ ವಿವಿಧೆಡೆ ಸರಣಿ ಪ್ರತಿಭಟನೆ ನಡೆಸಿದರು. ಮಂಡ್ಯ, ಮದ್ದೂರು, ನಾಗಮಂಗಲ ಸೇರಿದಂತೆ ವಿವಿಧೆಡೆ ರೈತಸಂಘ ಮತ್ತು ಸ್ತ್ರೀಶಕ್ತಿ ಸಂಘದ ಮಹಿಳೆ ಯರು ಸಾಲಮನ್ನಾಕ್ಕೆ, ವಿದ್ಯಾರ್ಥಿಗಳು ಉಚಿತ ಬಸ್‍ಪಾಸ್‍ಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಗ್ಗೆ ವರದಿಯಾಗಿದೆ. ಮಂಡ್ಯ ವರದಿ, ಮೆರವಣಿಗೆ: ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ ಹಾಗೂ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯದ…

ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ರಸ್ತೆ ತಡೆ
ಮಂಡ್ಯ

ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ರಸ್ತೆ ತಡೆ

July 13, 2018

ಮದ್ದೂರು:  ರೈತರ ಎಲ್ಲಾ ಬಗೆಯ ಕೃಷಿ ಸಾಲ ಹಾಗೂ ಸ್ತ್ರೀ ಶಕ್ತಿ ಸಂಘಗಳ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ (ಮೂಲ ಸಂಘಟನೆ)ದ ಕಾರ್ಯಕರ್ತರು ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ತಾಲೂಕಿನ ಶಿವಪುರದಲ್ಲಿ ಹೆದ್ದಾರಿಯಲ್ಲಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ರೈತರ ಹಾಗೂ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಹೇಳಿ ಮಾತು ತಪ್ಪಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿ ಹೆದ್ದಾರಿ ತಡೆದರು….

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪಾರದರ್ಶಕ ಕೆಲಸ
ಮಂಡ್ಯ

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪಾರದರ್ಶಕ ಕೆಲಸ

July 11, 2018

ಮದ್ದೂರು: ಕನ್ನಡ ಸಾಹಿತ್ಯ ಪರಿಷತ್ತು ಪಾರದರ್ಶಕವಾಗಿ ಕೆಲಸ ಮಾಡಿಕೊಂಡು ಬರುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ್ ತಿಳಿಸಿದರು. ಸೋಮನಹಳ್ಳಿಯ ಎಸ್.ಸಿ.ಮಲ್ಲಯ್ಯ ಪದವಿಪೂರ್ವ ಕಾಲೇಜು ಆವರಣದಲ್ಲಿ ಶ್ರೀಮತಿ ತಾಯಮ್ಮ ಮತ್ತು ಶ್ರೀ ಎಸ್.ಸಿ. ಮಲ್ಲಯ್ಯ ರಾಜ್ಯ ಮಟ್ಟದ ಜಾನಪದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತು ಪ್ರತಿಭಾವಂತ ಕನ್ನಡಿಗರನ್ನು ಗುರ್ತಿಸಿ ಅವರ ಕಲೆ ಅನಾವರಣಗೊಳ್ಳಲು ಪ್ರೋತ್ಸಾಹ ನೀಡುವುದು ಮತ್ತು ಪುರಸ್ಕಾರ ನೀಡುವ ಕೆಲಸವನ್ನು ನಿರಂತರವಾಗಿ ಮಾಡಿ ಕೊಂಡು…

ಹೆಚ್‍ಡಿಕೆಯಿಂದ ರೈತರ ಬೇಡಿಕೆ ಈಡೇರಿಕೆ
ಮಂಡ್ಯ

ಹೆಚ್‍ಡಿಕೆಯಿಂದ ರೈತರ ಬೇಡಿಕೆ ಈಡೇರಿಕೆ

July 9, 2018

ಮದ್ದೂರು:  ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲಿದ್ದಾರೆ. ಈ ಬಗ್ಗೆ ಆತಂಕ ಬೇಡ. ಆದರೆ ಕಾಲಾವಕಾಶ ಬೇಕು ಎಂದು ಶಾಸಕ ಸುರೇಶ್‍ಗೌಡ ತಿಳಿಸಿದರು. ತಾಲೂಕಿನ ಕಿರಂಗೂರು ಗ್ರಾಮದಲ್ಲಿ ನಡೆದ ತೋಪಿನ ತಿಮ್ಮಪ್ಪ ದೇವರ ಹರಿಸೇವೆ ಯಲ್ಲಿ ಮಾತನಾಡಿದ ಅವರು, ಸಿಎಂ ಅವರು ಸಿದ್ದರಾಮಯ್ಯರ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುವ ಜೊತೆಗೆ ರೈತರ ಸಾಲ ಮನ್ನಾ ಮಾಡಿ ದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ರೈತರಿಗೆ ಹಾಗೂ ಎಲ್ಲ ಸಮುದಾಯಗಳಿಗೆ ಉಪಯುಕ್ತ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ ಎಂದು…

ಸಂಬಳಕ್ಕಾಗಿ `ಡಿ’ ಗ್ರೂಪ್ ನೌಕರರ ಪ್ರತಿಭಟನೆ
ಮಂಡ್ಯ

ಸಂಬಳಕ್ಕಾಗಿ `ಡಿ’ ಗ್ರೂಪ್ ನೌಕರರ ಪ್ರತಿಭಟನೆ

July 8, 2018

ಮದ್ದೂರು: ಪಟ್ಟಣದ ಕೆ.ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ `ಡಿ’ ಗ್ರೂಪ್ ನೌಕರರಾಗಿ ಕೆಲಸ ನಿರ್ವಹಿಸುತ್ತಿರುವ ನಮಗೆ 11 ತಿಂಗಳಿಂದ ಸಂಬಳ ನೀಡುತ್ತಿಲ್ಲ ಎಂದು ಆರೋಪಿಸಿ ಡಿ ಗ್ರೂಪ್ ನೌಕರರು ಪ್ರತಿಭಟನೆ ಮಾಡಿದರು. ಆಸ್ಪತ್ರೆ ಎದುರು ಜಮಾಯಿಸಿದ ನೌಕರರು ಸಂಬಳ ನೀಡದ ಏಜೆನ್ಸಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಚೇತನ್‍ಕುಮಾರ್ ಮಾತನಾಡಿ, 11 ತಿಂಗಳಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ 23 ನೌಕಕರಿಗೆ ಸಂಬಳ ನೀಡುತ್ತಿಲ್ಲ. ಇದರಿಂದ ನಮ್ಮ ಜೀವನ…

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಮಂಡ್ಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

July 8, 2018

ಮದ್ದೂರು/ ಶ್ರೀರಂಗಪಟ್ಟಣ:  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯ ಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಶನಿವಾರ ಮದ್ದೂರು ಮತ್ತು ಶ್ರೀರಂಗಪಟ್ಟಣದಲ್ಲಿ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದರು. ಮದ್ದೂರು: ಪಟ್ಟಣದ ಪ್ರವಾಸಿ ಮಂದಿರ ದಿಂದ ಮೆರವಣಿಗೆಯಲ್ಲಿ ಆಗಮಿಸಿದ ಅಂಗನವಾಡಿ ನೌಕರರು, ದಾರಿಯುದ್ದಕ್ಕೂ ಸರ್ಕಾರದ ಅವೈಜ್ಞಾನಿಕ ತೀರ್ಮಾನಗಳ ವಿರುದ್ಧ ಘೋಷಣೆ ಕೂಗಿದರು. ಬಳಿಕ ತಾಲೂಕು ಕಚೇರಿಗೆ ಆಗಮಿಸಿ ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಸಂಘದ ಅಧ್ಯಕ್ಷೆ ಎಚ್.ವಿಜಯಲಕ್ಷ್ಮಿ ಮಾತನಾಡಿ, ಕೇಂದ್ರ ಸರ್ಕಾರವು…

ಉದ್ಯೋಗ ಖಾತ್ರಿ ಕೂಲಿಕಾರರಿಗೆ ವಂಚನೆ ಖಂಡಿಸಿ ಧರಣಿ
ಮಂಡ್ಯ

ಉದ್ಯೋಗ ಖಾತ್ರಿ ಕೂಲಿಕಾರರಿಗೆ ವಂಚನೆ ಖಂಡಿಸಿ ಧರಣಿ

July 7, 2018

ಮದ್ದೂರು:  ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಕೂಲಿ ನೀಡದೇ ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಆಬಲವಾಡಿ ಗ್ರಾಪಂ ಅಧಿಕಾರಿಗಳ ವಿರುದ್ಧ ಕೊಪ್ಪ ಹೋಬಳಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು, ಆಬಲವಾಡಿ, ಅವ್ವೇರಹಳ್ಳಿ, ನಂಬಿನಾಯಕನಹಳ್ಳಿ ಗ್ರಾಮಸ್ಥರು ಧರಣಿ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಜಯ ಕರ್ನಾಟಕ ಸಂಘಟನೆ ಕೊಪ್ಪ ಹೋಬಳಿ ಅಧ್ಯಕ್ಷ ಮೂಗೂರೇಗೌಡ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಸರಿಯಾಗಿ ಕೆಲಸ ನಿರ್ವಹಿಸದೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಉದ್ಯೋಗ ಖಾತ್ರಿ ಯೋಜನೆಯಡಿ ಶೌಚಾಲಯ,…

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಡಿ.ಸಿ.ತಮ್ಮಣ್ಣ
ಮಂಡ್ಯ

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಡಿ.ಸಿ.ತಮ್ಮಣ್ಣ

July 5, 2018

ಮದ್ದೂರು: ‘ನಾನು ಶಾಸಕನಾಗಿ ಬಂದ ಮೇಲೆ ಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಿದ್ದು, ಕಡಿಮೆ ವೆಚ್ಚದಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದೇ ನನ್ನ ಗುರಿಯಾಗಿದೆ’ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು. ತಾಲೂಕಿನ ಸಮೀಪದ ಸೋಮನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದ ಜಿಟಿಟಿಸಿ ಉಪಕೇಂದ್ರದ ನೂತನ ಆಡಳಿತ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 992ಲಕ್ಷ ರೂ. ವೆಚ್ಚ ದಡಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದ್ದು, ಬೆಂಗಳೂರಿನ ಪ್ರತಿಷ್ಠಿತ ಉಷಾ ಕನ್​ಷ್ಟ್ರಕ್ಷನ್  ಸಂಸ್ಥೆಯು ಈ…

ಕುಕ್ಕರ್ ವಿಷಲ್ ನುಂಗಿ ಮಗು ಸಾವು
ಮಂಡ್ಯ

ಕುಕ್ಕರ್ ವಿಷಲ್ ನುಂಗಿ ಮಗು ಸಾವು

July 2, 2018

ಮದ್ದೂರು: ಕುಕ್ಕರ್‌ನ ವಿಷಲ್ ನುಂಗಿ ಮಗು ಮೃತಪಟ್ಟಿರುವ ಘಟನೆ ತಾಲೂಕಿನ ನಗರಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕ ಜಿ.ಶಿವರಾಮಯ್ಯ ಅವರ ಪುತ್ರ ಮರಿನಿಂಗೇಗೌಡ, ರೂಪ ದಂಪತಿ ಪುತ್ರ ಭುವನ್‍ಗೌಡ(1) ಸಾವನ್ನಪ್ಪಿದ ಮಗು. ಶನಿವಾರ ರಾತ್ರಿ ಮಗುವಿನ ಅಜ್ಜಿ ಪುಟ್ಟ ಲಿಂಗಮ್ಮ ಅವರು ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಅಲ್ಲೇ ಇದ್ದ ಕುಕ್ಕರ್‍ನ ವಿಷಲ್ ಅನ್ನು ಮಗು ಭುವನ್‍ಗೌಡ ಬಾಯಿಗೆ ಹಾಕಿಕೊಂಡು ಆಟವಾಡುತ್ತಿತ್ತು. ಈ ವೇಳೆ ಬಾಯಲಿದ್ದ ವಿಷಲ್ ಅನ್ನು ಮಗು ನುಂಗಿದೆ….

1 2 3 4 5
Translate »