ಮಡಿಕೇರಿ: ನಗರದ ಜಿಲ್ಲಾಸ್ಪತ್ರೆಗೆ ಆಧುನಿಕ ತಂತ್ರಜ್ಞಾನದ ವೈದ್ಯಕೀಯ ಸ್ಪರ್ಶ ದೊರಕಿದ್ದು, ಜಿಲ್ಲೆಯ ಜನತೆಯ ಹಲವು ದಶಕಗಳ ಕನಸು ನನಸಾಗಿದೆ. ಜಿಲ್ಲಾಸ್ಪತ್ರೆಗೆ ರಾಜ್ಯ ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅತ್ಯಾಧುನಿಕ ಸಿಟಿ ಸ್ಕ್ಯಾನಿಂಗ್ ಯಂತ್ರ ಅಳವಡಿಸಲಾಗಿದ್ದು, ಕೆಲವೇ ದಿನಗಳಲ್ಲಿ ಆರೋಗ್ಯ ಸೇವೆಗೆ ಲಭ್ಯವಾಗಲಿದೆ. ಅಂದಾಜು 2 ಕೋಟಿ ರೂ.ಗಳ ವೆಚ್ಚದ ಸಿಟಿ ಸ್ಕ್ಯಾನಿಂಗ್ ಮಿಷಿನ್ ಅಳವಡಿಸಿದ್ದು, ಈಗಾಗಲೇ ನೂರಕ್ಕೂ ಹೆಚ್ಚು ರೋಗಿಗಳಿಗೆ ತುರ್ತು ಸೇವೆಯ ಆಧಾರದ ಮೇಲೆ ಸ್ಕ್ಯಾನಿಂಗ್ ಸೇವೆ ನೀಡಲಾಗಿದೆ. ಜಿಲ್ಲೆಯ ಕೆಲ ಬೆರಳೆಣಿಕೆಯ ಖಾಸಗಿ ಆಸ್ಪತ್ರೆಯಲ್ಲಿ…